More

    24 ಗಂಟೆ ಆಸ್ಪತ್ರೆಯಲ್ಲೇ ಇರಲಿದ್ದಾರೆ ಸದಾನಂದ ಗೌಡರು; ವೈದ್ಯರು ಏನೆನ್ನುತ್ತಾರೆ?

    ಬೆಂಗಳೂರು: ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸಿದ್ದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿಗೆ ವಾಪಾಸು ಕರೆತರಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸಚಿವರ ಆರೋಗ್ಯ ಸುಸ್ಥಿರವಾಗಿದ್ದು, ಎಲ್ಲ ಪ್ಯಾರಾಮೀಟರ್​ಗಳು ಸಹಜ ಸ್ಥಿತಿಗೆ ಮರಳಿರುವುದಾಗಿ ಬೆಂಗಳೂರಿನ ವೈದ್ಯರು ತಿಳಿಸಿದ್ದಾರೆ.

    ಇದನ್ನೂ ಓದಿ: ಮೋದಿಜೀ ನಿಮ್ಮ ಬಗ್ಗೆ ಗೌರವವಿದೆ, ಆದರೆ ಕೆಳಮಟ್ಟದ ಅಧಿಕಾರಿಗಳಿಂದಾಗಿ ನಾನು ಸಾಯುತ್ತಿದ್ದೇನೆ ಎಂದು ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಯುವಕ!

    ಬಿಜೆಪಿ ಕಾರ್ಯಕಾರಿಣಿ ಸಭೆಗೆ ಹೋಗಿದ್ದ ಡಿವಿಎಸ್​, ಶಿವಮೊಗ್ಗದಿಂದ ಚಿತ್ರದುರ್ಗಕ್ಕೆ ಭಾನುವಾರ ಬಂದಿದ್ದರು. ಕಾರಿನಿಂದ ಕೆಳಗೆ ಇಳಿಯುತ್ತಲೇ ಕುಸಿದು ಬಿದ್ದ ಅವರನ್ನು ತಕ್ಷಣ ಅಂಗರಕ್ಷಕರು ಖಾಸಗಿ ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಮತ್ತಷ್ಟು ಚಿಕಿತ್ಸೆಗಾಗಿ ಬೆಂಗಳೂರಿನ ಹೆಬ್ಬಾಳದ ಆಸ್ಟರ್​ ಆಸ್ಪತ್ರೆಗೆ ದಾಖಲಿಸಲು ಆಂಬುಲೆನ್ಸ್​ನಲ್ಲಿ ಸಚಿವರನ್ನು ಕರೆತರಲಾಗಿದೆ. ಆಸ್ಟರ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿರುವ ಡಾ.ಬೃಂದ ಮಾತನಾಡಿ, ಸದಾನಂದ ಅವರ ಆರೋಗ್ಯ ಸುಸ್ಥಿರವಾಗಿದೆ ಎಂದು ತಿಳಿಸಿದ್ದಾರೆ.

    ಚಿತ್ರದುರ್ಗ ಆಸ್ಪತ್ರೆ ಸೇರುವಾಗ ಅವರ ಶುಗರ್​ ಲೆವೆಲ್​ ಕಡಿಮೆಯಾಗಿತ್ತು. ಅದಾದ ನಂತರ ಅವರ ಆರೋಗ್ಯ ಸಹಜ ಸ್ಥಿತಿಗೆ ಮರಳಿದೆ ಎಂದು ಅವರು ತಿಳಿಸಿದ್ದಾರೆ. 24 ಗಂಟೆಗಳ ಕಾಲ ಮೇಲ್ವಿಚಾರಣೆಯಲ್ಲಿ ಅವರಿರಲಿದ್ದಾರೆ ಎಂದು ಅವರು ಹೇಳಿದ್ದಾರೆ.

    ಇದನ್ನೂ ಓದಿ: ಯಡಿಯೂರಪ್ಪ ಅವರೇ ಸುಪ್ರೀಂ, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಬಿಜೆಪಿ ಸಭೆ ಬಳಿಕ ಘೋಷಣೆ

    ಈ ಕುರಿತಾಗಿ ಸಚಿವರು ಕೂಡ ಪ್ರತಿಕ್ರಿಯಿಸಿದ್ದು, ‘ನನ್ನ ಆರೋಗ್ಯ ಸುಸ್ಥಿರವಾಗಿದೆ. ಸಕ್ಕರೆ ಅಂಶ ಕಡಿಮೆಯಾಗಿ ಸ್ವಲ್ಪ ಸುಸ್ತಾಗಿತ್ತು. ಈಗ ಆರಾಮಾಗಿದ್ದೇನೆ. ಎಕೊ, ಇಸಿಜಿ ಸೇರಿದಂತೆ ಎಲ್ಲಾ ಪ್ಯಾರಾಮಿಟರ್ ಗಳು ಸಹಜವಾಗಿವೆ. ಸದೃಢ ಆರೋಗ್ಯಕ್ಕಾಗಿ ಶುಭ ಹಾರೈಸಿದ ಎಲ್ಲರಿಗೂ ಧನ್ಯವಾದಗಳು.

    ನನ್ನ ಆರೋಗ್ಯ ಸುಸ್ಥಿರವಾಗಿದೆ. ಸಕ್ಕರೆ ಅಂಶ ಕಡಿಮೆಯಾಗಿ ಸ್ವಲ್ಪ ಸುಸ್ತಾಗಿತ್ತು. ಈಗ ಆರಾಮಾಗಿದ್ದೇನೆ. ಎಕೊ, ಇಸಿಜಿ ಸೇರಿದಂತೆ ಎಲ್ಲಾ ಪ್ಯಾರಾಮಿಟರ್ ಗಳು ಸಹಜವಾಗಿವೆ. ಸದೃಢ ಆರೋಗ್ಯಕ್ಕಾಗಿ ಶುಭ ಹಾರೈಸಿದ ಎಲ್ಲರಿಗೂ ಧನ್ಯವಾದಗಳು.’ ಎಂದು ತಿಳಿಸಿದ್ದಾರೆ.

    ಬೆಂಗಳೂರಿನ ಆಸ್ಪತ್ರೆಗೆ ಸದಾನಂದಗೌಡ ಶಿಫ್ಟ್​: ಸಚಿವರ ಆರೋಗ್ಯದ ಬಗ್ಗೆ ವೈದ್ಯರು ಹೇಳಿದ್ದೇನು?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts