More

    ಸಿಸಿಬಿಯಿಂದ 5 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, ಜಾಲ ಹಿಂದೆ ದೊಡ್ಡ ಕೈಗಳು..?

    ಬೆಂಗಳೂರು: ರಾಜಧಾನಿಯಲ್ಲಿ ಮಾದಕ ದ್ರವ್ಯದ ವಿರುದ್ಧ ಕಾರ್ಯಾಚರಣೆ ಮುಂದುವರಿಸಿರುವ ಸಿಸಿಬಿ ಪೊಲೀಸರು, 8 ವಿದೇಶಿ ಪೆಡ್ಲರ್‌ಗಳು ಸೇರಿದಂತೆ 10 ಮಂದಿಯನ್ನು ಬಂಧಿಸಿದ್ದಾರೆ. 5 ಕೋಟಿ ರೂ. ಮೌಲ್ಯದ ಮಾದಕ ದ್ರವ್ಯ ಜಪ್ತಿ ಮಾಡಿದ್ದಾರೆ.

    ಕಳೆದ 15 ದಿನಗಳಲ್ಲಿ ಕಾಡುಗೋಡಿ, ಕೆ.ಆರ್.ಪುರ, ಸೋಲದೇವನಹಳ್ಳಿ, ಎಚ್‌ಎಸ್‌ಆರ್ ಲೇಔಟ್, ವೈಟ್‌ಫೀಲ್ಡ್, ಬಾಣಸವಾಡಿ, ಪರಪ್ಪನ ಅಗ್ರಹಾರ ಠಾಣೆಗಳ ವ್ಯಾಪ್ತಿಯಲ್ಲಿ ಸಿಸಿಬಿ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ 10 ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ. 5.04 ಕೋಟಿ ರೂ. ಮೌಲ್ಯದ ಎಂಡಿಎಂಎ ಕ್ರಿಸ್ಟೆಲ್ ಮಾದಕ 3,806 ಕೆ.ಜಿ. ಕೊಕ್ಕೇನ್ 50 ಗ್ರಾಂ., ಎಕ್ಸಿಡ್ ಪಿಲ್ಸ್ ಪಿಲ್ಸ್ 25, ಗಾಂಜಾ 5 ಕೆಜಿ, 1 ಕಾರು, 3 ಬೈಕ್, 9 ಮೊಬೈಲ್ಗಳನ್ನು ವಶಕ್ಕೆ ಪಡೆದಿದ್ದಾರೆ.

    ಕಡಿಮೆ ಸಮಯದಲ್ಲಿ ಹೆಚ್ಚಿನ ಲಾಭ ಗಳಿಸುವ ಸಲುವಾಗಿ ಬೇರೆಡೆಯಿಂದ ಮಾದಕ ದ್ರವ್ಯವನ್ನು ತಂದು ಪರಿಚಯಸ್ಥ ಗಿರಾಕಿಗಳಿಗೆ, ಕಾಲೇಜು ವಿದ್ಯಾರ್ಥಿಗಳಿಗೆ, ಟೆಕ್ಕಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಹಣ ಸಂಪಾದನೆ ಮಾಡುತ್ತಿದ್ದರು. ಮಾದಕ ದ್ರವ್ಯದ ವಿರುದ್ಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts