More

    ಮಳೆ, ಗಾಳಿ ಆರ್ಭಟಕ್ಕೆ ಹಳಿ ತಪ್ಪಿದ ಮುಂಬೈ ಮಹಾನಗರದ ಜನಜೀವನ!

    ಮುಂಬೈ: ವಾಣಿಜ್ಯ ನಗರ ಮುಂಬೈನಲ್ಲಿ ಧೂಳು ಸಹಿತ ಭಾರೀ ಬಿರುಗಾಳಿ ಬೀಸಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ಒಂದೊಂದು ದೃಶ್ಯವೂ ಭಯಾನಕವಾಗಿದ್ದು, ಮುಂಬೈ ನಿವಾಸಿಗಳು ಧೂಳು, ಬಿರುಗಾಳಿಯ ಅಬ್ಬರಕ್ಕೆ ತತ್ತರಿಸಿ ಹೋಗಿದ್ದಾರೆ.

    ಇದನ್ನೂ ಓದಿ: ಒಂದು ಕೋಟಿ ಹಣದೊಂದಿಗೆ ಲವರ್ ಜೊತೆ ಎಸ್ಕೇಪ್!: ತಿಂಗಳ ಬಳಿಕ ಮಗಳ ವಿರುದ್ಧ ದೂರು ನೀಡಿದ ಉದ್ಯಮಿ

    ಮಧ್ಯಾಹ್ನ 3 ಗಂಟೆ ಸುಮಾರಿಗೆ ಮುಂಬೈ ಮಹಾ ನಗರದಲ್ಲಿ ಕತ್ತಲು ಆವರಿಸಿತ್ತು. ಮುಂಬೈ ನಗರದ ದಾದರ್, ಕುರ್ಲಾ, ಮಾಹಿಮ್, ಘಾಟ್‌ಕೋಪರ್, ಮುಲುಂಡ್ ಮತ್ತು ವಿಖ್ರೋಲಿ ಉಪನಗರಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಿದ್ದು, ದಕ್ಷಿಣ ಮುಂಬೈನ ಕೆಲವು ಭಾಗಗಳಲ್ಲಿ ತುಂತುರು ಮಳೆಯಾಗಿದೆ. ಥಾಣೆ, ಅಂಬರ್‌ನಾಥ್, ಬದ್ಲಾಪುರ್, ಕಲ್ಯಾಣ್ ಮತ್ತು ಉಲ್ಲಾಸ್‌ನಗರದಲ್ಲಿ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗಿದೆ.

    ಮಳೆ, ಗಾಳಿ ಆರ್ಭಟಕ್ಕೆ ಹಳಿ ತಪ್ಪಿದ ಮುಂಬೈ ಮಹಾನಗರದ ಜನಜೀವನ!

    ಮುಂಬೈ ನಗರ ಮಾತ್ರವಲ್ಲ, ಮಹಾರಾಷ್ಟ್ರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಹಾಗೂ ಬಿರುಗಾಳಿಯ ಮುನ್ನೆಚ್ಚರಿಕೆ ನೀಡಲಾಗಿದೆ. ಥಾಣೆ, ಪಾಲ್‌ಘರ್, ರಾಯ್‌ಗಢ ಸೇರಿದಂತೆ ಹಲವೆಡೆ ಭಾರೀ ಮಳೆ ಮುನ್ನೆಚ್ಚರಿಕೆ ನೀಡಲಾಗಿದೆ.

    ಬಿರುಗಾಳಿಯ ರಭಸಕ್ಕೆ ಮುಂಬೈನ ಘಟಕೋಪುರದ ಪೆಟ್ರೋಲ್ ಬಂಕ್ ಮೇಲೆ ದೊಡ್ಡದಾದ ಜಾಹೀರಾತು ಫಲಕ ಬಿದ್ದಿದೆ. ದೊಡ್ಡ ಜಾಹೀರಾತು ಫಲಕ ಬೀಳುತ್ತಿರುವ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ. ಜಾಹೀರಾತು ಫಲಕ ಬಿದ್ದ ಪರಿಣಾಮ ಪೆಟ್ರೋಲ್ ಬಂಕ್‌ನಲ್ಲಿದ್ದ 7 ಮಂದಿಗೆ ತೀವ್ರ ಗಾಯಗಳಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

    ಮಳೆ, ಗಾಳಿ ಆರ್ಭಟಕ್ಕೆ ಹಳಿ ತಪ್ಪಿದ ಮುಂಬೈ ಮಹಾನಗರದ ಜನಜೀವನ!

    ವಿಮಾನ ಸಂಚಾರದಲ್ಲಿ ವ್ಯತ್ಯಯ: ಧೂಳು ಸಹಿತ ಬಿರುಗಾಳಿಯಿಂದ ದೇಶದ ಅತ್ಯಂತ ಹೆಚ್ಚು ಚಟುವಟಿಕೆಯಿಂದ ಕೂಡಿರುವ ಈ ವಿಮಾನ ನಿಲ್ದಾಣದಲ್ಲಿ ವಿಮಾನಯಾನವನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲಾಯ್ತು. ಮುಂಬೈ ಮಹಾ ನಗರಕ್ಕೆ ಆಗಮಿಸುವ ಹಾಗೂ ನಿರ್ಗಮಿಸುವ ವಿಮಾನಗಳ ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ.

    ಮುಂಬೈ ನಗರದ ಹಲವು ಕಡೆ ಮರದ ರೆಂಬೆ ಕೊಂಬೆಗಳು ಮುರಿದು ಬಿದ್ದಿವೆ. ದ್ವಿಚಕ್ರ ವಾಹನ ಸವಾರರು, ಕಾರ್ ಡ್ರೈವರ್‌ಗಳಿಗೆ ಎಚ್ಚರಿಕೆಯಿಂದ ವಾಹನ ಚಲಾಯಿಸಲು ಪೊಲೀಸರು ಸಲಹೆ ನೀಡಿದ್ದಾರೆ. ಪಶ್ಚಿಮ ರೈಲ್ವೇ ಇಲಾಖೆ ಕೂಡ ಜನರಿಗೆ ಎಚ್ಚರಿಕೆಯ ಸಂದೇಶ ನೀಡಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts