More

    ಅಪ್ಪಳಿಸಲಿರುವ ಚಂಡಮಾರುತ, ರಾಜ್ಯದಲ್ಲಿ ಮೂರು ದಿನ ಭಾರಿ ಮಳೆ..

    ಬೆಂಗಳೂರು: ಅಕಾಲಿಕ ಮಳೆಯಿಂದ ಲಕ್ಷಾಂತರ ಹೆಕ್ಟೇರ್‌ನಲ್ಲಿ ಬೆಳೆದಿರುವ ಬೆಳೆಗಳು ಹಾಳಾಗಿ ರೈತರು ಸಂಕಷ್ಟಕ್ಕೆ ಸಿಲುಕಿರುವ ನಡುವೆಯೇ ರಾಜ್ಯದಲ್ಲಿ ಮತ್ತೆ ಮಳೆ ಆತಂಕ ಎದುರಾಗಿದೆ.
    ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಶುಕ್ರವಾರ ಸಂಜೆ ಚಂಡಮಾರುತವಾಗಿ ರೂಪುಗೊಂಡಿದೆ.

    ಇದರ ಪರಿಣಾಮದಿಂದ ರಾಜ್ಯದ ಕೆಲ ಭಾಗಗಳಲ್ಲಿ ಮುಂದಿನ 72 ಗಂಟೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ. ಶನಿವಾರ ಬೆಳಗ್ಗೆ ಉತ್ತರ ಆಂಧ್ರಪ್ರದೇಶ ಹಾಗೂ ದಕ್ಷಿಣ ಒಡಿಶಾ ಭಾಗಕ್ಕೆ ಚಂಡಮಾರುತ ಅಪ್ಪಳಿಸಲಿದೆ. ಹಾಗಾಗಿ, ಆ ಭಾಗಗಳಲ್ಲಿ ಹೆಚ್ಚು ಮಳೆಯಾಗಲಿದೆ.

    ಇದನ್ನೂ ಓದಿ: ಭಾರತಕ್ಕೆ ಮೊದಲ ಒಮಿಕ್ರಾನ್​ ತಂದಿಟ್ಟವ ಈಗ ದೇಶದಲ್ಲೇ ಇಲ್ಲ, ಅಸಲಿಗೆ ಆತ ಭಾರತೀಯನೇ ಅಲ್ಲ?: ಬೆಂಗ್ಳೂರಿಗೆ ಸುಮ್ನೆ ಕಳಂಕ!

    ಈ ಕುರಿತು ಮಾತನಾಡಿರುವ ಹವಾಮಾನ ತಜ್ಞ ಡಾ.ಶ್ರೀನಿವಾಸರೆಡ್ಡಿ, ಚಂಡಮಾರುತ ಪರಿಣಾಮದಿಂದ ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಮಳೆ ಬೀಳುವುದಿಲ್ಲ. ಆದರೆ, ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಹಾಗೂ ಮಲೆನಾಡು ಭಾಗಗಳ ಕೆಲವೆಡೆ ತುಸು ಹೆಚ್ಚು ಮಳೆಯಾಗಲಿದೆ. ಡಿ.6ರ ನಂತರ ರಾಜ್ಯದಲ್ಲಿ ಮಳೆ ಕ್ಷೀಣಿಸುವ ಸಾಧ್ಯತೆಯಿದೆ ಎಂದರು.

    ಡಾ.ರಾಜ್​ ಸಿನಿಮಾ ಹೆಸರಲ್ಲೊಂದು ಕನಸು, ಪಾರ್ವತಮ್ಮನ ಜನ್ಮದಿನದಂದು ನನಸು: ಡಿ. 6ರಂದು ಅಪ್ಪು ರೋಮಾಂಚಕ ಅನುಭವದ ಝಲಕ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts