

ಚಿತ್ರದುರ್ಗ: ಕ್ರೀಡಾ ಇಲಾಖೆ ಬೆಂಗಳೂರು ಗ್ರಾಮಾಂತರ ವಿಭಾಗ ಮಟ್ಟದ ದಸರಾ ಕ್ರೀಡಾಕೂಟದ ಅಂಗವಾಗಿ ನಾನಾ ಜಿಲ್ಲೆಗಳಲ್ಲಿ ವಿವಿಧ ಕ್ರೀಡೆಗಳನ್ನು ಏರ್ಪಡಿಸಿದೆ.
ಅ.3ರಂದು ಬೆಳಗ್ಗೆ 9ಕ್ಕೆ ಹೊಸದುರ್ಗ ತಾಲೂಕು ಕ್ರೀಡಾಂಗಣದಲ್ಲಿ ಈಜು ಸ್ಪರ್ಧೆ, 4ರ ಬೆಳಗ್ಗೆ 9ಕ್ಕೆ ಚಿತ್ರದುರ್ಗ ಜಿಲ್ಲಾ ಕ್ರೀಡಾಂಗಣದಲ್ಲಿ ಟೇಬಲ್ ಟೆನ್ನಿಸ್, ಬಾಲ್ ಬ್ಯಾಡ್ಮಿಂಟನ್, ಥ್ರೋಬಾಲ್ ಕ್ರೀಡೆಗಳು ನಡೆಯಲಿವೆ.
4ರ ಬೆಳಗ್ಗೆ 8ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಟೌನ್ ಕ್ರೀಡಾಂಗಣದಲ್ಲಿ ಹ್ಯಾಂಡ್ಬಾಲ್ ಮತ್ತು ನೆಟ್ಬಾಲ್ ಕ್ರೀಡೆಗಳು ನಡೆಯಲಿವೆ.
5, 6ರ ಬೆಳಗ್ಗೆ 8ಕ್ಕೆ ತುಮಕೂರು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಅಥ್ಲೆಟಿಕ್ಸ್, ಟೆಕ್ವಾಂಡೊ, ಜಿಮ್ನಾಸ್ಟಿಕ್, ವುಶು, ಕಬಡ್ಡಿ ಕ್ರೀಡೆಗಳು ನಡೆಯಲಿವೆ. 5, 6ರ ಬೆಳಗ್ಗೆ 8ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಕ್ಕಿತಿಮ್ಮನಹಳ್ಳಿ ಹಾಕಿ ಕ್ರೀಡಾಂಗಣದಲ್ಲಿ ಹಾಕಿ ಕ್ರೀಡೆ ನಡೆಯಲಿದೆ.
6ರ ಬೆಳಗ್ಗೆ 9ಕ್ಕೆ ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ಖೋಖೋ, ಬ್ಯಾಸ್ಕೇಟ್ಬಾಲ್ ಮತ್ತು ಕುಸ್ತಿ ಕ್ರೀಡೆಗಳು ನಡೆಯಲಿವೆ. 6, 7ರ ಬೆಳಗ್ಗೆ 9 ಗಂಟೆಯಿಂದ ಶಿವಮೊಗ್ಗದ ನೆಹರು ಜಿಲ್ಲಾ ಕ್ರೀಡಾಂಗಣದಲ್ಲಿ ಯೋಗ, ವಾಲಿಬಾಲ್, ಬ್ಯಾಡ್ಮಿಂಟನ್, ಟೆನ್ನಿಸ್ ಕ್ರೀಡೆಗಳು.
ಸೆಪ್ಟೆಂಬರ್ 23ರಿಂದ 2 ದಿನಗಳ ಕಾಲ ಚಿತ್ರದುರ್ಗದಲ್ಲಿ ನಡೆದಿದ್ದ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟದ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಮತ್ತು ದ್ವಿತೀಯ ಮತ್ತು ಗುಂಪು ಆಟಗಳಲ್ಲಿ ಪ್ರಥಮ ಸ್ಥಾನ ಪಡೆದ ಪುರುಷ ಮತ್ತು ಮಹಿಳಾ ಕ್ರೀಡಾಪಟುಗಳು ಬೆಂಗಳೂರು ಗ್ರಾಮಾಂತರ ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಬಹುದಾಗಿದೆ.
ಚಿತ್ರದುರ್ಗ ಜಿಲ್ಲೆ ಸ್ಪರ್ಧಿಗಳು, ಆಯಾ ಜಿಲ್ಲೆಗಳಲ್ಲಿ ನಡೆಯುವ ಕ್ರೀಡಾಕೂಟದಲ್ಲಿ ಭಾಗವಹಿಸಲು ನಿಗದಿಪಡಿಸಿದ ದಿನಾಂಕಗಳಂದು ವರದಿ ಮಾಡಿಕೊಳ್ಳಲು ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಕ್ರೀಡಾ ಇಲಾಖೆ ಕಚೇರಿಯನ್ನು ಸಂಪರ್ಕಿಸಬಹುದು.