

-ವಿದ್ಯುತ್ ಕಂಬದ ಮೇಲೆ ನೇತಾಡುತ್ತಿರುವ ಮೃತದೇಹ
ಚಿಕ್ಕೋಡಿ: ದುರಸ್ತಿ ಕಾರ್ಯ ವೇಳೆ ವಿದ್ಯುತ್ ಪ್ರವಹಿಸಿ ಕಂಬದ ಮೇಲೆಯೇ ಹೆಸ್ಕಾಂ ಗುತ್ತಿಗೆ ನೌಕರ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿಯ ಹೊಸಪೇಟೆ ಗಲ್ಲಿಯಲ್ಲಿ ನಡೆದಿದೆ.
ಇದನ್ನೂ ಓದಿ: ಅತೀ ಉದ್ದದ ಗಡ್ಡದಿಂದ ಗಿನ್ನಿಸ್ ದಾಖಲೆ ಬರೆದ ಮಹಿಳೆ
ಸಿದ್ದರಾಮ ಕುಪವಾಡೆ (38) ಮೃತ. ಸಿದ್ದರಾಮ ಕುಪವಾಡೆ ಚಿಕ್ಕೋಡಿಯ ದಫೇದರ್‌ಕೋಡಿ ನಿವಾಸಿಯಾಗಿದ್ದಾನೆ. ದುರಸ್ತಿ ಕಾರ್ಯ ವೇಳೆ ವಿದ್ಯುತ್ ಪ್ರವಹಿಸಿ ಕಂಬದ ಮೇಲೆಯೇ ಪ್ರಾಣ ಬಿಟ್ಟಿದ್ದಾನೆ.
ವಿದ್ಯುತ್ ದುರಸ್ತಿ ಕಾರ್ಯಕ್ಕಾಗಿ ಇಂದು ಬೆಳಗ್ಗೆ ಮೂವರು ನೌಕರರು ಬಂದಿದ್ದರು. ಹೊಸಪೇಟೆ ಗಲ್ಲಿ ಹೊರವಲಯದ ಕೃಷಿ ಜಮೀನು ಬಳಿಯ ವಿದ್ಯುತ್ ದುರಸ್ತಿ ಕಾರ್ಯಕ್ಕಾಗಿ ವಿದ್ಯುತ್ ಕಂಬ ಏರಿದ್ದ ಗುತ್ತಿಗೆ ನೌಕರ ಸಿದ್ದರಾಮ ಕುಪವಾಡೆ.ಇಬ್ಬರು ನೌಕರರು ಕೆಳಗೆ ಇದ್ದರೆ, ಸಿದ್ದರಾಮ ವಿದ್ಯುತ್ ಕಂಬವೇರಿ ದುರಸ್ತಿ ಕಾರ್ಯ ಮಾಡುತ್ತಿದ್ದನು. ಈ ವೇಳೆ ಏಕಾಏಕಿ ವಿದ್ಯುತ್ ಪ್ರವಹಿಸಿದೆ.
ವಿದ್ಯುತ್ ಕಂಬದ ಮೇಲೆ ಸಿದ್ದರಾಮ ಕುಪವಾಡೆ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಹೆಸ್ಕಾಂ ಅಧಿಕಾರಿಗಳು, ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.