More

    ದುಡಿಯೋಣ ಬಾ ಅಭಿಯಾನ ಆರಂಭ

    ಹಾವೇರಿ: ಜಿಲ್ಲೆಯಲ್ಲಿ ಸೋಮವಾರ (ಮಾ. 15)ದಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದುಡಿಯೋಣ ಬಾ ಅಭಿಯಾನ ಆರಂಭಗೊಂಡಿದ್ದು, ಜೂನ್ 15ರವರೆಗೆ ನಡೆಯಲಿದೆ.

    ನರೇಗಾ ಯೋಜನೆಯಡಿ ಆರ್ಥಿಕ ವರ್ಷದಲ್ಲಿ ಒಂದು ಕುಟುಂಬಕ್ಕೆ 100 ದಿನಗಳ ಖಾತರಿ ಕೆಲಸ ಒದಗಿಸಿ, ಪ್ರತಿದಿನಕ್ಕೆ ಒಬ್ಬರಿಗೆ 285 ರೂ.ಗಳ ಕೂಲಿಯಂತೆ ಹಾಗೂ ವರ್ಷಕ್ಕೆ 28,500 ರೂ.ಗಳ ಆದಾಯ ಲಭಿಸಲಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮತ್ತು ಜಿಪಂನಿಂದ ಮೂರು ತಿಂಗಳ ಕಾಲ ‘ದುಡಿಯೋಣ ಬಾ’ ಎಂಬ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.

    ಜಿಲ್ಲೆಯ ಎಲ್ಲ ಗ್ರಾಮೀಣ ಭಾಗದಲ್ಲಿ ಯೋಜನೆಯ ಕುರಿತು ಮಾ. 15ರಿಂದ 22ರವರೆಗೆ ಜನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಉದ್ಯೋಗ ಚೀಟಿ ಹೊಂದಿದ ಕುಟುಂಬಗಳಿಗೆ ಉದ್ಯೋಗ ಚೀಟಿಗಾಗಿ ಅರ್ಜಿ ಮತ್ತು ಅಗತ್ಯ ದಾಖಲೆಗಳನ್ನು ಪಡೆದುಕೊಳ್ಳಲಾಗುವುದು. ಕೂಲಿಕಾರರಿಂದ ನಮೂನೆ-6 (ಕೆಲಸಕ್ಕೆ ಅರ್ಜಿ) ಪಡೆಯುವುದು. ನೋಂದಾಯಿತ ಕೂಲಿಕಾರರಿಂದ ಕೆಲಸದ ಬೇಡಿಕೆ ಪಡೆಯಲು ಗ್ರಾಪಂಗಳಲ್ಲಿ ಬೇಡಿಕೆ ಪೆಟ್ಟಿಗೆಗಳನ್ನು ಇಡಲಾಗುವುದು.

    ಏ. 1ರಿಂದ ಕಾಮಗಾರಿಗಳನ್ನು ಆರಂಭಿಸಲಾಗುವುದು. ಏ. 15ರಿಂದ ಜೂನ್ 15ರವರೆಗೆ ಪ್ರತಿ ಸೋಮವಾರ ಕೆಲಸದ ಬೇಡಿಕೆ ಪೆಟ್ಟಿಗೆ ತೆರೆದು 2 ದಿನಗಳಲ್ಲಿ ಉದ್ಯೋಗ ಒದಗಿಸಲಾಗುವುದು.

    50 ರೈತರ ಹೊಲದಲ್ಲಿ ಕಾಮಗಾರಿ: ಅಭಿಯಾನದ ಅವಧಿಯಲ್ಲಿ ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಕನಿಷ್ಠ 50 ರೈತರ ಜಮೀನುಗಳಲ್ಲಿ ಬದು, ಕೃಷಿ ಹೊಂಡ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು. ಪ್ರತಿ ಗ್ರಾಪಂನಲ್ಲಿ ಕನಿಷ್ಠ 50 ಸೋಕ್​ಪಿಟ್ ನಿರ್ವಣ, ಕೆರೆಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು. ಕೆರೆಗೆ ನೀರು ಹರಿದು ಬರುವ ಕಾಲುವೆಗಳ ಪುನಶ್ಚೇತನ, ಕೆರೆ ಹೂಳು ತೆಗೆಯುವುದು, ಕೆರೆ ಏರಿ ಮತ್ತು ಕೋಡಿ ದುರಸ್ತಿ, ರೈತರ ಜಮೀನುಗಳಿಗೆ ನೀರು ಹರಿದು ಹೋಗುವ ಕಾಲುವೆಗಳ ಪುನಶ್ಚೇತನ ಮತ್ತು ಕೆರೆ ಅಂಚಿನಲ್ಲಿ ಅರಣ್ಯೀಕರಣ ಕಾಮಗಾರಿಗಳನ್ನು ನಡೆಸಲಾಗುವುದು. ರಸ್ತೆ ಬದಿ ನೆಡುತೋಪು, ಬ್ಲಾಕ್ ಪ್ಲಾಂಟೇಷನ್, ಕೃಷಿ ಅರಣ್ಯೀಕರಣ, ರೈತರ ಜಮೀನುಗಳಲ್ಲಿ ತೋಟಗಾರಿಕೆ ಬೆಳೆ ಬೆಳೆಯಲು ಮುಂಗಡ ಗುಂಡಿ ತೆಗೆಯುವ ಕಾಮಗಾರಿಗಳು. ಬೋರ್​ವೆಲ್ ರಿಚಾರ್ಜ್ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ಜಿಪಂ ಸಿಇಒ ಮಹಮ್ಮದ್ ರೋಷನ್ ತಿಳಿಸಿದ್ದಾರೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts