ಮೈಮೇಲೆ ಸಗಣಿ ಸುರಿದುಕೊಂಡು ಪ್ರತಿಭಟನೆ

ಶಿವಮೊಗ್ಗ: ಕನಿಷ್ಠ ವೇತನ ನೀಡುವಂತೆ ಆಗ್ರಹಿಸಿ ಕಾರ್ವಿುಕನೊಬ್ಬ ನಗರದ ಗಾಯತ್ರಿ ಮಾಂಗಲ್ಯ ಮಂದಿರದ ಎದುರಿನಲ್ಲಿ ಮೈ ಮೇಲೆ ಸಗಣಿ ಸುರಿದುಕೊಂಡು ಪ್ರತಿಭಟಿಸಿದನು.

ಕಾರ್ವಿುಕ ವೆಂಕಟೇಶ್ ಮಾತನಾಡಿ, 12 ವರ್ಷಗಳಿಂದ ಕಲ್ಯಾಣ ಮಂದಿರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಆದರೂ ನನಗೆ 6,500 ರೂ. ಮಾತ್ರ ವೇತನ ನೀಡಲಾಗುತ್ತಿದೆ. ಕನಿಷ್ಠ ವೇತನ ನೀಡುವಂತೆ ಮನವಿ ಮಾಡಿದರೂ ಆಡಳಿತ ಮಂಡಳಿಯಿಂದ ಯಾವುದೇ ಸ್ಪಂದನೆ ಸಿಗುತ್ತಿಲ್ಲ ಎಂದು ದೂರಿದರು.

ಸಮಾಜ ಕಲ್ಯಾಣ ಇಲಾಖೆ, ಕಾರ್ವಿುಕ ಅಧಿಕಾರಿ ಸೇರಿ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದ್ದೇನೆ. ಇದಕ್ಕೆ ಸಂಬಂಧಿಸಿ ಕನಿಷ್ಠ ವೇತನ ನೀಡುವಂತೆ ಅಧಿಕಾರಿಗಳು ಸೂಚಿಸಿದ್ದರೂ ಆಡಳಿತ ಮಂಡಳಿ ಒಪ್ಪುತ್ತಿಲ್ಲ ಎಂದು ಆರೋಪಿಸಿದರು.