ಮಾದಕ ವ್ಯಸನದಿಂದ ಕುಟುಂಬಕ್ಕೂ ತೊಂದರೆ

gangolli
gangolli
Published on

ಕುಂದಾಪುರ: ಇಂದಿನ ಯುವಜನತೆ ವಾದಕ ವಸ್ತುಗಳ ದಾಸರಾಗುತ್ತಿರುವುದು ಅಪಾಯಕಾರಿ ಸಂಗತಿಯಾಗಿದೆ. ವಾದಕ ವ್ಯಸನ ವಾಡಿದ ವ್ಯಕ್ತಿಗೆ ವಾತ್ರವಲ್ಲದೆ ಕುಟುಂಬವೂ ಅದರ ಪರಿಣಾಮಕ್ಕೆ ಕಾರಣರಾಗುತ್ತಾರೆ ಎಂದು ಕೋಟ ಪೊಲೀಸ್ ಠಾಣೆ ಸಬ್ ಇನ್‌ಸ್ಪೆಕ್ಟರ್ ರಾಘವೇಂದ್ರ ಸಿ. ಹೇಳಿದರು.

ಸುಣ್ಣಾರಿಯ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಹಾಗೂ ಹೈಸ್ಕೂಲ್ ಆಶ್ರಯದಲ್ಲಿ ಕಾನೂನು ಅರಿವು ಮತ್ತು ನಶಾಮುಕ್ತ ಭಾರತ ಎಂಬ ಸಾವಾಜಿಕ ಕಳಕಳಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಎಕ್ಸಲೆಂಟ್ ಸಂಸ್ಥೆ ಅಧ್ಯಕ್ಷ ಎಂ.ಮಹೇಶ್ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿಗಳು ವಾದಕ ದ್ರವ್ಯ ವ್ಯಸನದ ವಿರುದ್ಧ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ನಾಗರಾಜ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೌಢಶಾಲಾ ಮುಖ್ಯಶಿಕ್ಷಕಿ ಸರೋಜಿನಿ ಪಿ. ಆಚಾರ್ಯ ಸ್ವಾಗತಿಸಿದರು. ಉಪನ್ಯಾಸಕ ಶ್ರೀನಿವಾಸ ವೈದ್ಯ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net