More

  ಸಾವಿನಲ್ಲೂ ಸಾರ್ಥಕತೆ ಮೆರೆದ ದ್ವಾರಕೀಶ್

  ಬೆಂಗಳೂರು: ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಅವರು ಇಂದು (ಏಪ್ರಿಲ್ 16) ನಿಧನ ಹೊಂದಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ಅವರ ಸಾವು ಚಿತ್ರರಂಗಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ. ಕನ್ನಡದಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಅವರು ಇನ್ನಿಲ್ಲ ಎಂಬ ಸುದ್ದಿ ಸಾಕಷ್ಟು ನೋವುಂಟು ಮಾಡಿದೆ. ಹಲವು ದಿಗ್ಗಜರ ಜೊತೆ ಅವರು ನಟಿಸಿ ಫೇಮಸ್ ಆಗಿದ್ದರು. ದ್ವಾರಕೀಶ್ ಅವರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

  ಇದನ್ನೂ ಓದಿ: ಬಿಜೆಪಿಗೆ ಗುಡ್​ ಬೈ ಹೇಳಿದ ಕರಡಿ ಸಂಗಣ್ಣ! ನಾಳೆ ಕಾಂಗ್ರೆಸ್‌ ಸೇರ್ಪಡೆ ಬಹುತೇಕ…?

  ನಟ ದ್ವಾರಕೀಶ್ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ದ್ವಾರಕೀಶ್ ಕಣ್ಣುದಾನ ಮಾಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಡಾ.ರಾಜ್‌ಕುಮಾರ್, ಪುನೀತ್ ರಾಜ್‌ಕುಮಾರ್ ನೇತ್ರದಾನ ಮಾಡಿದ್ದರು. ಇದೇ ಸಾಲಿಗೆ ದ್ವಾರಕೀಶ್ ಸೇರಿದ್ದಾರೆ, ನೇತ್ರದಾನ ಮಾಡಿ ಇತರರ ಬಾಳಿಗೆ ಬೆಳಕಾಗಿದ್ದಾರೆ.

  ದ್ವಾರಕೀಶ್ ಅವರು ನಾರಾಯಣ ನೇತ್ರಾಲಯಕ್ಕೆ ತಮ್ಮ ಕಣ್ಣುಗಳನ್ನು ದಾನ ಮಾಡಿದ್ದಾರೆ. ದ್ವಾರಕೀಶ್​ ನಿರ್ಧಾರದಂತೆ ತನ್ನ ಕುಟುಂಬಸ್ಥರು ಒಪ್ಪಿಗೆ ಸೂಚಿಸಿದರು. ಡಾ.ಶೈಲಜಾ ನೇತೃತ್ವದಲ್ಲಿ ನೇತ್ರ ಕಸಿ ಕಾರ್ಯ ನಡೆದಿದೆ.

  ಸ್ಯಾಂಡಲ್‌ವುಡ್ ನಟ ಕಮ್ ನಿರ್ದೇಶಕ ದ್ವಾರಕೀಶ್ (Dwarakish) ಅವರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ದ್ವಾರಕೀಶ್ ನೇತ್ರದಾನ (Eye Donate) ಮಾಡುವ ಮೂಲಕ ಯುವಜನತೆಗೆ ಮಾದರಿಯಾಗಿದ್ದಾರೆ. ಡಾ.ರಾಜ್‌ಕುಮಾರ್, ಪುನೀತ್ ರಾಜ್‌ಕುಮಾರ್ ನೇತ್ರದಾನ ಮಾಡಿದ್ದರು. ಈಗ ದ್ವಾರಕೀಶ್ ಕೂಡ ತಮ್ಮ ಸಾವಿನ ನಂತರ ಇತರರ ಬಾಳಿಗೆ ಬೆಳಕಾಗಿದ್ದಾರೆ.

  ದ್ವಾರಕೀಶ್ ಕಣ್ಣನ್ನು ನಾರಾಯಣ ನೇತ್ರಾಲಯಕ್ಕೆ ದಾನ ಮಾಡಿದ್ದಾರೆ. ಕುಟುಂಬದ ಸಮ್ಮತಿಯ ಮೇರೆಗೆ ಡಾ.ಶೈಲಜಾ ನೇತೃತ್ವದಲ್ಲಿ ನೇತ್ರ ಕಸಿ ಕಾರ್ಯ ನಡೆದಿದೆ. ಈ ಬಗ್ಗೆ ವೈದ್ಯೆ ಶೈಲಜಾ ಮಾತನಾಡಿದ್ದಾರೆ. ಇದನ್ನೂ ಓದಿ:ವಿಜಯ್ ದೇವರಕೊಂಡ ಬಳಿಕ ನಿತಿನ್ ಸಿನಿಮಾದಿಂದಲೂ ಶ್ರೀಲೀಲಾ ಔಟ್ ದ್ವಾರಕೀಶ್ ಅವರ ಕಣ್ಣನ್ನು ನಾಳೆ ಪರೀಕ್ಷೆ ಮಾಡಲಾಗುತ್ತದೆ. ಆ ನಂತರ ನಾಳೆಯೇ ಇನ್ನೊಬ್ಬರಿಗೆ ಕಣ್ಣು ಹಾಕಲಾಗುತ್ತದೆ ಎಂದು ಡಾ.ಶೈಲಜಾ ತಿಳಿಸಿದ್ದಾರೆ

  ಬುಧವಾರ ಅಂತ್ಯಕ್ರಿಯೆ: ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕ ದ್ವಾರಕೀಶ್ ನಿಧನರಾಗಿದ್ದು, ಅಂತ್ಯಕ್ರಿಯೆ ಬುಧವಾರ ಬೆಳಿಗ್ಗೆ 11:30ಕ್ಕೆ ಚಾಮರಾಜಪೇಟೆಯ ಟಿಆರ್​​ ಮೀಲ್​ನಲ್ಲಿ ನಡೆಯಲಿದೆ. ದ್ವಾರಕೀಶ ಅವರ ಪಾರ್ಥೀವ ಶರೀರವು ಬುಧವಾರ ಬೆಳಗಿನ ಜಾವದವರೆಗೂ ಅವರ ನಿವಾಸದಲ್ಲಿಯೇ ಇರಲಿದ್ದು, ಗಣ್ಯರ ಮತ್ತು ಕುಟುಂಬಸ್ಥರು ಅಂತಿಮ ದರ್ಶನ ಪಡೆದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ.

   

  ಮುಂಬೈ: ಹಾರ್ದಿಕ್ ಪಾಂಡ್ಯ ಸಹೋದರನ ಪೊಲೀಸ್​ ಕಸ್ಟಡಿ ವಿಸ್ತರಣೆ!

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts