More

  ಭಾರಿ ಮಳೆ, ನಾಳೆ ಎಲ್ಲೆಲ್ಲಿ ಶಾಲಾ-ಕಾಲೇಜುಗಳಿಗೆ ರಜೆ?: ಇಲ್ಲಿದೆ ಮಾಹಿತಿ…

  ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಆಯಾ ಜಿಲ್ಲೆಗಳ ಪರಿಸ್ಥಿತಿ ಆಧರಿಸಿ ಸ್ಥಳೀಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವ ನಿರ್ಧಾರವನ್ನು ಸರ್ಕಾರ ಆಯಾ ಜಿಲ್ಲಾಧಿಕಾರಿಗಳಿಗೆ ನೀಡಿದೆ.

  ಇದರ ಬೆನ್ನಲ್ಲೇ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ಅಲ್ಲಿನ ಜಿಲ್ಲಾಧಿಕಾರಿಗಳು ಶುಕ್ರವಾರ ಮತ್ತು ಶನಿವಾರ ರಜೆ ನೀಡಿದ್ದಾರೆ. ತುಮಕೂರು, ರಾಮನಗರ ಸೇರಿ ಇನ್ನೂ ಹಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮಳೆ ಪರಿಸ್ಥಿತಿಯ ಪರಿಶೀಲನೆ ನಡೆಸುತ್ತಿದ್ದು ಭಾರಿ ಮಳೆಯ ಮುನ್ಸೂಚನೆ ದೊರೆತಲ್ಲಿ ರಜೆ ಘೋಷಿಸುವ ಸಾಧ್ಯತೆ ಇದೆ.

  ಇದನ್ನೂ ಓದಿ: ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ಮತ್ತೊಂದು ಕುಡಿ ರಾಜ್ಯ ರಾಜಕಾರಣಕ್ಕೆ; ವಿಧಾನ ಪರಿಷತ್ ಅಭ್ಯರ್ಥಿಯಾಗಿ ಮೊಮ್ಮಗ…

  ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಡಾ.ವಿಶಾಲ್ ಅವರು, ಶಾಲಾ-ಕಾಲೇಜುಗಳಿಗೆ ರಜೆಯ ನಿರ್ಧಾರ ಕೈಗೊಳ್ಳುವ ಬಗ್ಗೆ ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೂ ಪತ್ರ ಬರೆದಿದ್ದಾರೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ನಿರಂತರ ಮಳೆ ಬೀಳುತ್ತಿರುವ ಪ್ರಯುಕ್ತ ವಿದ್ಯಾರ್ಥಿಗಳು ಶಾಲೆಗೆ ಬಂದು ಹೋಗಲು ತೊಂದರೆ ಆಗಬಹುದಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತಮ್ಮ ಜಿಲ್ಲೆಗಳಲ್ಲಿನ ಮಳೆ ಪರಿಸ್ಥಿತಿ ನೋಡಿಕೊಂಡು ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲು ಅಗತ್ಯ ಕ್ರಮ ವಹಿಸುವಂತೆ ಕೋರಿದ್ದಾರೆ.

  ಸಿದ್ದರಾಮಯ್ಯ ಅವರಿಗೆ ಮತ್ತೆ ಕಾಗೆ ಕಂಟಕ?; ಈ ಬಾರಿ ಕಚೇರಿ ಬಳಿಗೇ ಬಂದು ಕುಳಿತ ಕಾಕ!

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts