ಬೆಂಗಳೂರಿನ ಆಸ್ಪತ್ರೆಗೆ ಸದಾನಂದಗೌಡ ಶಿಫ್ಟ್​: ಸಚಿವರ ಆರೋಗ್ಯದ ಬಗ್ಗೆ ವೈದ್ಯರು ಹೇಳಿದ್ದೇನು?

ಚಿತ್ರದುರ್ಗ: ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ನಗರದ ಬಸವೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಸಚಿವರನ್ನು ಬೆಂಗಳೂರಿನ ಆಸ್ಪತ್ರೆಗೆ ಝೀರೋ ಟ್ರಾಫಿಕ್​ನಲ್ಲಿ ಆಂಬುಲೆನ್ಸ್​ ಮೂಲಕ ಕರೆದೊಯ್ಯಲಾಗಿದೆ. ಬಿಜೆಪಿ ಕಾರ್ಯಕಾರಿಣಿ ಸಭೆಗೆ ಹೋಗಿದ್ದ ಡಿವಿಎಸ್​, ಶಿವಮೊಗ್ಗದಿಂದ ಚಿತ್ರದುರ್ಗಕ್ಕೆ ಭಾನುವಾರ ಬಂದಿದ್ದರು. ಕಾರಿನಿಂದ ಕೆಳಗೆ ಇಳಿಯುತ್ತಲೇ ಕುಸಿದು ಬಿದ್ದ ಅವರನ್ನು ತಕ್ಷಣ ಅಂಗರಕ್ಷಕರು ಖಾಸಗಿ ಆಸ್ಪತ್ರೆಗೆ ಕರೆದೊಯ್ದರು. ಇದನ್ನೂ ಓದಿರಿ ಎನ್​ಡಿಎ ಜತೆ ಜೆಡಿಎಸ್​ ವಿಲೀನ: ಬಿಜೆಪಿ ವಿರುದ್ಧ ಕುಮಾರಸ್ವಾಮಿ ಆಕ್ರೋಶ ಸ್ಫೋಟ … Continue reading ಬೆಂಗಳೂರಿನ ಆಸ್ಪತ್ರೆಗೆ ಸದಾನಂದಗೌಡ ಶಿಫ್ಟ್​: ಸಚಿವರ ಆರೋಗ್ಯದ ಬಗ್ಗೆ ವೈದ್ಯರು ಹೇಳಿದ್ದೇನು?