ಕುಡಿದ ಅಮಲಿನಲ್ಲಿ ಒಂಟಿ ಮಹಿಳೆ ಇದ್ದ ಮನೆಗೆ ನಡುರಾತ್ರಿ ನುಗ್ಗಿದ! ಮುಂದೆ ಆಗಿದ್ದೆಲ್ಲವೂ ಅವಾಂತರ

crime
Published on

ಯಾದಗಿರಿ: ಕುಡಿದ ಮತ್ತಿನಲ್ಲಿ ನಡುರಾತ್ರಿ ಒಂಟಿ ಮಹಿಳೆಯ ಮನೆಗೆ ನುಗ್ಗಿದ ಕಾಮುಕನಿಗೆ ರಾತ್ರಿ ಇಡೀ ಮರಕ್ಕೆ ಕಟ್ಟಿ ಗ್ರಾಮಸ್ಥರು ಧರ್ಮದೇಟು ನೀಡಿದ್ದು, ವಿಡಿಯೋ ವೈರಲ್​ ಆಗಿದೆ.

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಈ ಘಟನೆ ಸಂಭವಿಸಿದೆ. ಇದನ್ನೂ ಓದಿರಿ ವಿದ್ಯಾರ್ಥಿನಿ ಜತೆ ಲೆಕ್ಚರರ್​ ಮಗನ ಕಾಮಪುರಾಣ! 3 ವರ್ಷದಿಂದ ಲವ್​-ಸೆಕ್ಸ್​-ಅಬಾರ್ಷನ್​​: ಮುಂದೇನಾಯ್ತು?

ಒಂಟಿ ಮಹಿಳೆ ವಾಸವಿದ್ದ ಮನೆಗೆ ವ್ಯಕ್ತಿಯೊಬ್ಬ ನುಗ್ಗಿದಾಗ ಮಹಿಳೆ ಭಯಗೊಂಡು ಚೀರಾಡಿದ್ದಾಳೆ. ಸ್ಥಳಕ್ಕೆ ದೌಡಾಯಿಸಿದ ಸ್ಥಳೀಯರು ಆತನನ್ನ ಹಿಡಿದು ಕೈ-ಕಾಲಿಗೆ ಹಗ್ಗ ಕಟ್ಟಿ, ಮರಕ್ಕೆ‌ ಕಟ್ಟಿ ಹಾಕಿದರು. ಹಿಗ್ಗಾಮುಗ್ಗಾ ಥಳಿಸುತ್ತಿದ್ದಂತೆ, 'ತಪ್ಪಾಗಿದೆ ಬಿಟ್ಟು ಬಿಡಿ' ಎಂದು ಕಾಮುಕ ಅಂಗಲಾಚಿದ್ದಾನೆ.

ಮರ್ಯಾದೆಗೆ ಹೆದರಿ ಸಂತ್ರಸ್ತ ಮಹಿಳೆ ಪ್ರಕರಣ ದಾಖಲಿಸಲು ಹಿಂದೇಟು ಹಾಕಿದ್ದಾರೆ ಎನ್ನಲಾಗಿದೆ. ವ್ಯಕ್ತಿಯನ್ನ ಮರಕ್ಕೆ ಕಟ್ಟಿ ಶಿಕ್ಷೆ ನೀಡಿರೋ ವಿಡಿಯೋ ವೈರಲ್ ಆಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net