ಕುಮಟಾದಲ್ಲೇ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಆಗಬೇಕು-ಕಾಗೇರಿ

Vishweshwara Hegde Kageri
Published on

ಹೊನ್ನಾವರ: ಜಿಲ್ಲೆಗೆ ಸುಸಜ್ಜಿತ ಆಸ್ಪತ್ರೆಯ ತೀರಾ ಅಗತ್ಯವಿದೆ. ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ಕುಮಟಾದಲ್ಲಿ ನಿರ್ಮಿಸಬೇಕು ಎಂದು ವಿಧಾನಸಭಾ ಮಾಜಿ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.
ಪಟ್ಟಣದಲ್ಲಿ ಶನಿವಾರ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರು ಪತ್ರಿಕೆಯೊಂದಿಗೆ ಮಾತನಾಡಿದರು. ಕಾಂಗ್ರೆಸ್ ಪಕ್ಷ ಕಿತ್ತಾಟದಲ್ಲಿ ತೊಡಗಿದೆ. ಅಧಿವೇಶನದಲ್ಲಿ ಜಿಲ್ಲೆಯ ನಾಲ್ಕು ಶಾಸಕರು ಆಸ್ಪತ್ರೆಯನ್ನು ವಿವಿಧ ಸ್ಥಳಗಳಲ್ಲಿ ನಿರ್ಮಿಸುವಂತೆ ಒತ್ತಾಯಿಸಿದ್ದಾರೆ. ಆದರೆ ಈ ಹಿಂದೆ ಬಿಜೆಪಿ ಸರ್ಕಾರ ಜಿಲ್ಲೆಯ ಮಧ್ಯವರ್ತಿ ಸ್ಥಳವಾದ ಕುಮಟಾದಲ್ಲಿ ನಿರ್ಮಾಣ ಮಾಡುವುದಾಗಿ ತಿಳಿಸಿತ್ತು. ಇದೀಗ ರಾಜ್ಯ ಸರ್ಕಾರ ಇಲ್ಲಿಯೇ ಮಾಡಬೇಕು. ಜಿಲ್ಲೆಯಲ್ಲಿ ಆದಷ್ಟು ಬೇಗ ಆಸ್ಪತ್ರೆ ನಿರ್ಮಾಣವಾಗಬೇಕು. ಜಿಲ್ಲೆಯ ಮಧ್ಯವರ್ತಿ ಸ್ಥಳ ಕುಮಟಾ ಹೆಚ್ಚು ಸೂಕ್ತವಾಗಿದೆ ಎಂದರು.
ಮುಂದಿನ ಲೋಕಸಭಾ ಚುನಾವಣೆಯಲ್ಲಿ ನೀವು ಸ್ಪರ್ಧೆ ಮಾಡುತ್ತೀರಾ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು ಪಕ್ಷ ಶಾಸಕನಾಗಿ ಮಂತ್ರಿಯಾಗಿ, ಸಭಾಪತಿ ಸ್ಥಾನ ನಿರ್ವಹಿಸಲು ಅವಕಾಶ ನೀಡಿದೆ. ಮೋದಿ ನೇತ್ರತ್ವದ ಕೇಂದ್ರ ಸರ್ಕಾರ ಹಲವು ಜನಪರ ಕಾರ್ಯಕ್ರಮ ಅನುಷ್ಠಾನ ಮಾಡುತ್ತಿದ್ದು ಅದನ್ನು ಜನತೆ ಗುರುತಿಸಿ ಮೂರು ರಾಜ್ಯದಲ್ಲಿ ಆರ್ಶಿವಾದ ಮಾಡಿದ್ದು, ಕೇಂದ್ರದಲ್ಲಿಯೂ ಬಿಜೆಪಿ ಸರ್ಕಾರ ಬರಲಿದೆ. ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಹೈಕಮಾಂಡ್ ಟಿಕೆಟ್ ಹಂಚಿಕೆ ಮಾಡಲಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net