ಮನೆಯಿಂದಲೇ ಜಾಗೃತಿ ಪ್ರಾರಂಭ

ಉಡುಪಿ: ಮಾದಕ ವಸ್ತುಗಳ ದುಷ್ಪರಿಣಾಮಗಳ ಅರಿವು ಮೂಡಿಸುವ ಕಾರ್ಯಕ್ರಮ ಪ್ರತಿ ಮನೆ ಮನೆಗಳಿಂದ ಆರಂಭವಾಗಬೇಕು ಎಂದು ಉಡುಪಿ ತಾಲೂಕು ಪಂಚಾಯಿತಿ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್ ಹೇಳಿದರು.
ಎಂಜಿಎಂ ಕಾಲೇಜಿನ ನ ನೂತನ ರವೀಂದ್ರ ಮಂಟಪದಲ್ಲಿ ಬುಧವಾರ ಜಿಲ್ಲಾಡಳಿತ ಉಡುಪಿ ಜಿಲ್ಲೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಡುಪಿ, ಎಂ.ಜಿ.ಎಂ. ಕಾಲೇಜು ಉಡುಪಿ, ಮಹಾತ್ಮ ಗಾಂಧಿ ಸ್ಮಾರಕ ನಿಧಿ ಎಂ.ಜಿ.ಎಂ, ರಾಷ್ಟ್ರೀಯ ಸೇವಾ ಯೋಜನೆ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ವಿಶ್ವ ಮಾದಕ ವಸ್ತು ವಿರೋಧಿ ಸಪ್ತಾಹ ಉದ್ಘಾಟಿಸಿ ಮಾತನಾಡಿದರು.

ಮನೆಗಳಲ್ಲಿ ಪೋಷಕರು ಧೂಮಪಾನ, ಮದ್ಯಪಾನ ಮಾಡುತ್ತಿದ್ದರೆ ಅದರ ಪರಿಣಾಮ ಮಕ್ಕಳ ಮೇಲಾಗುತ್ತದೆ. ಪೋಷಕರು ಮಾದಕ ವಸ್ತುಗಳ ಸೇವನೆಯಿಂದ ದೂರವಿದ್ದು, ಮಕ್ಕಳಿಗೆ ಇವುಗಳ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಬೇಕು ಎಂದರು. ಮುಖ್ಯ ಅತಿಥಿಯಾಗಿದ್ದ ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಮಾತನಾಡಿದರು.

ಎಂಜಿಎಂ ಕಾಲೇಜಿನ ಗಾಂಧಿ ಅಧ್ಯಯನ ಸಂಸ್ಥೆ ಸಂಶೋಧಕ ವಿನೀತ್ ರಾವ್ ಮಾತನಾಡಿದರು. ಮಣಿಪಾಲ ಕೆಎಂಸಿಯ ಮನೋವಿಜ್ಞಾನ ವಿಭಾಗದ ವೈದ್ಯ ಡಾ.ರವೀಂದ್ರ ಮನೋಳಿ, ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು. ಎಂಜಿಎಂ ಕಾಲೇಜಿನ ಪ್ರಾಂಶುಪಾಲ ಎಂ.ಜಿ.ವಿಜಯ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಮದ್ಯಪಾನ ಸಂಯಮ ಮಂಡಳಿ ಕಾರ್ಯದರ್ಶಿ ರೋಹಿಣಿ ಕೆ.ಸ್ವಾಗತಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಿರಿಯ ತಾಂತ್ರಿಕ ಮೇಲ್ವಿಚಾರಕಿ ಪೂರ್ಣಿಮಾ ಕಾರ್ಯ ಕ್ರಮ ನಿರೂಪಿಸಿದರು. ಜಿಲ್ಲಾ ವಾರ್ತಾಧಿಕಾರಿ ಬಿ.ಎ.ಖಾದರ್ ಷಾ ವಂದಿಸಿದರು. ಕಾರ್ಯಕ್ರಮಕ್ಕೆ ಮುನ್ನ ನಗರದ ಬೋರ್ಡ್ ಹೈಸ್ಕೂಲ್‌ನಿಂದ ಎಂಜಿಎಂ ಕಾಲೇಜುವರೆಗೆ ಜಾಥಾ ನಡೆಯಿತು. ಜಾಥಾಕ್ಕೆ ಜಿಲ್ಲಾ ಪೊಲೀಸ್ ಅಧೀಕ್ಷಕಿ ನಿಶಾ ಜೇಮ್ಸ್ ಚಾಲನೆ ನೀಡಿದರು.

 ಯುವ ಜನತೆ ಮಾದಕ ವಸ್ತುಗಳ ಕ್ಷಣಿಕ ಸುಖಕ್ಕೆ ಬಲಿಯಾಗದೆ, ಜೀವನದಲ್ಲಿ ಸ್ಪಷ್ಟ ಗುರಿ ಹೊಂದಿರಬೇಕು. ಮಾದಕ ವ್ಯಸನಿಗಳನ್ನು ಗುರುತಿಸಿ ಅವರನ್ನು ವ್ಯಸನ ಮುಕ್ತರನ್ನಾಗಿ ಮಾಡಬೇಕು. ವಿದ್ಯಾರ್ಥಿಗಳು ಸಮಾಜಮುಖಿ ಕಾರ್ಯದಲ್ಲಿ ತೊಡಗಿ ಸಮಾಜಕ್ಕೆ ಕೊಡುಗೆ ನೀಡಬೇಕು.
ವಿದ್ಯಾಕುಮಾರಿ ಅಪರ ಜಿಲ್ಲಾಧಿಕಾರಿ, ಉಡುಪಿ

Leave a Reply

Your email address will not be published. Required fields are marked *