ದೂಧ ಸಾಗರ ಮೂಲಕ ನೂತನ ರೈಲು

Latest News

ನಿವೇಶನ ನೀಡಲು ಮೀನಮೇಷ

ಶೃಂಗೇರಿ: ತಾಲೂಕು ಕಚೇರಿ ದನದ ದೊಡ್ಡಿಯಾಗಿದೆ. ಬಡವರಿಗೆ ನಿವೇಶನ ನೀಡಲು ಜಾಗವೇ ಇಲ್ಲ ಎನ್ನುವ ಅಧಿಕಾರಿಗಳು ಮಾನವೀಯತೆ ಮರೆಯುತ್ತಿದ್ದಾರೆ. ಹಾಗಿದ್ದರೆ ಕಚೇರಿಗೆ ಬೀಗ...

ಶಾಸಕರ ಅನುದಾನದಲ್ಲಿ ಶುದ್ಧ ಗಂಗಾ ಘಟಕ

ಅಜ್ಜಂಪುರ: ಚುನಾವಣೆ ವೇಳೆ ಸಾಕಷ್ಟು ನಿರೀಕ್ಷೆ ಇರಿಸಿಕೊಂಡು ಗ್ರಾಮೀಣ ಮತದಾರರು ನನ್ನ ಕೈಹಿಡಿದಿದ್ದಾರೆ. ಅವರ ಋಣ ತೀರಿಸುವ ಹೊಣೆ ನನ್ನ ಮೇಲಿರುವುದರಿಂದ ಗ್ರಾಮೀಣ...

ಸಚಿವ, ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸಿ

ಚಿಕ್ಕಮಗಳೂರು: ಡಾ. ಅಂಬೇಡ್ಕರ್ ಒಬ್ಬರೇ ಸಂವಿಧಾನ ಬರೆದಿಲ್ಲ ಎಂದು ಸುತ್ತೋಲೆ ಹೊರಡಿಸುವ ಮೂಲಕ ರಾಜ್ಯ ಶಿಕ್ಷಣ ಇಲಾಖೆ ಅಂಬೇಡ್ಕರ್ ಅವರನ್ನು ಅಪಮಾನಿಸಿದೆ ಎಂದು...

ಇನ್ನು ನಾಲ್ಕೈದು ದಿನಗಳಲ್ಲಿ ಮಹಾರಾಷ್ಟ್ರದಲ್ಲಿ ಶಿವಸೇನೆ-ಕಾಂಗ್ರೆಸ್​-ಎನ್​ಸಿಪಿ ಮೈತ್ರಿ ಸರ್ಕಾರ ರಚನೆ; ಇಂದು ಸಂಜೆ ನಡೆದ ಸಭೆಯಲ್ಲಿ ಮಹತ್ವದ ನಿರ್ಧಾರ

ಮುಂಬೈ: ಇಂದು ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್​ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ 50 ನಿಮಿಷ ಮಾತುಕತೆ ನಡೆಸಿದ್ದಾರೆ. ಅದಾದ ಬಳಿಕ ಎನ್​ಸಿಪಿ ಹಾಗೂ...

ಕಲ್ಲು ಪಾಚಿ ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿ ಬಂಧನ

ಪಿರಿಯಾಪಟ್ಟಣ : ಪಟ್ಟಣ ವ್ಯಾಪ್ತಿಯ ತಾತನಹಳ್ಳಿ ಗೇಟ್ ಸಮೀಪ ಗುರುವಾರ ಅರಣ್ಯ ಪ್ರದೇಶಗಳಲ್ಲಿ ದೊರಕುವ ಕಲ್ಲು ಪಾಚಿಯನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ...

ಬೆಳಗಾವಿ: ನಿಸರ್ಗ ಸೌಂದರ್ಯದ ಮಡಿಲಲ್ಲಿರುವ ದೂಧಸಾಗರ ಜಲಪಾತದ ವೀಕ್ಷಣೆಯ ಭಾಗ್ಯ ದೇಶ-ವಿದೇಶದ ಲಕ್ಷಾಂತರ ಜನ ಪ್ರಯಾಣಿಕರಿಗೆ ಲಭ್ಯವಾಗಲಿದೆ. ಈ ನೂತನ ಸೇವೆ ಸೆ.4 ರಂದು ಬೆಳಗ್ಗೆ 11ಕ್ಕೆ ವಾಸ್ಕೋಡ ಗಾಮಾ ರೈಲು ನಿಲ್ದಾಣದಲ್ಲಿ ಲೋಕಾರ್ಪಣೆಯಾಗಲಿದೆ.

ಕೇಂದ್ರ ಆಯುಷ್ ಇಲಾಖೆಯ ಶ್ರೀಪಾದ್ ನಾಯಕ್ ನೂತನ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ. ಅಧ್ಯಕ್ಷತೆಯನ್ನು ಕೇಂದ್ರದ ರೈಲ್ವೆ ಇಲಾಖೆ ರಾಜ್ಯ ಸಚಿವ ಸಂಸದ ಸುರೇಶ ಅಂಗಡಿ ವಹಿಸುವರು. ಪ್ರಧಾನ ವ್ಯವಸ್ಥಾಪಕ ಅಜಯಕುಮಾರ ಸಿಂಗ್ ಸೇರಿದಂತೆ ರೈಲ್ವೆ ಇಲಾಖೆಯ ಉಭಯ ರಾಜ್ಯಗಳ ಅಧಿಕಾರಿಗಳು ಉಪಸ್ಥಿತರಿರುವರು.

ರೈಲು ಸೆ.6ರಿಂದ ನಿರಂತರವಾಗಿ ಸಾರ್ವಜನಿಕರಿಗೆ ಸೇವೆ ಒದಗಿಸಲಿದೆ. 8 ಸಾಮಾನ್ಯ ಬೋಗಿಗಳು, 2 ದ್ವಿತೀಯ ದರ್ಜೆ ಬೋಗಿ ಸೇರಿ 10 ಬೋಗಿಗಳ ರೈಲು ಸಾಮರ್ಥ್ಯವಿದೆ. ಬೆಳಗ್ಗೆ 6.20ಕ್ಕೆ ಬೆಳಗಾವಿ ನಿಲ್ದಾಣದಿಂದ ಹೊರಡಲಿದೆ. ಗೋವಾದಿಂದ ವಾಸ್ಕೋಡ ಗಾಮಾ ರೈಲು ನಿಲ್ದಾಣದಿಂದ ಮಧ್ಯಾಹ್ನ-3.55ಕ್ಕೆ ಹೊರಡಲಿದೆ ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಕೇಂದ್ರ ರೈಲ್ವೆ ಇಲಾಖೆ ರಾಜ್ಯ ಸಚಿವ ಸುರೇಶ ಅಂಗಡಿ ಬೆಳಗಾವಿಯಿಂದ ಧೂಧಸಾಗರ ಮೂಲಕ ಗೋವಾ ವರೆಗೆ ಕೇಂದ್ರ ರೈಲ್ವೆ ಇಲಾಖೆ ಕಾಮಗಾರಿಗಳನ್ನು ಮಂಗಳವಾರ ಮಧ್ಯಾಹ್ನ ಪರಿಶೀಲಿಸಿದರು.
168 ಕಿ.ಮೀ. ಅಂತರದಲ್ಲಿರುವ ಈ ದೂಧಸಾಗರ ಜಲಪಾತವನ್ನು ವೀಕ್ಷಿಸುವುದೇ ಒಂದು ಹಬ್ಬ. ರೈಲು ಆರಂಭವಾಗುವ ಮುನ್ನಾದಿನವಾದ ಮಂಗಳವಾರ ಅಧಿಕಾರಿಗಳು ಮಧ್ಯಾಹ್ನ 1.30ರಿಂದ ಎರಡು ಬದಿಗಳ ರೈಲ್ವೆ ಮಾರ್ಗಗಳ ಪ್ರಗತಿ ಪರಿಶೀಲನೆ ನಡೆಸಿದರು. ಬೆಳಗಾವಿಯಿಂದ ಹೊರಟು, ಖಾನಾಪುರ, ಲೋಂಡಾ, ಕ್ಯಾಸರಲಾಕ್, ದೂಧಸಾಗರ ಮಾರ್ಗವಾಗಿ ಗೋವಾ ರಾಜ್ಯಕ್ಕೆ ತೆರಳಿದರು.

ಮಾರ್ಗ ಮಧ್ಯೆ ಗುಡ್ಡ ಕುಸಿತದ ದೃಶ್ಯಗಳು, ರೈಲ್ವೆ ಇಲಾಖೆಯ ಆಸ್ತಿಪಾಸ್ತಿಗಳನ್ನು ಕೂಡ ವೀಕ್ಷಿಸಿದರು. ಕೆಲವು ನಿಲ್ದಾಣಗಳಲ್ಲಿ ಅನೇಕ ನಿಲ್ದಾಣಗಳಲ್ಲಿ ಇಲಾಖೆಯ ಆಸ್ತಿಗಳಿಗೆ ತಡೆಗೋಡೆಗಳಿರಲಿಲ್ಲ. ಅವುಗಳಿಗೆ ಗೋಡೆಗಳನ್ನು ನಿರ್ಮಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಳಿಕ ದೂಧ ಸಾಗರ ರೈಲು ನಿಲ್ದಾಣದಲ್ಲಿ ಸ್ವಚ್ಛತೆಗಳನ್ನು ಕಾಪಾಡುವಂತೆ ಸೂಚನೆ ನೀಡಿದರು. ಮುಂಬರುವ ದಿನಗಳಲ್ಲಿ ಪ್ರವಾಸೋದ್ಯಮದ ಬೆಳವಣಿಗೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ರೈಲ್ವೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಧಾರಾಕಾರ ಮಳೆ: ಧಾರಾಕಾರ ಸುರಿಯುವ ಮಳೆಯಲ್ಲಿಯೂ ಸಚಿವ ಸುರೇಶ ಅಂಗಡಿ ಅವರು, ಮಳೆಯಲ್ಲಿ ನೆನೆಯುತ್ತಲೆ ಅಧಿಕಾರಿಗಳೊಂದಿಗೆ ಸಂಚರಿಸಿದರು. ಬೆಳಗಾವಿಯಿಂದ ಧೂಧಸಾಗರ ಮೂಲಕ ಗೋವಾ ವರೆಗೆ ಕೇಂದ್ರ ರೈಲ್ವೆ ಇಲಾಖೆ ಕಾಮಗಾರಿಗಳನ್ನು ವೀಕ್ಷಿಸಿದ ಸಚಿವರು ದೂಧಸಾಗರ ಜಲಪಾತದ ಸುತ್ತಮುತ್ತಲಿನ ಪರಿಸರ ಶುಚಿಯಿಡುವಂತೆ ಸೂಚನೆ ನೀಡಿದರು. ಪ್ರವಾಸಿಗರ ಸುರಕ್ಷತೆಯ ಬಗ್ಗೆ ಕಾಳಜಿ ವಹಿಸುವಂತೆ ತಾಕೀತು ಮಾಡಿದರು.

- Advertisement -

Stay connected

278,636FansLike
573FollowersFollow
611,000SubscribersSubscribe

ವಿಡಿಯೋ ನ್ಯೂಸ್

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ...

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​ ಬೆಲ್ಟ್​ ಹಾಕಿಕೊಂಡಿರುವುದಿಲ್ಲ...ಅದರೊಟ್ಟಿಗೆ ಬೇಕಾಬಿಟ್ಟಿ ಚಾಲನೆ ಬೇರೆ....

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ ಹರಿಬಿಡುವ ಮೂಲಕ ಸೋದರ ರಮೇಶ್​ ಜಾರಕಿಹೊಳಿಗೆ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...

VIDEO| ಶಾಸಕ ತನ್ವೀರ್​ ಸೇಠ್​ ಹಲ್ಲೆ ಪ್ರಕರಣ: ಪೊಲೀಸ್​ ವಿಚಾರಣೆ...

ಮೈಸೂರು: ಕಾಂಗ್ರೆಸ್​ ಶಾಸಕ ಹಾಗೂ ಮಾಜಿ ಸಚಿವ ತನ್ವೀರ್‌ ಸೇಠ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸ್​ ವಿಚಾರಣೆಯ ವೇಳೆ ಸ್ಪೋಟಕ ಮಾಹಿತಿಗಳು ಬಹಿರಂಗವಾಗುತ್ತಿದೆ. ತನ್ವೀರ್‌ ಸೇಠ್ ಹತ್ಯೆಗೆ ಈ ಹಿಂದೆ...

VIDEO: ಗೋಕಾಕ್​ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಲಖನ್​, ಸತೀಶ್​ ನಾಮಪತ್ರ ಸಲ್ಲಿಕೆ;...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...