More

    ಕರ್ತವ್ಯ ನಿರ್ವಹಣೆಗೆ ಅವಕಾಶ ಕೊಡಿ


    ಸಿಂಧನೂರು: ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ಗಳ ಅತಿಥಿ ಉಪನ್ಯಾಸಕರ ಸಂಘದ ತಾಲೂಕು ಘಟಕದಿಂದ ನಗರದ ಸರ್ಕಾರಿ ಪದವಿ ಮಹಾವಿದ್ಯಾಲಯದ ಆವರಣದಲ್ಲಿ ಸೋಮವಾರ ಅನಿರ್ದಿಷ್ಟಾವಧಿ ಧರಣಿ ಆರಂಭಿಸಲಾಯಿತು.

    ಅತಿಥಿ ಉಪನ್ಯಾಸಕರಿಗೆ ಶೈಕ್ಷಣಿಕ ವರ್ಷವಿಡೀ ಕಾರ್ಯ ಮತ್ತು ವೇತನ ನೀಡುವ ಹಾಗೂ ಸೇವಾ ಸಕ್ರಮ ನೀತಿಯನ್ನು ಕಾಲೇಜು ಶಿಕ್ಷಣ ಇಲಾಖೆ ಅನುಸರಿಸುತ್ತಿಲ್ಲ. ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡಿಕೊಂಡರೂ ಕರ್ತವ್ಯಕ್ಕೆ ಹಾಜರುಪಡಿಸಿಕೊಂಡಿಲ್ಲ ಎಂದು ದೂರಿದರು.
    ಕಲ್ಯಾಣ ಕರ್ನಾಟಕ ಭಾಗದ ರಾಯಚೂರು, ಗುಲ್ಬರ್ಗ ಹಾಗೂ ಬಳ್ಳಾರಿ ವಿಶ್ವವಿದ್ಯಾಲಯಗಳಲ್ಲಿ ಅತಿಥಿ ಉಪನ್ಯಾಸಕರಿಗೆ ಅನ್ಯಾಯವಾಗುತ್ತಿದ್ದು, ಕಳೆದ ವರ್ಷಗಳಂತೆ ಕಾರ್ಯನಿರ್ವಹಿಸಲು ಅವಕಾಶ ಕಲ್ಪಿಸಿಕೊಡಬೇಕು. ಈ ಕುರಿತು ಮನವಿ ಸಲ್ಲಿಸಿದ್ದರೂ ಸರ್ಕಾರ ಕ್ರಮಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಕಲ್ಯಾಣ ಕರ್ನಾಟಕ ಭಾಗದ ಎಲ್ಲ ಅತಿಥಿ ಉಪನ್ಯಾಸಕರನ್ನು ಸೇವೆಯಲ್ಲಿ ಮುಂದುವರಿ ಸೇವೆ ಕಾಯಂಗೊಳಿಸಬೇಕು. ಎಲ್ಲ ಅತಿಥಿ ಉಪನ್ಯಾಸಕರಿಗೆ ಆರೋಗ್ಯ ವಿಮೆ, ಭವಿಷ್ಯ ನಿಧಿ ಸೌಲಭ್ಯ ಕಲ್ಪಿಸಬೇಕು. ಮಹಿಳಾ ಅತಿಥಿ ಉಪನ್ಯಾಸಕರಿಗೆ ಹೆರಿಗೆ ರಜೆ ಹಾಗೂ ವೇತನ ನೀಡಬೇಕೆಂದು ಒತ್ತಾಯಿಸಲಾಯಿತು.

    ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಧರಣಿ ಸ್ಥಳಕ್ಕೆ ಭೇಟಿ ನೀಡಿ, ಅತಿಥಿ ಉಪನ್ಯಾಸಕರ ಬೇಡಿಕೆ ಆಲಿಸಿದರು. ಕೂಡಲೇ ಸರ್ಕಾರ ನ್ಯಾಯುತ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿದರು. ನಾರಾಯಣ ಬೆಳಗುರ್ಕಿ, ಶಂಕರ್ ವಾಲೇಕಾರ, ಪರಶುರಾಮ ಮಲ್ಲಾಪುರ, ಮಲ್ಲಯ್ಯ ಹಿರೇಮಠ, ಶೋಭಾ ತೊರಗಲ್, ಶರಣಮ್ಮ, ಬಿ.ಜ್ಯೋತಿ, ವೆಂಕಟೇಶ, ಉಮೇಶ ಹಟ್ಟಿ, ಶಂಕರ ವಿಶ್ವಕರ್ಮ, ಚಿದಾನಂದ ಟಿ., ವೀರೇಶ, ವಿಜಯಲಕ್ಷ್ಮೀ, ಅನುಪಮಾ ಜಿ.ಎಚ್., ಡಾ.ಅರುಣಕುಮಾರ, ಮಹಾದೇವ, ಕೆ.ಬಸವರಾಜ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts