More

  ಮಾದಕ ವಸ್ತುಗಳ ಸೇವನೆಯಿಂದ ಗಂಭೀರ ಆರೋಗ್ಯ ಸಮಸ್ಯೆಗಳು

  ಕೊಪ್ಪಳ: ಮಾದಕ ವಸ್ತುಗಳ ಸೇವನೆಯಿಂದ ಅಲ್ಪಾವಧಿ ಮತ್ತು ದೀರ್ಘಾವಧಿ ಗಂಭೀರ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಇದು ಜೀವ ಮತ್ತು ಜೀವನಕ್ಕೆ ಅಪಾಯಕಾರಿ ಎಂದು ಜಿಲ್ಲಾ ನ್ಯಾಯಾಧೀಶ ಸಿ.ಚಂದ್ರಶೇಖರ್ ಹೇಳಿದರು.

  ನಗರದ ಗವಿಸಿದ್ದೇಶ್ವರ ಕಾಲೇಜಿನಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮಾದಕ ದ್ರವ್ಯ, ವಸ್ತುಗಳ ದುಷ್ಪರಿಣಾಮ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

  ಸಾಮಾನ್ಯವಾಗಿ ಯುವಕರು ತಮ್ಮ ಸ್ನೇಹಿತರ ಮೂಲಕ ಮಾದಕ ವಸ್ತುಗಳ ಬಳಕೆ ಚಟ ಅಂಟಿಸಿಕೊಳ್ಳುತ್ತಾರೆ. ಇದರಿಂದ ಮಾನಸಿಕ ಆರೋಗ್ಯ ಹಾಳಾಗುತ್ತದೆ. ಕುಟುಂಬ ವಾತಾವರಣ, ನೆಮ್ಮದಿ ಕಸಿಯುತ್ತದೆ. ಯುವಕರು ದೇಶದ ಆಸ್ತಿ. ದುಷ್ಚಟಕ್ಕೆ ಬಲಿಯಾಗಿ ಜೀವನ ಹಾಳು ಮಾಡಿಕೊಳ್ಳಬೇಡಿ. ಮಾದಕ ದ್ರವ್ಯಗಳಿಂದ ದೂರವಿರಿ ಎಂದರು.

  ಹಿರಿಯ ಸಿವಿಲ್ ನ್ಯಾಯಾಧೀಶ ದೇವೇಂದ್ರ ಪಂಡಿತ್ ಮಾತನಾಡಿ, ಕೋಟ್ಪಾ ಅಡಿ ಶೈಕ್ಷಣಿಕ ಸಂಸ್ಥೆಗಳ 100 ಮೀ.ವ್ಯಾಪ್ತಿಯಲ್ಲಿ ತಂಬಾಕು ಮತ್ತು ತಂಬಾಕು ಉತ್ಪನ್ನ ಮಾರಾಟ ಮಾಡುವಂತಿಲ್ಲ. ಮಕ್ಕಳ ನ್ಯಾಯ (ಮಕ್ಕಳ ಪೋಷಣೆ ಮತ್ತು ರಕ್ಷಣೆ) ಕಾಯ್ದೆ-2015ರನ್ವಯ 18 ವರ್ಷದೊಳಗಿನ ಮಕ್ಕಳಿಗೆ ಮಾದಕ ವಸ್ತುಗಳನ್ನು ನೀಡುವಂತಿಲ್ಲ. ಈ ಕಾಯ್ದೆಗಳ ಮುಖ್ಯ ಉದ್ದೇಶ ಮಕ್ಕಳು ಯಾವುದೇ ರೀತಿಯ ಮಾದಕ ವಸ್ತುಗಳನ್ನು ಬಳಸುವುದನ್ನು ನಿಷೇಧಿಸುವುದಾಗಿದೆ ಎಂದರು.

  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿದೇರ್ಶಕ ತಿಪ್ಪಣ್ಣ ಶಿರಸಂಗಿ ಮಾತನಾಡಿದರು. ಮಹಿಳಾ ಪೊಲೀಸ್ ಠಾಣೆ ಪಿಐ ಆಂಜನೇಯ ಡಿ.ಎಸ್., ಸೈಬರ್ ಠಾಣೆ ಪಿಐ ಅಮರೇಶ ಹುಬ್ಬಳ್ಳಿ ಉಪನ್ಯಾಸ ನೀಡಿದರು. ಪ್ರಾಚಾರ್ಯ ಡಾ.ವಿರೇಶ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎ.ವಿ.ಕಣವಿ, ಉಪಾಧ್ಯಕ್ಷ ದಿವಾಕರ ಬಾಗಲಕೋಟೆ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರೋಹಿಣಿ ಕೊಟಗಾರ ಇತರರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts