ಪೌಷ್ಟಿಕಾಂಶ ಆಹಾರ ಸೇವಿಸಿ

ಕೆ.ಆರ್.ಸಾಗರ: ಗ್ರಾಮದ ರಾಯಕೋಟೆ ಫೈಲ್ ಅಂಗನವಾಡಿ ಕೇಂದ್ರದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಗರ್ಭಿಣಿಯರಿಗೆ ಪೌಷ್ಟಿಕ ಆಹಾರ ಕುರಿತು ಆರೋಗ್ಯ ಶಿಕ್ಷಣ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಕೆ.ಆರ್.ಸಾಗರ ಗ್ರಾಪಂ ಪಿಡಿಒ ರಫೀಕ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಗರ್ಭಿಣಿಯರು ವೈದ್ಯರ ಸಲಹೆಯಂತೆ ಪೌಷ್ಟಿಕಾಂಶ ಆಹಾರ ಸೇವಿಸಬೇಕು. ಇದರಿಂದ ಹುಟ್ಟುವ ಮಗು ಕೂಡ ಆರೋಗ್ಯವಾಗಿರುತ್ತದೆ ಎಂದರು.

ಕೆ.ಆರ್.ಸಾಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ಸಿ.ಎಸ್.ಸೌಮ್ಯಾ ಮಾತನಾಡಿ, ಗರ್ಭಿಣಿಯರು ಸೊಪ್ಪು, ಹಣ್ಣು-ತರಕಾರಿಗಳನ್ನು ಹೆಚ್ಚಾಗಿ ಸೇವಿಸಬೇಕು ಎಂದು ತಿಳಿಸಿದರು.

ಬೆಳಗೊಳ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳ ಮೇಲ್ವಿಚಾರಕಿ ಲಕ್ಷ್ಮೀ ದೇಶಪಾಂಡೆ ಅವರು ಸರ್ಕಾರದಿಂದ ಗರ್ಭಿಣಿಯರಿಗೆ ಸಿಗುವ ಆಹಾರ ಮತ್ತು ಇತರೆ ಸೌಲಭ್ಯಗಳ ಬಗ್ಗೆ ತಿಳಿಸಿದರು.

ಡಾ.ಬಿ.ಎಂ.ರೇಖಾ, ಪ್ರಭಾರ ಹಿರಿಯ ಮಹಿಳಾ ಆರೋಗ್ಯ ಸಹಾಯಕಿ ಸೌಮ್ಯಾ, ಹಿರಿಯ ಆರೋಗ್ಯ ಸಹಾಯಕ ಸಲೀಂ ಪಾಷಾ, ಆರೋಗ್ಯ ಇಲಾಖೆ ಸಿಬ್ಬಂದಿ, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಇದ್ದರು.