

ಬೆಂಗಳೂರು: ಸ್ಯಾಂಡಲ್ವುಡ್ನ 'ಮಾದಕ' ನಟಿ ರಾಗಿಣಿ ದ್ವಿವೇದಿಯನ್ನು ಮತ್ತೆ ಐದು ದಿನ ಸಿಸಿಬಿ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ.
ಡ್ರಗ್ಸ್ ಮಾಫಿಯಾದಲ್ಲಿ ಕನ್ನಡ ಸಿನಿಮಾ ನಟ-ನಟಿಯರಿಗೆ ನಂಟಿದೆ ಪ್ರಕರಣದಲ್ಲಿ ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಪಟ್ಟಿರುವ ರಾಗಿಣಿಯನ್ನು ಸೆ.11ರವರೆಗೂ ಸಿಸಿಬಿ ವಶಕ್ಕೆ ಪಡೆಯುವಂತೆ 1ನೇ ಎಸಿಎಂಎಂ ಕೋರ್ಟಿನ ನ್ಯಾಯಾಧೀಶ ಜಗದೀಶ್ ಆದೇಶಿಸಿದ್ದಾರೆ.
ಇದನ್ನೂ ಓದಿರಿ ಓಪನ್ ಏರ್ ಥಿಯೇಟರ್ ಪಾರ್ಟಿಯಲ್ಲೂ ಡ್ರಗ್ಸ್ ನಶೆ!
ಮೂರು ದಿನವಾದರೂ ತನಿಖೆಗೆ ಸಹಕರಿಸದ ರಾಗಿಣಿಯನ್ನು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡುವಂತೆ ಸಿಸಿಬಿ ಮನವಿ ಮಾಡಿತು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ರಾಗಿಣಿಯನ್ನು ಪಡೆಯುವಂತೆ ಆದೇಶಿಸಿದರು.
ಬಂಧನಕ್ಕೂ ಮೊದಲೇ ರಾಗಿಣಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ರಾಗಿಣಿ ಪರ ಸುದರ್ಶನ್ ವಕೀಲರು ವಾಪಸ್ ಪಡೆದಿದ್ದಾರೆ. ಈಗಾಗಲೇ ನಟಿ ಸಿಸಿಬಿ ಬಂಧನದಲ್ಲಿದ್ದಾರೆ. ಹಾಗಾಗಿ ಈ ಅರ್ಜಿಯನ್ನು ಹಿಂಪಡೆಯಲಾಗಿದೆ. ಸದ್ಯ ಜಾಮೀನು ಕೋರಿ ರಾಗಿಣಿ ಹೊಸ ಅರ್ಜಿ ಸಲ್ಲಿಸಿದ್ದಾರೆ.