blank

ದಿನಾ ಒಂದು ಮೊಟ್ಟೆ ತಿನ್ನಿರಿ; ದೇಹದ ಸಕಾರಾತ್ಮಕ ಬದಲಾಣೆಗಳನ್ನು ಒಮ್ಮೆ ನೋಡಿ!: | Positive Changes

blank

Positive Changes : ಮೊಟ್ಟೆಗಳನ್ನು ಪೋಷಕಾಂಶಗಳ ಶಕ್ತಿ ಕೇಂದ್ರವೆಂದು ಪರಿಗಣಿಸಲಾಗುತ್ತದೆ. ಇದು ಪ್ರೋಟೀನ್, ಜೀವಸತ್ವಗಳು ಮತ್ತು ಖನಿಜಗಳಿಂದ ಸಮೃದ್ಧವಾಗಿದೆ. ಇದು ದೇಹಕ್ಕೆ ತುಂಬಾ ಪ್ರಯೋಜನಕಾರಿ. ನೀವು ಪ್ರತಿದಿನ ಒಂದು ಮೊಟ್ಟೆ ತಿನ್ನಲು ಪ್ರಾರಂಭಿಸಿದರೆ, ಅದು ನಿಮ್ಮ ಆರೋಗ್ಯಕ್ಕೆ ಏನೆಲ್ಲಾ ಪ್ರಯೋಜನಗಳನ್ನು ಪಡೆಯುಬಹುದು ಎಂಬುದು ತಿಳಿಯೋಣ.

blank

ಇದನ್ನೂ ಓದಿ:ಖಾಲಿ ಹೊಟ್ಟೆಯಲ್ಲಿ ವಾಲ್ನಟ್ಸ್​​ ತಿಂದ್ರೆ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ? Walnuts

ಮೊಟ್ಟೆಯಲ್ಲಿ ಉತ್ತಮ ಗುಣಮಟ್ಟದ ಪ್ರೋಟಿನ್​ ಇದ್ದು, ಇದು ಬಲವಾದ ಮತ್ತು ಆರೋಗ್ಯಕಾರ ಸ್ನಾಯುಗಳ ರೂಪಿಸಲು ಮೊಟ್ಟೆ ಸಹಕಾರಿಯಾಗಲಿದೆ. ಒಂದು ಮೊಟ್ಟೆಯಲ್ಲಿ ಸುಮಾರು 6-7 ಗ್ರಾಂ ಪ್ರೋಟಿನ್​ ಇರುತ್ತದೆ. ಇದು ದೇಹಕ್ಕೆ ಶಕ್ತಿ ನೀಡುವುದಲ್ಲದೆ ಅಂಗಾಂಶ ದುರಸ್ತಿಯೂ ಸಹಾಯ ಮಾಡುತ್ತದೆ. ಜಿಮ್​ಗೆ ಹೋಗುವವರಿಗೆ ಹಾಗೂ ಫಿಟ್​ನೆಸ್​ ಕಾಯ್ದುಕೊಳ್ಳುವರು ತಮ್ಮ ದೈನಂದಿನ ಊಟದಲ್ಲಿ ಮೊಟ್ಟೆ ಸೇರಿಸಿಕೊಳ್ಳುವುದು ಉತ್ತಮ.

1. ಮೂಳೆಗಳನ್ನು ಬಲಪಡಿಸುತ್ತದೆ
ಮೊಟ್ಟೆಗಳಲ್ಲಿ ವಿಟಮಿನ್ ಡಿ ಮತ್ತು ಕ್ಯಾಲ್ಸಿಯಂ ಇರುತ್ತದೆ. ಇದು ಮೂಳೆಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ. ವಿಟಮಿನ್ ಡಿ ದೇಹದಲ್ಲಿ ಕ್ಯಾಲ್ಸಿಯಂ ಹೀರಿಕೊಳ್ಳುವಿಕೆಯನ್ನು ಹೆಚ್ಚಿಸುತ್ತದೆ. ತನ್ಮೂಲಕ ಆಸ್ಟಿಯೊಪೊರೋಸಿಸ್ ಮತ್ತು ಕೀಲು ನೋವಿನ ಅಪಾಯವನ್ನು ಕಡಿಮೆ ಮಾಡುತ್ತದೆ. ಮೊಟ್ಟೆ ತಿನ್ನುವುದು ಮಕ್ಕಳು ಮತ್ತು ವೃದ್ಧರಿಗೆ ವಿಶೇಷವಾಗಿ ಪ್ರಯೋಜನಕಾರಿ.

2.ಮೆದುಳಿಗೆ ಒಳ್ಳೆಯದು
ಮೊಟ್ಟೆಯಲ್ಲಿ ಕೊಲಿನ್ ಎಂಬ ಅಂಶ ಇದೆ. ಮೆದುಳಿನ ಬೆಳವಣೆ ಹಾಗೂ ಕಾರ್ಯನಿರ್ವಹಣೆಗೆ ಇದು ಅವಶ್ಯಕ. ಇದು ಸ್ಮರಣಶಕ್ತಿಯನ್ನು ಚುರುಕುಗೊಳಿಸುತ್ತದೆ. ನರಗಳ ಆರೋಗ್ಯವನ್ನು ಸುಧಾರಿಸಲು ಸಹಾಕಾರಿಯಾಗಿದೆ. ಅದರಲ್ಲೂ ಗರ್ಭಿಣಿಯರೂ ಮೊಟ್ಟೆ ತಿನ್ನವುದು ಕೂಡ ಪ್ರಯೋಜಕಾರಿ. ಏಕೆಂದರೆ ಇದು ಭ್ರೂಣದ ಮಾಸಿಕ ಬೆಳವಣಿಗೆಗೆ ಸಹಾಯ ಮಾಡುತ್ತದೆ ಎಂದು ತಜ್ಞರು ಹೇಳುತ್ತಾರೆ.

3.ದೃಷ್ಟಿ ಸುಧಾರಿಸುತ್ತೆ
ಮೊಟ್ಟೆಯ ಹಳದಿ ಲೋಳೆಯಲ್ಲಿ ಲುಟೀನ್​ ಮತ್ತು ಜಿಯಾಕ್ಸಾಂಥಿನ್​ ಎಂಬ ಉತ್ಕಷ್ಟ ನಿರೋಧಕಗಳು ಇರುತ್ತದೆ. ಇದು ಕಣ್ಣುಗಳಲ್ಲಿರುವ ರೇಟಿನಾವನ್ನು ಆರೋಗ್ಯಕರವಾಗಿಸುತ್ತದೆ. ಇದು ಕಣ್ಣಿನ ಪೊರೆ ಮತ್ತು ವಯಸ್ಸಿಗೆ ಸಂಬಂಧಿಸಿದ ಕಣ್ಣಿನ ಕಾಯಿಲೆಗಳನ್ನು ತಡೆಯುತ್ತದೆ. ನಿಯಮಿತವಾಗಿ ಮೊಟ್ಟೆಗಳನ್ನು ತಿನ್ನುವುದರಿಂದ ದೃಷ್ಟಿ ರಕ್ಷಿಸಲು ಮತ್ತು ಕಣ್ಣಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

4.ತೂಕ ನಿಯಂತ್ರಣಕ್ಕೆ ಸಹಾಯ
ಮೊಟ್ಟೆಗಳಲ್ಲಿ ಪ್ರೋಟೀನ್ ಅಧಿಕವಾಗಿದ್ದು, ಕ್ಯಾಲೋರಿಗಳು ಕಡಿಮೆ. ಇವು ಹೊಟ್ಟೆಯನ್ನು ಹೆಚ್ಚು ಸಮಯದವರೆಗೆ ತುಂಬಿರುವಂತೆ ನೋಡಿಕೊಳ್ಳುತ್ತವೆ. ಬೆಳಗಿನ ಉಪಾಹಾರಕ್ಕೆ ಮೊಟ್ಟೆಗಳನ್ನು ತಿನ್ನುವುದರಿಂದ ದಿನವಿಡೀ ಚೈತನ್ಯಶೀಲರಾಗಿರುತ್ತೀರಿ ಮತ್ತು ಬೊಜ್ಜಿನ ಅಪಾಯವನ್ನು ಕಡಿಮೆ ಮಾಡುತ್ತೀರಿ.(ಏಜೆನ್ಸೀಸ್​)

ಖಾಲಿ ಹೊಟ್ಟೆಯಲ್ಲಿ ವಾಲ್ನಟ್ಸ್​​ ತಿಂದ್ರೆ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ? Walnuts

ನಿಮಗೆ ಮೂತ್ರ ತಡೆಹಿಡಿಯುವ ಅಭ್ಯಾಸ ಇದೆಯಾ? ಅದರಿಂದ ನಿಮ್ಮ ಮೂತ್ರಪಿಂಡದ ಮೇಲೆ ಏನೆಲ್ಲಾ ಪರಿಣಾಮ ಬೀರುತ್ತೆ ಗೊತ್ತಾ? Kidney Health

Share This Article

ಬೆಳಿಗ್ಗೆ ಎದ್ದ ತಕ್ಷಣ ಹೀಗೆ ಮಾಡಿ..ನಿಮ್ಮ ದೇಹದ ಕೊಬ್ಬು ತಕ್ಷಣ ಕಡಿಮೆಯಾಗುತ್ತದೆ! weight loss

weight loss: ಇತ್ತೀಚಿನ ದಿನಗಳಲ್ಲಿ, ಹೊಟ್ಟೆಯ ಸುತ್ತ ಇರುವ ಮೊಂಡುತನದ ಕೊಬ್ಬನ್ನು ಕಡಿಮೆ ಮಾಡುವುದು (ತೂಕ…

ಎಸಿ, ಫ್ಯಾನ್​ ಇದ್ದರೂ ಬೆವರುತ್ತಿದ್ದೀರಾ?; ತಂಪಿನ ಪ್ರದೇಶದಲ್ಲಿಯೂ ಇಷ್ಟೊಂದು ಹಿಟ್​ ಇರಲು ಕಾರಣವೇನು?: ಇಲ್ಲಿದೆ ಮಾಹಿತಿ | Sweating

Sweating: ಸಾಮಾನ್ಯವಾಗಿ ಬಹುತೇಕರು ಶಕೆಯಲ್ಲಿ ಬೆವರುವುದನ್ನು ಕಾಣುತ್ತೇವೆ. ಆದರೆ, ಇನ್ನು ಕೆಲ ಜನರು ತಾಪಮಾನ 35ಕ್ಕೂ…

ಕಾರಿನೊಳಗೆ ಮಕ್ಕಳನ್ನು ಆಡಲು ಬಿಡುತ್ತೀರಾ; ಇದು ಅವರ ಕೊನೆಯ ಆಟವಾಗಬಹುದು; ಪೋಷಕರು ಇದನ್ನು ತಿಳಿದಿರಲೇಬೇಕು| Car

Car| ಇತ್ತೀಚಿನ ದಿನಗಳಲ್ಲಿ ಪೋಷಕರ ಅಜಾಗರೂಕತೆಯಿಂದಾಗಿ ಕಾರಿನೊಳಗೆ ಆಟವಾಡುವಾಗ ಮಕ್ಕಳು ಮೃತಪಡುತ್ತಿರುವ ಪ್ರಕರಣಗಳು ಹೆಚ್ಚಾಗಿವೆ. ಪೋಷಕರು…