More

    ಗಾಂಜಾ ಹಾವಳಿ-ಗೃಹ ಸಚಿವರ ವಿರುದ್ಧ ಎನ್‌ಎಸ್‌ಯುಐ ಪ್ರತಿಭಟನೆ

    ಶಿವಮೊಗ್ಗ: ಜಿಲ್ಲೆಯಲ್ಲಿ ಗಾಂಜಾ ಮತ್ತಿತರ ಮಾದಕ ವಸ್ತುಗಳ ಹಾವಳಿ ಹೆಚ್ಚುತ್ತಿದ್ದರೂ ಅದನ್ನು ನಿಯಂತ್ರಿಸುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಎನ್‌ಎಸ್‌ಯುಐ ಕಾರ್ಯಕರ್ತರು ಮಂಗಳವಾರ ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
    ಗೃಹ ಸಚಿವರ ತವರು ಜಿಲ್ಲೆಯಲ್ಲೇ ಗಾಂಜಾ ಮುಂತಾದ ಮಾದಕ ವಸ್ತುಗಳ ಬಳಕೆ, ಸಾಗಣೆ ಪ್ರಕರಣಗಳು ಹೆಚ್ಚಾಗುತ್ತಿದೆ. ಬಹುತೇಕ ಕಾಲೇಜಿನ ವಿದ್ಯಾರ್ಥಿಗಳು ಗಾಂಜಾ, ಮಾದಕ ವಸ್ತುಗಳ ವ್ಯಸನಕ್ಕೆ ತುತ್ತಾಗುತ್ತಿದ್ದಾರೆ. ಶಾಲಾ-ಕಾಲೇಜುಗಳ ಆವರಣದಲ್ಲಿ ಗಾಂಜಾ, ಮಾದಕ ವಸ್ತುಗಳ ಬಳಕೆ ಹೆಚ್ಚಾಗುತ್ತಿದೆ. ಇತ್ತೀಚೆಗೆ ಪ್ರತಿಷ್ಠಿತ ಕಾಲೇಜಿನ ಎದುರಿನಲ್ಲಿಯೇ ವಿದ್ಯಾರ್ಥಿಗಳು ನಶೆಯಲ್ಲಿ ಬಿದ್ದು ಒದ್ದಾಡುತ್ತಿರುವ ವೀಡಿಯೋ ವೈರಲ್ ಆಗಿದೆ ಎಂದು ಪ್ರತಿಭಟನಾಕಾರರು ಆತಂಕ ವ್ಯಕ್ತಪಡಿಸಿದರು.
    ಗಾಂಜಾ ಮಾರಾಟ ಹಾಗೂ ಬಳಕೆ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಬೇಕು. ಗೃಹ ಇಲಾಖೆ ನಿರ್ವಹಿಸುವಲ್ಲಿ ವಿಫಲರಾಗಿರುವ ಸಚಿವ ಆರಗ ಜ್ಞಾನೇಂದ್ರ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
    ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಎಸ್.ಎನ್.ವಿಜಯಕುಮಾರ್, ನಗರ ಘಟಕದ ಅಧ್ಯಕ್ಷ ಚರಣ್, ಗ್ರಾಮಾಂತರ ಅಧ್ಯಕ್ಷ ಹರ್ಷಿತ್, ಪ್ರಮುಖರಾದ ವಿಶಾಲ್, ಕಿರಣ್, ಸಚ್ಚಿನ್, ಸೋನು, ಪ್ರದೀಪ್, ಗಗನ್ ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts