More

    ಬಾಕಿ ಪ್ರೋತ್ಸಾಹಧನ ಬಿಡುಗಡೆಗೆ ಪಟ್ಟು

    ಕೋಲಾರ: ಹಾಲು ಒಕ್ಕೂಟಕ್ಕೆ ಹಾಲು ಸರಬರಾಜು ಮಾಡಿರುವ ರೈತರಿಗೆ ಬಾಕಿ ಇರುವ ಪ್ರತಿ ಲೀಟರ್ ಪ್ರೋತ್ಸಾಹಧನವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಕೋಚಿಮುಲ್ ಎಂಡಿ ಗೋಪಾಲಮೂರ್ತಿಗೆ ಸೋಮವಾರ ಮನವಿ ಸಲ್ಲಿಸಿದರು.

    ಸಂಘದ ಮಹಿಳಾ ಘಟಕದ ಅಧ್ಯಕ್ಷೆ ಎ.ನಳಿನಿಗೌಡ ಮಾತನಾಡಿ, ಹೈನೋದ್ಯಮವು ಅವಿಭಜಿತ ಕೋಲಾರ ಜಿಲ್ಲೆಯ ರೈತರ ಜೀವನಾಡಿಯಾಗಿದೆ. ಹದಿನೈದು ದಿನಕ್ಕೊಮ್ಮೆ ನೀಡುವ ಬಟವಾಡೆ ಸಾಲದು ಎಂದು ಸರ್ಕಾರ ಪ್ರೋತ್ಸಾಹ ಧನ ನೀಡುತ್ತಿರುವ ಬಾಕಿ ಹಣ ಉಳಿಸಿಕೊಂಡಿರುವುದು ರೈತರ ಪ್ರಗತಿಯ ಮೇಲೆ ಪರಿಣಾಮ ಬೀರುತ್ತಿದೆ ಎಂದು ಬೇಸರಿಸಿದರು.

    ಹೈನೋದ್ಯಮದ ರಕ್ಷಣೆಗೆ ನಿಲ್ಲಬೇಕಾದ ಸರ್ಕಾರ ಮೀನಾಮೇಷ ಎಣಿಸುತ್ತಿದೆ. ಲಕ್ಷಾಂತರ ರೈತ ಕುಟುಂಬಗಳ ಜೀವನಾಡಿಯಾಗಿರುವ ಹೈನೋದ್ಯಮದ ಅಭಿವೃದ್ಧಿಗೆ ಸರ್ಕಾರ ಮನಸ್ಸು ಮಡಬೇಕಾಗಿದೆ. ಆರು ತಿಂಗಳಿAದ ರೈತರಿಗೆ ಕ್ಷೀರಭಾಗ್ಯ ಪ್ರೋತ್ಸಾಹ ಧನ, ಸೇರಿಲ್ಲ ರಾಜ್ಯದಲ್ಲಿ ಮುಂಗಾರು ಮಳೆ ಪ್ರಾರಂಭವಾಗಿದ್ದು, ಕೃಷಿ ಚಟುವಟಿಕೆ ಜತೆಗೆ ಹೈನುಗಾರಿಕೆಯಲ್ಲಿ ರೈತರು ತೊಡಗಿಸಿಕೊಂಡಿರುತ್ತಾರೆ ಎಂದರು.

    ರಾಜ್ಯ ಸರ್ಕಾರವು ಹೈನುಗಾರಿಕೆ ನಡೆಸುವ ರೈತರಿಗೆ ಅನುಕೂಲವಾಗಲಿ ಎಂಬ ಕಾರಣದಿಂದ ಕ್ಷೀರಧಾರೆ ಹೆಸರಿನಲ್ಲಿ ಪ್ರತಿಯೊಬ್ಬ ರೈತರಿಗೆ ಲೀಟರ್‌ಗೆ ೫ ರೂ. ಪ್ರೋತ್ಸಾಹ ಧನ ನೀಡುತ್ತಿದ್ದು, ಈಗ ಆ ಹಣವನ್ನು ಬಿಡುಗಡೆ ಮಾಡದೆ ಸಂಕಷ್ಟದಲ್ಲಿ ಹಾಲು ಉತ್ಪಾದಕರು ಸಿಲುಕಿದ್ದಾರೆ. ಇದಕ್ಕೆ ಸರ್ಕಾರವೇ ನೇರ ಹೊಣೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
    ಸಂಘದ ಜಿಲ್ಲಾಧ್ಯಕ್ಷ ಈಕಂಬಳಿ ಮಂಜುನಾಥ್ ಮಾತನಾಡಿ, ಹಸುಗಳನ್ನು ಸಾಕಣೆ ಮಾಡುವುದು ಇತ್ತೀಚಿನ ದಿನಗಳಲ್ಲಿ ಸವಾಲಿನ ಕೆಲಸವಾಗಿದೆ. ಪಶುಆಹಾರದ ಬೆಲೆಯನ್ನು ಅಂಗಡಿ ಮಾಲೀಕರು ಮನಸ್ಸೋ ಇಚ್ಚೇ ಏರಿಕೆ ಮಾಡುತ್ತಿರುತ್ತಾರೆ. ಇದನ್ನು ನಿಯಂತ್ರಣ ಮಾಡಬೇಕಾದವರು ಕುರುಡರಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು. ರೈತರ ಹಾಲು ಉತ್ಪಾದನೆಯು ಪ್ರಸ್ತುತದಲ್ಲಿ ಕಷ್ಟಕರವಾಗಿದೆ. ಸ್ವಂತ ಮೇವಿನ ವ್ಯವಸ್ಥೆ ಇದ್ದಲ್ಲಿ ಪ್ರತಿ ಲೀಟರ್‌ಗೆ ೨೨ ರಿಂದ ೨೪ ರೂ. ವೆಚ್ಚವಾಗುತ್ತಿದೆ. ಮೇವು ಖರೀದಿಸಿದರೆ ೩೦ ರೂ. ದಾಟುತ್ತದೆ. ಜತೆಗೆ ಖಾಸಗಿ ಅಂಗಡಿ ಮಾಲೀಕರು ಇಂಡೀ ಬೂಸಾವನ್ನು ತಮಗೆ ಇಷ್ಟಬಂದ ರೀತಿ ದುಬಾರಿ ಬೆಲೆಗೆ ಮಾರಾಟ ಮಾಡುವುದರಿಂದ ರೈತರಿಗೆ ತುಂಬಾ ತೊಂದರೆಯಾಗುತಿದೆ. ಸರ್ಕಾರ ಕೂಡಲೇ ಸ್ಪಂದಿಸಬೇಕೆಂದು ಮನವಿ ಮಾಡಿದರು.
    ರೈತ ಸಂಘದ ಉಪಾಧ್ಯಕ್ಷ ಕೆ.ನಾರಾಯಣಗೌಡ, ಜಿಲ್ಲಾ ಕಾರ್ಯಾಧ್ಯಕ್ಷ ವಕ್ಕಲೇರಿ ಹನುಮಯ್ಯ, ಪದಾಧಿಕಾರಿಗಳಾದ ಕೇಶವ, ಶೈಲಜ, ಮುನಿರತ್ನಮ್ಮ, ವೆಂಕಟಮ್ಮ, ನಾಗರತ್ನ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts