More

    ಕೃಷಿಕರಲ್ಲಿ ಸಂತಸ ತಂದ ಪೂರ್ವ ಮುಂಗಾರು

    ಮಡಿಕೇರಿ: ಇದೇ ಜೂನ್ ಮೊದಲ ವಾರದಲ್ಲಿ ಮುಂಗಾರು ಆರಂಭವಾಗುವ ನಿರೀಕ್ಷೆ ಇದ್ದು, ಪೂರ್ವ ಮುಂಗಾರು ಕೃಷಿಕರಲ್ಲಿ ಸಂತಸ ತಂದಿದೆ.


    ಕೊಡಗು ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಭತ್ತ ಮತ್ತು ಮುಸುಕಿನ ಜೋಳ ಪ್ರಮುಖ ಬೆಳೆಯಾಗಿದ್ದು, ಕೃಷಿ ಚಟುವಟಿಕೆಗೆ ಭೂಮಿ ಹದ ಮಾಡುವ ಕಾರ್ಯ ನಡೆದಿದೆ. ಜೂ೧೫ ರ ನಂತರ ಭತ್ತ ಸಸಿಮಡಿ ಕಾರ್ಯ ಆರಂಭವಾಗಲಿದೆ. ಹಾಗೆಯೇ ಮುಂಗಾರು ಆರಂಭದಲ್ಲಿ ಮುಸುಕಿನ ಜೋಳ ಬಿತ್ತನೆ ಕಾರ್ಯ ಆರಂಭವಾಗಲಿದೆ.


    ಜಿಲ್ಲೆಯಲ್ಲಿ ೩೨,೫೦೦ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಚಟುವಟಿಕೆ ಕೈಗೊಳ್ಳುವ ಗುರಿ ಇದ್ದು, ಇದರಲ್ಲಿ ೨೯ ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯುವ ಗುರಿ ಹೊಂದಲಾಗಿದೆ. ೩,೫೦೦ ಹೆಕ್ಟೇರ್ ಪ್ರದೇಶದಲ್ಲಿ ಮುಸುಕಿನ ಜೋಳ ಬೆಳೆಯುವ ಗುರಿ ಹೊಂದಲಾಗಿದೆ, ಹಾಗೆಯೇ ೭೦ ಹೆಕ್ಟೇರ್ ಪ್ರದೇಶದಲ್ಲಿ ರಾಗಿ ಬೆಳೆಯುವ ಗುರಿ ಹೊಂದಲಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಸೋಮಸುಂದರ ತಿಳಿಸಿದ್ದಾರೆ.


    ಈಗಾಗಲೇ ಮುಂಗಾರಿಗೆ ಅವಶ್ಯವಿರುವ ಸುಮಾರು ೧೮೭೧ ಕ್ವಿಂಟಾಲ್‌ನಷ್ಟು ಭತ್ತ ಬಿತ್ತನೆ ಬೀಜವನ್ನು ದಾಸ್ತಾನು ಮಾಡಿಕೊಳ್ಳಲಾಗಿದೆ. ಹಾಗೆಯೇ ೪೧ ಕ್ವಿಂಟಾಲ್ ಮುಸುಕಿನ ಜೋಳ ಬಿತ್ತನೆ ಬೀಜ ದಾಸ್ತಾನು ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಮುಂಗಾರಿಗೆ ಬೇಕಿರುವ ಸುಮಾರು ೮೦,೯೪೬ ಮೆಟ್ರಿಕ್ ಟನ್ ರಸಗೊಬ್ಬರ ಬೇಡಿಕೆ ಇದ್ದು, ಈಗಾಗಲೇ ೩೫,೭೭೪ ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಇದೆ. ಕೃಷಿಕರ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಪೂರೈಸಲಾಗುತ್ತದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಸೋಮಸುಂದರ ಮಾಹಿತಿ ನೀಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts