More

    ನಕಲಿ ವೋಟರ್ ಐಡಿ ತಯಾರಿಕೆ ಆರೋಪ; ಸಚಿವ ಭೈರತಿ ಸುರೇಶ್​ ಆಪ್ತನನ್ನು ವಶಕ್ಕೆ ಪಡೆದ ಸಿಸಿಬಿ

    ಬೆಂಗಳೂರು: ವೋಟರ್ ಐಡಿ, ಚಾಲನಾ ಪರವಾನಗಿ, ಆಧಾರ್​ ಕಾರ್ಡ್ ಸೇರಿದಂತೆ ಹಲವು ನಕಲಿ ದಾಖಲೆಗಳನ್ನು​ ತಯಾರು ಮಾಡುತ್ತಿದ್ದ ಆರೋಪದ ಮೇಲೆ ಸಿಸಿಬಿ ಪೊಲೀಸರು ಸಚಿವ ಭೈರತಿ ಸುರೇಶ್​ ಆಪ್ತ ಸೇರಿದಂತೆ ಮೂವರನ್ನು ವಶಕ್ಕೆ ಪಡೆದಿದ್ದಾರೆ.

    ಬಂಧಿತರನ್ನು ಮೌನೇಶ್​ ಕುಮಾರ್, ರಾಘವೇಂದ್ರ, ಭಗತ್​ ಎಂದು ಗುರತಿಸಲಾಗಿದೆ. ಬಂಧಿತರು ಹಣ ಕೊಟ್ಟರೆ ನಕಲಿ ವೋಟರ್ ಐಡಿ, ಆಧಾರ್ ಕಾರ್ಡ್ ಹಾಗೂ ಡಿಎಲ್‍ನ್ನು ಮಾಡಿಕೊಡುತ್ತಿದ್ದರು ಎಂದು ಆರೋಪಿಸಲಾಗಿದೆ.

    Mounesh Kumar

    ಇದನ್ನೂ ಓದಿ: ತೆಲಂಗಾಣವನ್ನು ಹಾಳು ಮಾಡುವಲ್ಲಿ ನಿಮ್ಮ ಕುಟುಂಬ ಮಹತ್ವದ ಪಾತ್ರ ವಹಿಸಿದೆ; ರಾಹುಲ್ ಹೇಳಿಕೆಗೆ ಕೆಸಿಆರ್ ಪುತ್ರಿ ತಿರುಗೇಟು

    ಬಂಧಿತ ಆರೋಪಿಗಳು ಹೆಬ್ಬಾಳದ ಕನಕನಗರದಲ್ಲಿ ಎಂಎಸ್‍ಎಲ್ ಟೆಕ್ನೊ ಸೊಲ್ಯೂಷನ್ ಎಂಬ ಕಚೇರಿಯನ್ನು ಸಹ ನಡೆಸುತ್ತಿದ್ದರು. ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ನಡೆಸಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ದಾಳಿ ವೇಳೆ ಕಂಪ್ಯೂಟರ್ ಸೇರಿ ಹಲವು ವಸ್ತು ಜಪ್ತಿ ಮಾಡಲಾಗಿದೆ.

    ಆರೋಪಿಗಳು ಯಾವುದೇ ಕ್ಷೇತ್ರದ ವೋಟರ್ ಐಡಿ, ಚಾಲನಾ ಪರವಾನಗಿ, ಆಧಾರ್​ ಕಾರ್ಡ್ ಸೇರಿದಂತೆ ನಕಲಿ ದಾಖಲೆಗಳನ್ನು​ ಕೇಳಿದರೂ ಮಾಡಿಕೊಡುತ್ತಿದ್ದರು ಎಂದು ಆರೋಪಿಸಲಾಗಿದೆ. ಈ ಸಂಬಂಧ ಹೆಬ್ಬಾಳ ಪೊಲೀಸ್​ ಠಾಣೆಯಲ್ಲಿ FIR ದಾಖಲಾಗಿದ್ದು, ಬಂಧಿತ ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts