

ಮಂಡ್ಯ: ತಾಲೂಕಿನ ದುದ್ದ ಗ್ರಾಮ ಪಂಚಾಯಿತಿ ಎರಡನೇ ಅವಧಿಯ ಅಧ್ಯಕ್ಷರಾಗಿ ಶ್ರೇಯಸ್‌ಗೌಡ ಹಾಗೂ ಉಪಾಧ್ಯಕ್ಷೆಯಾಗಿ ಶ್ವೇತಾ ಅವಿರೋಧವಾಗಿ ಆಯ್ಕೆಯಾದರು.
ಗ್ರಾಪಂ ಕಚೇರಿಯಲ್ಲಿ ಶುಕ್ರವಾರ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಶ್ರೇಯಸ್‌ಗೌಡ ಹಾಗೂ ಉಪಾಧ್ಯಕ್ಷೆ ಸ್ಥಾನಕ್ಕೆ ಶ್ವೇತಾ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಶ್ರೀನಿವಾಸ್ ಅವಿರೋಧದ ಆಯ್ಕೆ ಘೋಷಣೆ ಮಾಡಿದರು.
ನೂತನ ವರಿಷ್ಠರನ್ನು ಮನ್‌ಮುಲ್ ಮಾಜಿ ಅಧ್ಯಕ್ಷ ಬಿ.ಆರ್.ರಾಮಚಂದ್ರು ಅಭಿನಂದಿಸಿದರು. ಮುಖಂಡರಾದ ಮಹೇಶ್, ರವಿ, ಗುರುಪ್ರಸಾದ್, ಬೋರಪ್ಪ, ಶ್ರೀನಿವಾಸ್, ಸಿದ್ದಪ್ಪ, ಗ್ರಾಪಂ ಸದಸ್ಯರಾದ ಡಿ.ಎಂ.ರಾಮಚಂದ್ರು, ಲಕ್ಷ್ಮಮ್ಮ, ಭಾಗ್ಯಮ್ಮ, ಬಸಮಣಿ, ಬಸವಲಿಂಗಪ್ಪ, ಪದ್ಮಾ ಇತರರಿದ್ದರು.