VIDEO| ಜನನಿಬಿಡ ಪ್ರದೇಶದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಪೊಲೀಸ್ ಅಧಿಕಾರಿ​ಗೆ ಪಬ್ಲಿಕ್​ ಪ್ಲೇಸ್​​ನಲ್ಲೇ ಬಿತ್ತು ಗೂಸಾ

Drunk Police
Published on

ಪಟ್ನಾ: ಕುಡಿದ ಮತ್ತಿನಲ್ಲಿ ಪೊಲೀಸ್​ ಅಧಿಕಾರಿಯೋರ್ವ ಜನನಿಬಿಡ ಪ್ರದೇಶದಲ್ಲಿ ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸಾರ್ವಜನಿಕರು ಹಿಡಿದು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಬಿಹಾರದ ಪಟ್ನಾದಲ್ಲಿ ನಡೆದಿದೆ.

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಸಾಕಷ್ಟು ಖಂಡನೆಗೆ ಗುರಿಯಾಗಿದೆ. ಆರೋಪಿ ಅಧಿಕಾರಿ ಶೇರ್​ ಸಿಂಗ್​ನನ್ನು ಸೇವೆಯಿಂದ ಅಮಾನತು ಮಾಡಲಾಗಿದ್ದು, ಹಿರಿಯ ಅಧಿಕಾರಿಗಳು ತನಿಖೆಗೆ ಆದೇಶಿಸಿದ್ದಾರೆ.

ವಯರಲ್​ ಆಗಿರುವ ವಿಡಿಯೋದಲ್ಲಿ ಕುಡಿದ ಮತ್ತಿನಲ್ಲಿ ಪೊಲೀಸ್​ ಅಧಿಕಾರಿ ತೂರಾಡುತ್ತ ಸಾರ್ವಜನಿಕರಿಂದ ತಪ್ಪಿಸಿಕೊಳ್ಲಲು ಯತ್ನಿಸುತ್ತಿರುವುದನ್ನು ಕಾಣಬುದಾಗಿದೆ. ಈತನ ಬೆನ್ನು ಬಿದ್ದಿರುವ ಸಾರ್ವಜನಿಕರು ಆತನನ್ನು ಥಳಿಸುತ್ತಿದ್ದು, ಬಳಿಕ ಆತ ತಪ್ಪಿಸಿಕೊಂಡು ಪೊಲೀಸ್​ ವಾಹನದಲ್ಲಿ ಕುಳಿತು ರಕ್ಷಣೆ ಪಡೆಯುವುದನ್ನು ನೋಡಬಹುದಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಆರೋಪಿ ಶೇರ್​ ಸಿಂಗ್​ ಎಎಸ್​ಐ ಆಗಿ ಕಾರ್ಯನಿರ್ವಹಿಸುತ್ತಿದ್ದು, ಸಾರ್ವಜನಿಕ ಪ್ರದೇಶದಲ್ಲಿ ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವುದು ನಮ್ಮ ಗಮನಕ್ಕೆ ಬಂದಿದೆ. ಈತನ ಬಗ್ಗೆ ಈಗಾಗಲೇ ಹಲವು ಬಾರಿ ದೂರುಗಳು ಕೇಳಿ ಬಂದಿದ್ದು, ಆತನನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಘಟನೆ ಸಂಬಂಧ ತನಿಖೆಗೆ ಆದೇಶಿಸಲಾಗಿದ್ದು, ವಿಸ್ತೃತ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹಿರಿಯ ಪೊಲೀಸ್​ ಆಫೀಸರ್​ ಒಬ್ಬರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net