ವಿಜಯಪುರದಲ್ಲಿ ಭೂಕಂಪನ: ಬೆಚ್ಚಿಬಿದ್ದ ಜನ!

Bhukampana
Published on


ವಿಜಯಪುರ: ವಿಜಯಪುರದಲ್ಲಿ ತಡರಾತ್ರಿ ಭೂಕಂಪನವಾಗಿದ್ದು, ಜನ ಬೆಚ್ಚಿಬಿದ್ದಿದ್ದಾರೆ. ಆದರೆ ಲಘು ಕಂಪನದ ಪರಿಣಾಮ ಯಾವುದೇ ರೀತಿಯ ಅಪಾಯ ಸಂಭವಿಸಿಲ್ಲ. ಗುರುವಾರ 1.38 ರ ಸಮಯದಲ್ಲಿ 3.4 ರಷ್ಟು ತೀವ್ರತೆ ಹೊಂದಿದ್ದ ಭೂಕಂಪನ ಸಂಭವಿಸಿದೆ. ಗಾಢ ನಿದ್ರೆಯಲ್ಲಿದ್ದವರಿಗೆ ಈ ಅನುಭವ ಆಗಿಲ್ಲ.

ವಿಜಯಪುರ ನಗರ, ಐನಾಪುರ, ಕತಕನಹಳ್ಳಿ, ಹಿಟ್ನಳ್ಳಿ ಸೇರಿದಂತೆ ಬಹುತೇಕ ಗ್ರಾಮಗಳಲ್ಲಿ ಭೂಕಂಪನದ ಅನುಭವ ಆಗಿದೆ. ಭೂಕಂಪನ ಘಟನೆ ರಿಕ್ಟರ್ ಮಾಪನ ಕೇಂದ್ರದಲ್ಲಿ ದಾಖಲಾಗಿರುವುದನ್ನು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣ ಕೇಂದ್ರ (ಕೆ.ಎಸ್.ಎನ್.ಡಿ.ಎಂ.ಸಿ) ದೃಢಪಡಿಸಿದ್ದಾಗಿ ಜಿಲ್ಲಾಡಳಿತ ಖಚಿತಪಡಿಸಿದೆ.

ವಿಜಯಪುರ ನಗರ ಹೊರವಲಯದ ಐನಾಪುರ ಗ್ರಾಮ ಭೂಕಂಪನದ ಕೇಂದ್ರಬಿಂದುವಾಗಿದ್ದು, ಭೂಮಿಯ 3 ಕಿ.ಮೀ. ಆಳದಲ್ಲಿ ಭೂಕಂಪನವಾಗಿದೆ.
ಇತ್ತೀಚಿನ ವರ್ಷಗಳಲ್ಲಿ ಜಿಲ್ಲೆಯಲ್ಲಿ ಆಗಾಗ ಭೂಕಂಪನ ಸಂಭವಿಸುತ್ತಿದ್ದು, ಜನರು ಆತಂಕ ವ್ಯಕ್ತಪಡಿಸಿದ್ದಾರೆ. ವಿಶೇಷವಾಗಿ ಮಳೆಗಾಲದಲ್ಲಿ ಹೆಚ್ಚು ಲಘು ಭೂಕಂಪನ ಸಂಭವಿಸುತ್ತಿದೆ. ಆದರೆ ಇದುವರೆಗೆ ಯಾವುದೇ ಅನಾಹುತ ಸಂಭವಿಸಿಲ್ಲ. ಈ ಕುರಿತು ಇದುವರೆಗೆ ವೈಜ್ಞಾನಿಕ ಅಧ್ಯಯನಗಳೂ ನಡೆದಿಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net