17.8 C
Bengaluru
Wednesday, January 22, 2020

ಗಂಗೊಳ್ಳಿಯ ಪಂಚ ನದಿಗಳ ಸಂಗಮ ಸ್ಥಳ ಈಗ ತ್ಯಾಜ್ಯ ಕೊಂಪೆ

Latest News

ಕರ್ನಾಟಕ ಕುಸ್ತಿ ಹಬ್ಬಫೆ. 15ರಿಂದ

ಧಾರವಾಡ: ಫೆ. 15ರಿಂದ 18ರವರೆಗೆ ನಗರದಲ್ಲಿ ಕರ್ನಾಟಕ ಕುಸ್ತಿ ಹಬ್ಬ ಆಯೋಜಿಸಲಾಗುವುದು. ಅಂತಾರಾಷ್ಟ್ರೀಯ ಕುಸ್ತಿಪಟುಗಳು ಸೇರಿ ಸುಮಾರು 2,000ಕ್ಕೂ ಹೆಚ್ಚು ಕುಸ್ತಿಪಟುಗಳು, ತರಬೇತಿದಾರರು...

ಊರೆಲ್ಲ ಕೊಳ್ಳೆ ಹೊಡೆದ ಮೇಲೆ…

ಲಕ್ಷ್ಮೇಶ್ವರ: ‘ಊರೆಲ್ಲ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಮುಚ್ಚಿದರು’ ಎಂಬಂತೆ ರೈತರೆಲ್ಲ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಶೇಂಗಾ ಮಾರಾಟ ಮಾಡಿದ...

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

ಗಂಗೊಳ್ಳಿ: ಪಂಚನದಿಗಳ ಸಂಗಮ ತಾಣ ಗಂಗೊಳ್ಳಿ ಸಮುದ್ರ ತೀರ ತ್ಯಾಜ್ಯ ವಿಸರ್ಜನೆಯ ಕೇಂದ್ರವಾಗಿ ಮಾರ್ಪಡುತ್ತಿದ್ದು, ಪ್ರವಾಸಿಗರು ತೀವ್ರ ಮುಜುಗರ ಅನುಭವಿಸುವಂತಾಗುತ್ತಿದೆ.

ಗಂಗೊಳ್ಳಿ ಸಮುದ್ರ ತೀರ ಅಭಿವೃದ್ಧಿ ಭಾಗ್ಯ ಕಂಡಿಲ್ಲ. ತ್ರಾಸಿ-ಮರವಂತೆ ಕಡಲ ಕಿನಾರೆ ಹೊರತುಪಡಿಸಿದರೆ ಈ ಭಾಗದ ಯಾವುದೇ ಕಡಲ ತೀರ ಅಭಿವೃದ್ಧಿ ಕಂಡಿಲ್ಲ. ಐದು ನದಿಗಳು ಒಟ್ಟು ಸೇರಿ ಸಮುದ್ರ ಸೇರುವ ಅದ್ಭುತ ದೃಶ್ಯ ಗಂಗೊಳ್ಳಿಯಲ್ಲಿದೆ. ಸೂರ್ಯೋದಯ ಹಾಗೂ ಸೂರ್ಯಾಸ್ತಮಾನವನ್ನು ಒಂದೇ ಸ್ಥಳದಲ್ಲಿ ನಿಂತು ನೋಡಬಹುದಾದ ಸ್ಥಳ ಗಂಗೊಳ್ಳಿ. ಇನ್ನೊಂದೆಡೆ ಮೀನುಗಾರಿಕಾ ಬಂದರು, ಹಳೆಯ ಲೈಟ್‌ಹೌಸ್ ಸೇರಿದಂತೆ ಸುಮಾರು 450 ವರ್ಷಕ್ಕೂ ಪುರಾತನ ದೇವಸ್ಥಾನಗಳು, ಶಿಲಾಶಾಸನಗಳು ಗಂಗೊಳ್ಳಿಯಲ್ಲಿವೆ.
ಇಂಥ ಸುಂದರ ರಮಣೀಯ ಪ್ರದೇಶದ ಕಡಲ ತೀರ ತ್ಯಾಜ್ಯದಿಂದ ತುಂಬಿ ತುಳುಕುತ್ತಿದೆ. ಕಡಲ ತೀರಕ್ಕೆ ಹೋಗುವ ದಾರಿಯುದ್ದಕ್ಕೂ ತ್ಯಾಜ್ಯ ರಾಶಿ ಕಂಡು ಬರುತ್ತಿದೆ. ಪ್ರವಾಸಿಗರನ್ನು ಹಾಗೂ ಪ್ರತಿನಿತ್ಯ ವಿಹಾರಕ್ಕೆಂದು ಬರುವ ಜನರನ್ನು ಈ ಪರಿಸರದ ಗಬ್ಬು ವಾಸನೆ ಸ್ವಾಗತಿಸುತ್ತಿದೆ. ಎಲ್ಲಿ ನೋಡಿದರಲ್ಲಿ ತ್ಯಾಜ್ಯ ವಸ್ತುಗಳೇ ಕಾಣಿಸುತ್ತಿವೆ. ಕಡಲ ತೀರಕ್ಕೆ ಸಾಗುವ ದಾರಿಯ ಎರಡೂ ಕಡೆ ಭಾರಿ ಪ್ರಮಾಣದ ತ್ಯಾಜ್ಯ ಸಂಗ್ರಹಗೊಂಡಿದ್ದು ಪ್ರವಾಸಿಗರನ್ನು ಹಾಗೂ ಪ್ರತಿನಿತ್ಯ ವಿಹಾರಕ್ಕೆ ಬರುವ ಜನರಿಗೆ ಅಸಹ್ಯ ಮೂಡಿಸುತ್ತಿದೆ.

ಕಟ್ಟಡ ಸಾಮಗ್ರಿಗಳೂ ಕಡಲಿಗೆ
ಗಂಗೊಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿಗೆ ಎಸ್‌ಎಲ್‌ಆರ್‌ಎಂ ಘಟಕ ಕಾರ್ಯನಿರ್ವಹಿಸುತ್ತಿದ್ದರೂ ಜನ ತಮ್ಮ ಮನೆ ಹಾಗೂ ವಾಣಿಜ್ಯ ಮಳಿಗೆಗಳ ತ್ಯಾಜ್ಯವನ್ನು ಸಾಯಂಕಾಲ ಬಳಿಕ ಕಡಲ ತೀರದಲ್ಲಿ ಎಸೆಯುತ್ತಿದ್ದಾರೆ. ಮನೆಯ ನಿರುಪಯುಕ್ತ ಕಟ್ಟಡ ಸಾಮಗ್ರಿಗಳು, ಮರಗಳನ್ನು ಕೂಡ ಕಡಲ ತೀರದಲ್ಲಿ ಬೇಕಾಬಿಟ್ಟಿ ವಿಸರ್ಜಿಸಲಾಗಿದೆ. ಕಡಲ ತೀರದಲ್ಲಿ ತ್ಯಾಜ್ಯ ವಿಸರ್ಜನೆಯಿಂದ ಜನರಿಗೆ ನಡೆದಾಡಲೂ ಸಾಧ್ಯವಾಗುತ್ತಿಲ್ಲ. ಮೂಗು ಮುಚ್ಚಿಕೊಂಡು ತಿರುಗಾಡಬೇಕಾದ ಅನಿವಾರ್ಯ ಪರಿಸ್ಥಿತಿ ಇಲ್ಲಿನ ಜನರಿಗೆ ಬಂದೊದಗಿದೆ.
ಪ್ರವಾಸೋದ್ಯಮಕ್ಕೆ ಪೂರಕವಾಗಿರುವ ಗಂಗೊಳ್ಳಿ ಕಡಲ ತೀರ ತ್ಯಾಜ್ಯ ವಿಸರ್ಜನೆಯ ಕೇಂದ್ರವಾಗಿ ಮಾರ್ಪಾಟಾಗುತ್ತಿರುವುದರ ಬಗ್ಗೆ ಸ್ಥಳೀಯಾಡಳಿತ ಗಂಭೀರವಾಗಿ ಪರಿಗಣಿಸಿಲ್ಲ. ಪ್ರವಾಸೋದ್ಯಮ ಹಾಗೂ ಅರಣ್ಯ ಇಲಾಖೆ ಕೂಡ ತ್ಯಾಜ್ಯ ವಿಸರ್ಜನೆ ನಿಲ್ಲಿಸಲು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಕಡಲ ತೀರದಲ್ಲಿ ವಿಹರಿಸಲು ಜನ ಹಿಂದೇಟು ಹಾಕುತ್ತಿದ್ದಾರೆ. ಪ್ರತಿನಿತ್ಯ ನೂರಾರು ಜನ ಬರುತ್ತಿದ್ದ ಬೀಚ್‌ನಲ್ಲಿ ಪ್ರಸಕ್ತ ಕೆಲವೇ ಕೆಲವು ಮಂದಿ ಬರುತ್ತಿದ್ದಾರೆ. ಆಸುಪಾಸಿನ ಮಂದಿ ಬೀಚ್‌ನಲ್ಲಿ ಗೊತ್ತಿಲ್ಲದೆ ತ್ಯಾಜ್ಯ ಎಸೆಯುತ್ತಿರುವುದು ಸುತ್ತಮುತ್ತಲಿನ ಜನರ ನಿದ್ರೆಗೆಡಿಸಿದೆ.

ಹಲವು ವರ್ಷಗಳಿಂದ ಜನ ಗಂಗೊಳ್ಳಿ ಬೀಚ್‌ನಲ್ಲಿ ತ್ಯಾಜ್ಯ ಎಸೆಯುತ್ತಿದ್ದು ಅನೇಕ ಬಾರಿ ಈ ಬಗ್ಗೆ ಗ್ರಾಮ ಪಂಚಾಯಿತಿಗೆ ದೂರು ನೀಡಲಾಗಿದೆ. ಆದರೆ ತ್ಯಾಜ್ಯ ವಿಸರ್ಜನೆ ಕಡಿಮೆಯಾಗಿಲ್ಲ. ಪ್ರತಿನಿತ್ಯ ತ್ಯಾಜ್ಯ ವಿಸರ್ಜನೆ ವ್ಯಾಪಕವಾಗುತ್ತಿದೆ. ಪರಿಸರದಲ್ಲಿ ಜೀವನ ನಡೆಸುವುದೂ ಕಷ್ಟವಾಗುತ್ತಿದೆ. ಎಲ್ಲರೂ ತಂದು ಬೀಚ್ ವಠಾರದಲ್ಲಿ ತ್ಯಾಜ್ಯ, ಕಟ್ಟಡದ ನಿರುಪಯುಕ್ತ ವಸ್ತುಗಳನ್ನು ಎಲ್ಲೆಂದರಲ್ಲಿ ಎಸೆಯುತ್ತಿದ್ದಾರೆ. ಸ್ಥಳೀಯಾಡಳಿತ ಇದನ್ನು ಗಂಭೀರವಾಗಿ ಪರಿಗಣಿಸಬೇಕು.
ಕೃಷ್ಣ ಖಾರ್ವಿ, ಸ್ಥಳೀಯ ನಿವಾಸಿ

ಗಂಗೊಳ್ಳಿಯನ್ನು ಪ್ರವಾಸೋದ್ಯಮ ತಾಣವಾಗಿ ಗುರುತಿಸಿ ಅಭಿವೃದ್ಧಿಪಡಿಸಿದರೆ ತ್ಯಾಜ್ಯ ವಿಲೇವಾರಿಗೆ ಬ್ರೇಕ್ ಬೀಳಲಿದೆ. ಖಾಲಿ ಜಾಗ ನೋಡಿ ಜನ ತ್ಯಾಜ್ಯ ಎಸೆಯುತ್ತಿದ್ದು, ಅಂಥವರನ್ನು ಗುರುತಿಸಿ ಅವರಿಗೆ ಕಠಿಣ ಶಿಕ್ಷೆ ನೀಡಬೇಕು. ಗಂಗೊಳ್ಳಿ ಬೀಚ್‌ನಲ್ಲಿ ಸ್ವಚ್ಛತೆ ಕಾಪಾಡಲು ಸಾರ್ವಜನಿಕರು ಸಹಕಾರ ನೀಡಬೇಕು. ಸ್ಥಳೀಯಾಡಳಿತ ಬೀಚ್‌ನಲ್ಲಿ ಎಸೆಯಲಾಗಿರುವ ತ್ಯಾಜ್ಯವನ್ನು ವಿಲೇವಾರಿ ಮಾಡಬೇಕು.
ಮಂಜುನಾಥ, ಸ್ಥಳೀಯ ನಿವಾಸಿ

ಗಂಗೊಳ್ಳಿ ಬೀಚ್‌ನಲ್ಲಿ ತ್ಯಾಜ್ಯ ವಿಸರ್ಜನೆಗೆ ಸಂಬಂಧಿಸಿ ಈಗಾಗಲೇ ಅನೇಕ ಬಾರಿ ಸ್ಥಳೀಯರಿಗೆ ಮೌಖಿಕ ಎಚ್ಚರಿಕೆ ನೀಡಲಾಗಿದೆ. ಬೀಚ್ ವಠಾರದಲ್ಲಿರುವ ತ್ಯಾಜ್ಯಗಳನ್ನು ಹಲವು ಸಲ ವಿಲೇವಾರಿ ಮಾಡಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ಎಸೆಯದಂತೆ ಜನರಲ್ಲಿ ಮನವಿ ಮಾಡಿಕೊಳ್ಳಲಾಗುವುದು ಮತ್ತು ಎಸ್‌ಎಲ್‌ಆರ್‌ಎಂ ಘಟಕ ಮರು ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು.
ಶ್ರೀನಿವಾಸ ಖಾರ್ವಿ
ಗಂಗೊಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...