

Kolkatta: ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ( Duragapur Rape Case) ಸಂಬಂಧಪಟ್ಟಂತೆ ಪ್ರಮುಖ ಬೆಳವಣಿಗೆಯೊಂದರಲ್ಲಿ, ಸಂತ್ರಸ್ತೆಯ ತಂದೆ ನೀಡಿದ ದೂರಿನನ್ವಯ ಪ್ರಮುಖ ಆರೋಪಿಯನ್ನು ಪೊಲೀಸರು ಮಂಗಳವಾರ ಸಂಜೆ ಬಂಧಿಸಿದ್ದಾರೆ.
ಸಂತ್ರಸ್ತೆಯ ಹೇಳಿಕೆ ಪ್ರಕಾರ ಸೆಕ್ಷನ್ 164 ಪ್ರಕಾರ ಆರೋಪಿಯೊಂದಿಗೆ ಹೊರಗೆ ಹೋದ ನಂತರ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ತಿಳಿದುಬಂದ ಹಿನ್ನಲೆಯಲ್ಲಿ ಅವನನ್ನು ವಶಕ್ಕೆ ಪಡೆಯಲಾಗಿದೆ. ಸಂತ್ರಸ್ತೆಯ ಸ್ನೇಹಿತ, ಆರೋಪಿಯನ್ನು ನಾಳೆ ( ಬುಧವಾರ ಅ 15) ಬೆಳಿಗ್ಗೆ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಪೊಲೀಸ ಮೂಲಗಳು ಖಚಿತಪಡಿಸಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ. ಪ್ರಕರಣದಲ್ಲಿ ಬಂಧಿಸಲ್ಪಟ್ಟವರ ಸಂಖ್ಯೆ ಸದ್ಯ ಐದಕ್ಕೆ ಏರಿದ್ದು, ಘಟನೆಯ ವಿವಿಧ ಹಂತಗಳಲ್ಲಿ ಎಲ್ಲಾ ಐವರು ಆರೋಪಿಗಳ ಉಪಸ್ಥಿತಿಯನ್ನು ಖಚಿತಪಡಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅಸನ್ಸೋಲ್-ದುರ್ಗಾಪುರ ಪೊಲೀಸ್ ಕಮಿಷನರೇಟ್ನ ಪೊಲೀಸ್ ಆಯುಕ್ತ ಸುನಿಲ್ ಕುಮಾರ್ ಚೌಧರಿ, ತನಿಖೆ ಮುಂದುವರೆದಿದ್ದು, ತನಿಖೆಯ ಸಮಯದಲ್ಲಿ ಬಂಧಿತ ಐವರು ಆರೋಪಿಗಳ ಉಪಸ್ಥಿತಿಯು ದೃಢಪಟ್ಟಿದೆ ಎಂದು ಹೇಳಿದರು. ಸಂತ್ರಸ್ತೆಯ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ನಾವು ಆಕೆಯ ಸ್ನೇಹಿತರ ಬಟ್ಟೆ ಮತ್ತು ಇತರ ವಿವರಗಳನ್ನು ಸಹ ಸಂಗ್ರಹಿಸಿದ್ದೇವೆ. ನಮ್ಮ ತಂಡ ಆಕೆಯ ಸ್ನೇಹಿತನೊಂದಿಗೆ ಅಪರಾಧ ಸ್ಥಳಕ್ಕೆ ಭೇಟಿ ನೀಡಿದ್ದು, ಘಟನೆಯ ಮರುಸೃಷ್ಟಿ ನಡೆಸಲಾಗಿದೆ ಎಂದು ಚೌಧರಿ ತಿಳಿಸಿದರು.
ಸಂತ್ರಸ್ತೆಯ ಹೇಳಿಕೆ ಮತ್ತು ದೈಹಿಕ ಸಾಕ್ಷ್ಯಗಳ ಆಧಾರದ ಮೇಲೆ, ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಒಬ್ಬನೇ ವ್ಯಕ್ತಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ದೃಢಪಟ್ಟಿದೆ ಎಂದು ಅವರು ಹೇಳಿದರು. ವಿಧಿವಿಜ್ಞಾನ ಮತ್ತು ವೈದ್ಯಕೀಯ ವರದಿಗಳಿಗಾಗಿ ಕಾಯಲಾಗುತ್ತಿದ್ದು, ಸಂತ್ರಸ್ತೆಯ ಸ್ನೇಹಿತನ ಪಾತ್ರದ ಕುರಿತಾಗಿ ಇನ್ನೂ ಅನುಮಾನಾವಿದೆ. ಆದ್ದರಿಂದ ತನಿಖೆ ಮುಂದುವರೆದಿದೆ ಎಂದರು.
ಇದನ್ನೂ ಓದಿ:ಚುನಾವಣೆಯಲ್ಲಷ್ಟೇ ರಾಜಕೀಯ ಮಾಡೋಣ
ಇದೇ ಸಂದರ್ಭದಲ್ಲಿ ಪೊಲೀಸರು ಸಾಮೂಹಿಕ ಅತ್ಯಾಚಾರ ಆರೋಪಗಳನ್ನು ತಳ್ಳಿಹಾಕಿದ್ದು, ಇಲ್ಲಿಯವರೆಗಿನ ಲಭ್ಯವಾದ ಸಾಕ್ಷ್ಷಗಳ ಪ್ರಕಾರ, ಒಬ್ಬನೇ ಅಪರಾಧಿಯ ಈ ಕೃತ್ಯದಲ್ಲಿ ಭಾಗಿಯಾಗಿರುವುದು ಕಂಡು ಬರುತ್ತಿದೆ. ಸಂತ್ರಸ್ತೆಯೆ ನೀಡಿದ ಹೇಳಿಕೆ ಮತ್ತು ಭೌತಿಕ ಸಾಕ್ಷ್ಯಗಳ ಪ್ರಕಾರ, ಒಬ್ಬ ವ್ಯಕ್ತಿ ಅತ್ಯಾಚಾರ ಎಸಗಿದ್ದಾನೆ ಎನ್ನುವುದು ಸ್ಪಷ್ಟವಾಗಿದೆ. ನಾವು ಎಲ್ಲಾ ಅಂಶಗಳನ್ನು ಪರಿಶೀಲಿಸುತ್ತಿದ್ದೇವೆ ಮತ್ತು ಬಂಧಿತ ಎಲ್ಲ ವ್ಯಕ್ತಿಗಳನ್ನು ವಿಚಾರಣೆ ನಡೆಸುತ್ತಿದ್ದೇವೆ ಎಂದು ಚೌಧರಿ ಹೇಳಿದರು.
ತನಿಖಾಧಿಕಾರಿಗಳು ಒಬ್ಬ ಆರೋಪಿಯ ಬಟ್ಟೆಗಳನ್ನು ಸಂಗ್ರಹಿಸಿ ಪರೀಕ್ಷೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಮುಂದಿನ ಕ್ರಮಗಳು ಪ್ರಸ್ತುತ ಕಾಯುತ್ತಿರುವ ವಿಧಿವಿಜ್ಞಾನ ಮತ್ತು ವೈದ್ಯಕೀಯ ವರದಿಗಳ ಫಲಿತಾಂಶವನ್ನು ಅವಲಂಬಿಸಿರುತ್ತದೆ ಎಂದು ಪೊಲೀಸರು ಅಭಿಪ್ರಾಯಪಟ್ಟಿದ್ದಾರೆ.(ಏಜೆನ್ಸೀಸ್)