More

    ಮೂರುಸಾವಿರ ಮಠದ ಆವರಣದಲ್ಲಿ ಮೆಣಸಿನ ಘಾಟು

    ಹುಬ್ಬಳ್ಳಿ: ರಾಜ್ಯ ಸಾಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿ, ತೋಟಗಾರಿಕೆ ಇಲಾಖೆ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ, ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ, ಅಮರಶಿವ ಹಾಗೂ ಉಳುವಾಯೋಗಿ ರೈತ ಉತ್ಪಾದಕ ಸಂಸ್ಥೆಗಳ ಸಹಯೋಗದಲ್ಲಿ ಹುಬ್ಬಳ್ಳಿ ಮೂರುಸಾವಿರ ಮಠದ ಆವರಣದಲ್ಲಿ 3 ದಿನಗಳವರೆಗೆ ಒಣಮೆಣಸಿನಕಾಯಿ ಮೇಳ ನಡೆಯಲಿದೆ.

    ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ, ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಮೇಳ ಉದ್ಘಾಟಿಸಿದರು. ಶಾಸಕರಾದ ಪ್ರಸಾದ ಅಬ್ಬಯ್ಯ, ಕುಸುಮಾವತಿ ಶಿವಳ್ಳಿ, ಎಂಎಲ್​ಸಿ ಬಸವರಾಜ ಹೊರಟ್ಟಿ, ತಾಪಂ ಅಧ್ಯಕ್ಷೆ ಚನ್ನಮ್ಮ ಶಿವನಗೌಡರ, ಸದಸ್ಯ ಫಕೀರಪ್ಪ ಹುಲ್ಲುಂಬಿ, ಸಾಂಬಾರು ಪದಾರ್ಥ ಅಭಿವೃದ್ಧಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಮಂಜುನಾಥ ನಾರಾಯಣಪೂರ, ಪ್ರಧಾನ ವ್ಯವಸ್ಥಾಪಕ ಚಿದಾನಂದಪ್ಪ ಪಿ.ಜಿ., ತೋಟಗಾರಿಕೆ ಇಲಾಖೆ ಉಪನಿರ್ದೇಶಕ ರಾಮಚಂದ್ರ ಮಡಿವಾಳರ, ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಬಾಲು ಪಾಟೀಲ ಇತರರು ಇದ್ದರು.

    ಹುಬ್ಬಳ್ಳಿಯಲ್ಲಿ ಫೆ. 14ರಂದು ಆಯೋಜಿಸಿರುವ ‘ಇನ್ವೆಸ್ಟ್ ಹುಬ್ಬಳ್ಳಿ’ ಸಮಾವೇಶದಲ್ಲಿ ಆಹಾರ ಸಂಸ್ಕರಣೆ ಮಾಡುವ ಕಂಪನಿಗಳು ಆಗಮಿಸಲಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ಬೆಳೆಯುವ ಆಹಾರ ಬೆಳೆಗಳಿಗೆ ಉತ್ತಮ ಮೌಲ್ಯ ದೊರೆಯಲಿದೆ ಎಂದು ಸಚಿವ ಜಗದೀಶ ಶೆಟ್ಟರ್ ಹೇಳಿದರು.

    ನಗರದಲ್ಲಿ ಶನಿವಾರ ಒಣಮೆಣಸಿನಕಾಯಿ ಮೇಳ ಉದ್ಘಾಟಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತರೆ ಆಹಾರ ಪದಾರ್ಥಗಳ ಮೇಳ ಆಯೋಜಿಸಲು ಅನುಕೂಲ ವಾಗುವಂತೆ ಹುಬ್ಬಳ್ಳಿ ಎಪಿಎಂಸಿ ಆವರಣದ 9 ಎಕರೆ ಜಾಗದಲ್ಲಿ ಶಾಶ್ವತ ಸ್ಥಳ ಅಭಿವೃದ್ಧಿ ಪಡಿಸಲಾಗುವುದು ಎಂದರು.

    ಬೆಲೆ ಖಾರ: ಮೇಳದಲ್ಲಿ ಒಟ್ಟು 103 ಮಳಿಗೆಗಳನ್ನು ಸ್ಥಾಪಿಸಲಾಗಿದೆ. ಇದರಲ್ಲಿ 63 ಮಾತ್ರ ಸದ್ಯ ಭರ್ತಿಯಾಗಿವೆ. 20 ಸಾವಿರದಿಂದ 38.000 ಸಾವಿರ ರೂ. ವರೆಗೆ ಧಾರಣೆ ಇದ್ದು, ಬೆಲೆ ಕೇಳಿ ಗ್ರಾಹಕರು ಹೌಹಾರುತ್ತಿದ್ದಾರೆ. ಕೆಲ ಮಳಿಗೆಗಳು ವ್ಯಾಪಾರಿಗಳಿಲ್ಲದೇ ಭಣಗುಡುತ್ತಿದ್ದವು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts