

ಬೆಂಗಳೂರು: ಡಿವೈಎಸ್ಪಿ ಗಣಪತಿ ಅಸಹಜ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಸಲ್ಲಿಸಿದ್ದ ಬಿ ರಿಪೋರ್ಟ್ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ. ಇದರೊಂದಿಗೆ ಅಂದಿನ ಗೃಹ ಸಚಿವ ಕೆ.ಜೆ.ಜಾರ್ಜ್ ಮತ್ತು ಇಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಭಾರಿ ಹಿನ್ನಡೆಯಾಗಿದೆ. ಅವರ ಸಂಕಷ್ಟ ಇನ್ನಷ್ಟು ಹೆಚ್ಚಾಗಿದೆ.
ಪ್ರಕರಣದ ತನಿಖೆ ನಡೆಸಿದ್ದ ಸಿಬಿಐ ಇತ್ತೀಚೆಗೆ ಕೋರ್ಟ್ಗೆ ಬಿ ರಿಪೋರ್ಟ್ ಸಲ್ಲಿಸಿತ್ತು. ಆದರೆ, ಕೋರ್ಟ್ ಅದನ್ನು ತಿರಸ್ಕರಿಸಿದೆ. ಬಿ ರಿಪೋರ್ಟ್ ಸಲ್ಲಿಕೆಯಾಗಿದ್ದರಿಂದ ಕೊಂಚ ನಿರಾಳರಾಗಿದ್ದ ಕೆ.ಜೆ.ಎಸ್ ಜಾರ್ಜ್ ಅವರ ಜತೆಗೆ ಐಪಿಎಸ್ ಅಧಿಕಾರಿಗಳಾದ ಪ್ರಣಬ್ ಮೊಹಾಂತಿ ಮತ್ತು ಪ್ರಸಾದ್ ಅವರಿಗೆ ಈ ಬೆಳವಣಿಗೆ ಕಂಟಕವನ್ನು ತಂದಿಟ್ಟಿದೆ.
ಸಿಬಿಐ ನಡೆಯನ್ನು ಗಣಪತಿ ಅವರ ಮಗ ಪ್ರಶ್ನಿಸಿದ್ದರಿಂದಾಗಿ ಬಿ ರಿಪೋರ್ಟ್ ಅನ್ನು ಕೋರ್ಟ್ ಮಾನ್ಯ ಮಾಡಲಿಲ್ಲ. ಇದರೊಂದಿಗೆ ಡಿವೈಎಸ್ಪಿ ಗಣಪತಿ ಅವರ ಅಸಹಜ ಸಾವಿನ ಪ್ರಕರಣ ಇನ್ನಷ್ಟು ಕುತೂಹಲವನ್ನು ಕೆರಳಿಸಿದೆ. (ದಿಗ್ವಿಜಯ ನ್ಯೂಸ್)