More

    ಹಿರಿಯ ನಾಯಕರು ಚುನಾವಣಾ ರಾಜಕಾರಣದಿಂದ ದೂರಾದರೆ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ: ಸದಾನಂದಗೌಡ

    ಮಂಡ್ಯ: ಹಿರಿಯ ನಾಯಕರು ಚುನಾವಣಾ ರಾಜಕಾರಣದಿಂದ ದೂರಾದರೆ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ ಎಂಬುದನ್ನು ಹಿರಿಯ ನಾಯಕರು ಆಲೋಚನೆ ಮಾಡಬೇಕು ಎಂದು ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದ ಸಂಸದ ಡಿ.ವಿ. ಸದಾನಂದಗೌಡ ಅಭಿಪ್ರಾಯಪಟ್ಟಿದ್ದಾರೆ.

    ಮಂಡ್ಯದಲ್ಲಿ ಈ ಕುರಿತು ಮಾತನಾಡಿದ ಡಿವಿಎಸ್​, ಹಿರಿಯ ನಾಯಕರ ಅನುಭವ ಹಾಗೂ ಅವರ ಹಿಂಬಾಲಕರ ಪಡೆಯನ್ನು ಹೈಕಮಾಂಡ್​ ಸಮರ್ಥವಾಗಿ ಬಳಸಿಕೊಳ್ಳಬೇಕು ಎಂಬುದರ ಕುರಿತು ಚಿಂತನೆ ನಡೆಸಬೇಕು ಎಂದಿದ್ದಾರೆ.

    ಹಿರಿಯ ನಾಯಕರಿಗೆ ಹೆಚ್ಚಿನ ಅನುಭವ ಇರುತ್ತದೆ. ಅವರಿಗೆ ಅವರದ್ದೆ ಆದ ಹಿಂಬಾಲಕರ ಪಡೆ ಇರುತ್ತದೆ. ಅವರನ್ನು ಹೇಗೆ ಬಳಸಿಕೊಳ್ಳಬೇಕು ಎಂಬುದರ ಬಗ್ಗೆ ವರಿಷ್ಠರು ಚಿಂತನೆ ನಡೆಸಬೇಕು. ನನ್ನನ್ನು ಉಪಯೋಗಿಸಿಕೊಂಡರೆ ಪಕ್ಷಕ್ಕಾಗಿ ದುಡಿಯುತ್ತೇನೆ ಇಲ್ಲವಾದಲ್ಲಿ ಸುಖ ಜೀವನದಲ್ಲಿ ಇರುತ್ತೇನೆ ಎಂದು ಪರೋಕ್ಷವಾಗಿ ಬಿಜೆಪಿ ಹೈಕಮಾಂಡ್​ ವಿರುದ್ಧ ಗುಡುಗಿದ್ದಾರೆ.

    SadanandaGowda

    ಇದನ್ನೂ ಓದಿ: ಬಿಜೆಪಿಯ ಜಾಮೂನು ತಿನ್ನುತ್ತಿರುವ ಕುಮಾರಸ್ವಾಮಿಯವರು ಮುಂದೆ ವಿಷ ತಿನ್ನಲು ತಯಾರಿರುವುದು ಒಳ್ಳೆಯದು: ರಾಜ್ಯ ಕಾಂಗ್ರೆಸ್

    ಸತ್ತಾಗ ನನ್ನ ದೇಹದ ಮೇಲೆ ಬಿಜೆಪಿ ಬಾವುಟ ಹಾಕಬೇಕು ಎಂಬ ರಾಜನೀತಿ ನನ್ನದಲ್ಲ. ಹೊಸ ಅಭ್ಯರ್ಥಿ ಹುಡುಕಲು ಸಾಧ್ಯವಾಗುತ್ತದೆ ಎಂಬ ಕಾರಣಕ್ಕೆ ಚುನಾವಣೆಗೂ ಆರು ತಿಂಗಳ ಮುಂಚೆಯೇ ನನ್ನ ನಿರ್ಧಾರವನ್ನು ತಿಳಿಸಿದ್ಧೇನೆ. ನನ್ನ ಕ್ಷೇತ್ರದಲ್ಲಿ ಸುಮಲತಾ ಅವರು ಸ್ಪರ್ಧಿಸುವ ಬಗ್ಗೆ ಹೈಕಮಾಂಡ್​ ನಿರ್ಧರಿಸುತ್ತದೆ ಎಂದಿದ್ದಾರೆ.

    ಚುನಾವಣಾ ರಾಜಕೀಯದಿಂದ ದೂರ ಇರುವುದಾಗಿ ಹೇಳಿದ ಬಳಿಕ ನನಗೆ ಸಾವಿರಕ್ಕೂ ಫೋನ್​ ಕರೆಗಳು ಬಂದಿವೆ. ಕೆಲವರು ತಾವು ಕೂಡ ಈ ವಿಚಾರವಾಗಿ ಮೌನ ವಹಿಸಿರುವುದಾಗಿ ಹೇಳಿದ್ದಾರೆ. ಆದರೆ, ನಾನು ಹಾಗೆ ಮಾಡದಂತೆ ಹೇಳಿದ್ದೇನೆ. ರಾಜಕಾರಣದಲ್ಲಿ ಮುಂದುವರೆಯುವಂತೆ ಸೂಚಿಸಿದ್ದೇನೆ. ನಾನು 25 ವರ್ಷದ ರಾಜಕೀಯ ಚಟುವಟಿಕೆ ನಂತರ ನಿವೃತ್ತಿ ಹೊಂದುವುದಾಗಿ ಯೋಚಿಸಿದ್ದೆ ಅದರಂತೆ ನಿರ್ಧಾರವನ್ನು ಪ್ರಕಟಿಸಿದ್ದೇನೆ. ಇದರ ಹಿಂದೆ ಯಾರ ಒತ್ತಡವೂ ಇಲ್ಲ ಎಂದು ಹೇಳಿದ್ದಾರೆ.

    ಬಿಜೆಪಿಗೆ ಹಿನ್ನಡೆಯಾದಂತಹ ಸಂದರ್ಭದಲ್ಲಿ ಪಕ್ಷಕ್ಕೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದ್ದೇನೆ. ನಾನು ಇದುವರೆಗೂ ಯಾರಿಗೂ ಬೆಣ್ಣೆ ಹಚ್ಚಿ ಅವರ ಹಿಂದೆ ಚೀಲ ಹಿಡಿದುಕೊಂಡು ಹೋಗುವ ಕೆಲಸ ಮಾಡಿಲ್ಲ. ಕಳೆದ ಚುನಾವಣೆ ಸಂದರ್ಭದಲ್ಲಿ ನಿವೃತ್ತಿಯಾಗಬೇಕೆಂದು ನಿರ್ಧರಿಸಿದ್ದೆ. ಆದರೆ, ಪಕ್ಷದ ಒತ್ತಡಕ್ಕೆ ಮಣಿದು ಸ್ಪರ್ಧಿಸಿದೆ ಎಂದು ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದ ಸಂಸದ ಡಿ.ವಿ. ಸದಾನಂದಗೌಡ ಹೇಳಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts