

ಮಾಲ್ಪುರ: ಊಟದೊಂದಿಎಗ ಮೊಸರ ಬಜ್ಜಿಯನ್ನು ನೀಡಲಿಲ್ಲ ಎಂಬ ಕ್ಷುಲಕ ಕಾರಣಕ್ಕೆ ಇಬ್ಬರು ಪೊಲೀಸ್ ಅಧಿಕಾರಿಗಳು ಹೋಟೆಲ್ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ರಾಜಸ್ಥಾನದ ಮಾಲ್ಪುರದ ಗ್ವಾಲಿಯರ್ ಹೆದ್ದಾರಿಯಲ್ಲಿ ನಡೆದಿದೆ.
ಹಲ್ಲೆ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾಕಷ್ಟು ಖಂಡನೆಗೆ ಗುರಿಯಾಗಿದೆ. ಹಲ್ಲೆ ನಡೆಸಿದ ಇಬ್ಬರು ಅಧಿಕಾರಿಗಳು ಪಾನಮತ್ತರಾಗಿದ್ದರು ಎಂದು ತಿಳಿದು ಬಂದಿದೆ.
ಕಾಕುವಾ ಅಮನ್ ಸಿಂಗ್ ಹಾಗೂ ನೀತು ಸಿಂಗ್ ಎಂದು ಗುರುತಿಸಲಾಗಿದ್ದು, ಇವರಿಬ್ಬರು ಕುಡಿದು ಗಲಾಟೆ ಮಾಡಿದ್ದಲ್ಲದೆ ಹೋಟೆಲ್ನಲ್ಲಿದ್ದ ಗ್ರಾಹಕರು ಹಾಗೂ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಈ ಸಂಬಂಧ ಹಿರಿಯ ಹಿರಿಯ ಅಧಿಕಾರಿಗಳು ದೂರು ದಾಖಲಿಸಿಕೊಂಡಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ತಿಳಿಸಿದ್ದಾರೆ.