More

    ಬೆಂಗಳೂರು-ಮೈಸೂರು ಕೆಎಸ್​ಆರ್​ಟಿಸಿ ಪ್ರಯಾಣ ದರ ಹೆಚ್ಚಳ: ದಶಪಥದಲ್ಲಿ ಟೋಲ್ ಸಂಗ್ರಹ ಅಡ್ಡಪರಿಣಾಮ

    ಬೆಂಗಳೂರು: ಮೈಸೂರು-ಬೆಂಗಳೂರು ನೂತನ ಎಕ್ಸ್‌ಪ್ರೆಸ್‌ವೇಯಲ್ಲಿ ಟೋಲ್ ಸಂಗ್ರಹ ಆರಂಭವಾದ ಬೆನ್ನಲ್ಲೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಉಭಯ ನಗರಗಳ ನಡುವಣ ಪ್ರಯಾಣದ ಟಿಕೆಟ್ ದರ ಹೆಚ್ಚಳ ಮಾಡಿದೆ. ದಶಪಥದಲ್ಲಿ ಟೋಲ್ ಸಂಗ್ರಹ ಆರಂಭಿಸಿದ್ದರ ಅಡ್ಡಪರಿಣಾಮವಾಗಿ ಈ ಹೆಚ್ಚಳ ಮಾಡಲಾಗಿದೆ.

    ಬೆಂಗಳೂರು ಮೈಸೂರು ಪ್ರಯಾಣದ ದರ ಹೆಚ್ಚಳ ಮಾಡಿ ಕೆಎಸ್‌ಆರ್‌ಟಿಸಿ ಮಂಗಳವಾರ ಪ್ರಕಟಣೆ ಹೊರಡಿಸಿದೆ. ವೋಲ್ವೋ ಹಾಗೂ ಸಾಮಾನ್ಯ ಬಸ್‌ಗಳಿಗೆ ಪ್ರತ್ಯೇಕವಾಗಿ ದರ ಪರಿಷ್ಕರಣೆ ಮಾಡಲಾಗಿದೆ. ಐಷಾರಾಮಿ ಬಸ್‌ಗಳ ಪ್ರಯಾಣ ದರ 20 ರೂ. ಸಾಮಾನ್ಯ ಬಸ್ ಪ್ರಯಾಣದ ದರ 15 ರೂ. ಹಾಗೂ ರಾಜಹಂಸ ಬಸ್‌ಗಳ ಪ್ರಯಾಣ ದರವನ್ನು 18 ರೂ. ಹೆಚ್ಚಳ ಮಾಡಲಾಗಿದೆ.

    ಇದನ್ನೂ ಓದಿ: ಡ್ರಮ್​ನೊಳಗೆ ಮಹಿಳೆಯ ಶವ ಪತ್ತೆ; ಅದೇ ಗ್ಯಾಂಗ್​ನ ಕೈವಾಡ ಶಂಕೆ!

    ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಮಾರ್ಗದಲ್ಲಿ ಬಳಕೆದಾರರಿಂದ ಮಾ.14 ರಿಂದ ಶುಲ್ಕವನ್ನು ಸಂಗ್ರಹಿಸಲಾಗುತ್ತಿದೆ. ವೆಚ್ಚವನ್ನು ಸರಿದೂಗಿಸಲು ಟಿಕೆಟ್ ದರ ಹೆಚ್ಚಳ ಮಾಡುವುದು ಅನಿವಾರ್ಯವಾಗಿದೆ. ಇದು ಎಕ್ಸ್‌ಪ್ರೆಸ್ ಹೈವೇಯಲ್ಲಿ ಸಾಗುವ ಪ್ರಯಾಣಿಕರಿಗೆ ಮಾತ್ರ ಅನ್ವಯವಾಗುತ್ತದೆ. ಇನ್ನುಳಿದ ಸಾರಿಗೆಗಳಿಗೆ ಅನ್ವಯವಾಗುವುದಿಲ್ಲ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

    ಇದನ್ನೂ ಓದಿ: 5 ಮತ್ತು 8ನೇ ತರಗತಿ ಬೋರ್ಡ್​ ಎಕ್ಸಾಂ; ಹೈಕೋರ್ಟ್​ನಲ್ಲಿ ಇಂದೇನಾಯ್ತು?

    ತೀವ್ರ ವಿರೋಧ: ತೀವ್ರ ವಿರೋಧದ ನಡುವೆಯೂ ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್ ವೇಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಂಗಳವಾರ ಬೆಳಗ್ಗೆಯಿಂದ ಮೊದಲ ಹಂತದ ಟೋಲ್ ಸಂಗ್ರಹ ಆರಂಭಿಸಿದೆ. ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುವ ವಾಹನಗಳಿಗೆ ಬೆಂಗಳೂರು ದಕ್ಷಿಣ ತಾಲೂಕಿನ ಕಣಮಿಣಿಕೆ ಬಳಿ ಟೋಲ್ ಸಂಗ್ರಹ ಮಾಡಲಾಗುತ್ತಿದೆ. ಮೈಸೂರಿನಿಂದ ಬೆಂಗಳೂರಿಗೆ ಬರುವ ವಾಹನಗಳಿಗೆ ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಪ್ಲಾಜಾ ಬಳಿ ಟೋಲ್ ಸಂಗ್ರಹ ಮಾಡಲಾಗುತ್ತಿದೆ.

    ಒಬ್ಬರು ಅಥವಾ ಇಬ್ಬರು ಮಕ್ಕಳಿರುವ ದಂಪತಿಗೆ ಭರ್ಜರಿ ಆಫರ್​: ಮೂರನೇ ಮಗುವಿಗೆ ಜನ್ಮನೀಡಿದರೆ 50 ಸಾವಿರ ರೂಪಾಯಿ!

    ಹತ್ತನೇ ತರಗತಿ ವಿದ್ಯಾರ್ಥಿನಿಗೆ ಹೃದಯಾಘಾತ; ಫ್ರೆಂಡ್ ಜತೆ ಮಾತನಾಡುತ್ತಲೇ ಕುಸಿದು ಬಿದ್ದು ಸಾವು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts