More

    ಸರ್ಕಾರಿ ನೌಕರರ ದಸರಾ ಕಾರ್ಯಕ್ರಮ

    ಅರಕಲಗೂಡು: ಸರ್ಕಾರಿ ನೌಕರರಿಗೆ ಒತ್ತಡ ಹೆಚ್ಚಾಗಿದ್ದು, ಕಳೆದ 10 ವರ್ಷಗಳಲ್ಲಿ 113 ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಅಕಾಲಿಕವಾಗಿ ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಫದ ಜಿಲ್ಲಾಧ್ಯಕ್ಷ ಕೃಷ್ಣೇಗೌಡ ಕಳವಳ ವ್ಯಕ್ತಪಡಿಸಿದರು.

    ಪಟ್ಟಣದಲ್ಲಿ ಸರ್ಕಾರಿ ನೌಕರರ ಸಂಘದ ವತಿಯಿಂದ ಗುರುವಾರ ಆಯೋಜಿಸಿದ್ದ ಸರ್ಕಾರಿ ನೌಕರರ ದಸರಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರಿ ನೌಕರರು ರಾಜ್ಯ, ಕೇಂದ್ರ ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಜನಸಾಮಾನ್ಯರಿಗೆ ತಲುಪಿಸುತ್ತಾರೆ. ಆದರೆ ಕೆಲಸದ ಒತ್ತಡದಿಂದ 113 ಪಿಡಿಒಗಳು 30-50 ವಯಸ್ಸಿನ ಅಂತರದಲ್ಲಿ ಅಕಾಲಿಕ ಸಾವನ್ನಪ್ಪಿದ್ದಾರೆ ಎಂದು ಸಚಿವರ ದಾಖಲೆಯೇ ಹೇಳುತ್ತಿದೆ. ವೈದ್ಯಕೀಯ ದಾಖಲೆಗಳ ಪ್ರಕಾರ ಎಲ್ಲ ಸರ್ಕಾರಿ ಇಲಾಖೆಗಳ ನೌಕರರ ಆಯಸ್ಸು 5-10 ವರ್ಷ ಕಡಿಮೆಯಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

    ಜಾಗತಿಕ ಮಟ್ಟದಲ್ಲಿ ಮೊಬೈಲ್ ಬಳಕೆಯಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ. ಯುವಕರ-ಯುವತಿಯರಲ್ಲಿ ಮೊಬೈಲ್ ಬಳಕೆ ಹೆಚ್ಚಾಗಿದೆ. ಇದನ್ನು ತಪ್ಪಿಸಬೇಕು. ಮಕ್ಕಳಿಗೆ ಮೊಬೈಲ್ ಕೊಡಿಸುವ ಬದಲು ಪುಸ್ತಕಗಳನ್ನು ನೀಡಬೇಕು. ಇಂದು ಮಕ್ಕಳು ಹೆಚ್ಚು ಅಂಕ ಪಡೆಯುತ್ತಿದ್ದಾರೆ ವಿನಹ ಸಂಸ್ಕಾರವಿಲ್ಲದಾಗಿದೆ. ಹೆಚ್ಚು ಅಂಕ ಪಡೆಯದಿದ್ದರೂ ಪರವಾಗಿಲ್ಲ. ಮಕ್ಕಳಿಗೆ ಸಂಸ್ಕಾರ ಕಲಿಸಿ, ಸಂಸ್ಕಾರವಂತರನ್ನಾಗಿ ಮಾಡಬೇಕು ಎಂದು ಸಲಹೆ ನೀಡಿದರು.

    ತಾಪಂ ಮಾಜಿ ಅಧ್ಯಕ್ಷ ನರಸೇಗೌಡ, ಸರ್ಕಾರಿ ನೌಕರರ ಸಂಘದ ವೆಂಕಟೇಶ್, ಮಹೇಶ್, ಶಿವಸ್ವಾಮಿ, ಪಿಡಬ್ಲುೃಡಿ ಎಇಇ ಇಂದು, ತಾಪಂ ಪ್ರಭಾರ ಇಒ ಪ್ರಕಾಶ್, ಚಂದ್ರಕಾಂತ್ ಮತ್ತಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts