ಕಲಬುರಗಿಯಲ್ಲಿ ಬಿಜೆಪಿ ವಿರುದ್ಧ ದಲಿತರ ಪ್ರತಿಭಟನೆ : ಖರ್ಗೆ ಏಳಿಗೆ ಸಹಿದೆ ಒಳಸಂಚು ಸುರೇಶ ಹಾದಿಮನಿ ಕಿಡಿ

blank

ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ  ಮಾನವ ಸರಪಳಿ ನಿರ್ಮಿಸಿ ಆಕ್ರೋಶ

ವಿಜಯವಾಣಿ ಸುದ್ದಿಜಾಲ ಕಲಬುರಗಿ
ಬೀದರ್‌ನ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬAಧಿಸಿದAತೆ ವಿನಾಕಾರಣ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸುತ್ತಿರುವ ಬಿಜೆಪಿ ವಿರುದ್ಧ ಸಿಡಿದೆದ್ದ ದಲಿತರು ನಗರದಲ್ಲಿ ಸೋಮವಾರ ಮಿಂಚಿನ ಪ್ರತಿಭಟನೆ ನಡೆಸಿದರು. ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಮುಖಂಡರು ಜಿಲ್ಲಾ ಸಂಚಾಲಕ ಸುರೇಶ ಹಾದಿಮನಿ ನೇತೃತ್ವದಲ್ಲಿ ನಗರದ  ಜಿಲ್ಲಾಧಿಕಾರಿಗಳ  ಕಚೇರಿ ಮುಂಭಾಗಕ್ಕೆ ಮೆರವಣಿಗೆ ಮೂಲಕ ಆಗಮಿಸಿ ರಸ್ತೆಯಲ್ಲಿ ಮಾನವ ಸರಪಳಿ ನಿರ್ಮಿಸಿ ಶಕ್ತಿ ಪ್ರದರ್ಶನ ಮಾಡಿದರು. ಬಿಜೆಪಿ ಮುಖಂಡರ ವಿರುದ್ಧ ಘೋಷಣೆ ಕೂಗಿ ಧಿಕ್ಕಾರ ಹಾಕಿದರು.
ಪ್ರಿಯಾಂಕ್ ೧೫ ವರ್ಷಗಳಿಂದ ರಾಜಕೀಯ ಜೀವನದಲ್ಲಿದ್ದು ಕಪ್ಪು ಇಲ್ಲದ ವ್ಯಕ್ತಿಯಾಗಿದ್ದಾರೆ. ಸಚಿವರಾಗಿ ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿz್ದÁರೆ. ಆದರೆ, ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ವಿನಾಕಾರಣ ಅವರ ಹೆಸರನ್ನು ತರುವ ಮೂಲಕ ರಾಜೀನಾಮೆಗೆ ಆಗ್ರಹಿಸುತ್ತಿರುವುದು ನೋಡಿದಾಗ ಬಿಜೆಪಿಯವರಿಗೆ ಮತಿಭ್ರಮಣೆಯಾಗಿರುವಂತಿದೆ ಎಂದು ಹಾದಿಮನಿ ಆಕ್ರೋಶ ವ್ಯಕ್ತಪಡಿಸಿದರು.
ಶೋಷಿತ ಸಮುದಾಯದ ಯುವ ನಾಯಕನಾಗಿ ಬೆಳೆಯುತ್ತಿರುವುದು ಬಿಜೆಪಿಯವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಹೀಗಾಗಿ ಇಲ್ಲದ ಸಂಚು ಮಾಡುತ್ತಿದ್ದಾರೆ. ಅವರಿಗೆ ಸಂಬAಧವೇ ಇಲ್ಲದ ವಿಷಯದಲ್ಲಿ ಹೆಸರು ತಳಕು ಹಾಕಲಾಗುತ್ತಿದೆ. ಈ ಕೆಲಸವನ್ನು ಕೂಡಲೇ ನಿಲ್ಲಿಸುವಂತೆ ಆಗ್ರಹಿಸಿದರು. ಸುಳ್ಳು ಆರೋಪ ಮಾಡುತ್ತಿರುವ ಬಿಜೆಪಿಯವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ನೀಚ ಬುದ್ಧಿಯ ಬಿಜೆಪಿಗರು ಸದಾ ಶೋಷಿತರ ವಿರುದ್ಧ ಪಿತೂರಿ ಮಾಡಿಕೊಂಡು ಬರುತ್ತಿದ್ದಾರೆ. ಸುಳ್ಳು ಆರೋಪ ಮಾಡಿ, ರಾಜೀನಾಮೆ ಕೇಳುವ ನೈತಿಕತೆ ಅವರಿಗಿಲ್ಲ ಎಂದು ಪ್ರತಿಭಟನಾಕಾರರು ತಿರುಗೇಟು ನೀಡಿದರು. ಪ್ರತಿಭಟನೆಯಲ್ಲಿ ಮುಖಂಡರಾದ ಎನ್.ಶಂಕರ, ಕೃಷ್ಣಪ್ಪ ಕರಣಿಕ್, ಉಮೇಶ ನರೋಣಾ, ಸುಭಾಷ ಡಾಂಗೆ, ಜೈಭೀಮ ಕೊರಳ್ಳಿ, ದೇವೇಂದ್ರ ದೊಡ್ಡಮನಿ, ನಾಗಪ್ಪ ಕೋರಿ ಮೊದಲಾದವರು ಪಾಲ್ಗೊಂಡಿದ್ದರು.
====

Share This Article

ಹೋಟೆಲ್​ ಸ್ಟೈಲ್​​ ಪನೀರ್ ಅಮೃತಸರಿ ಮಾಡುವ ವಿಧಾನ ಇಲ್ಲಿದೆ; ನೀವೊಮ್ಮೆ ಟ್ರೈ ಮಾಡಿ | Recipe

ಹಲವು ಬಾರಿ ಒಂದೇ ರೀತಿಯ ಆಹಾರ ತಿಂದು ಬೇಸರವಾಗುತ್ತದೆ. ಆಗ ಹೋಟೆಲ್‌ಗೆ ಹೋಗಿ ಊಟ ಮಾಡಲು…

ಚಿನ್ನದ ಮೇಲೆ ಲೋನ್​ ತಗೋತ್ತಿದ್ದೀರಾ? ಹಾಗಿದ್ರೆ ಈ ತಪ್ಪುಗಳಿಂದ ಮೊದಲು ದೂರವಿರಿ, ಇಲ್ಲದಿದ್ರೆ ನಷ್ಟ ಖಚಿತ | Gold Loan

Gold Loan: ಮನೆಯಲ್ಲಿದ್ದರೆ ಚಿನ್ನ ಚಿಂತೆಯೂ ಏತಕೇ ಇನ್ನಾ? ಎಂಬ ಮಾತನ್ನು ಇಂದಿಗೂ ನಮ್ಮ ಜನ…

ತಣ್ಣೀರಿನಲ್ಲಿ ಈಜುವುದರಿಂದಾಗುವ ಪ್ರಯೋಜನಗಳನ್ನು ನೀವು ತಿಳಿದುಕೊಳ್ಳಲೇಬೇಕು; ನಿಮಗಾಗಿಯೇ ಈ ಮಾಹಿತಿ | Health Tips

ತಣ್ಣೀರಿನಲ್ಲಿ ಈಜುವುದು ಕೇವಲ ಸಾಹಸ ಕ್ರೀಡೆ ಅಥವಾ ಹವ್ಯಾಸವಲ್ಲ. ಆದರೆ ಇದು ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು…