ಸಿನಿಮಾ

ಅವಹೇಳನಕಾರಿ ಹೇಳಿಕೆ; ಬಿಜೆಪಿ-ಕಾಂಗ್ರೆಸ್​ ಸ್ಟಾರ್​ ಪ್ರಚಾರಕರಿಗೆ ಚುನಾವಣಾ ಆಯೋಗ ನೋಟಿಸ್​

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಈ ಮಧ್ಯೆ ರಾಜಕೀಯ ಪಕ್ಷಗಖ ನಾಯಕರ ನಡುವೆ ವಾಕ್ಸಮರ ಕೂಡ ಜೋರಾಗಿದೆ.

ಇನ್ನು ಪ್ರಚಾರದ ವೇಳೆ ಮಾತನಾಡುವ ಭರದಲ್ಲಿ ಎದುರಾಳಿ ಪಕ್ಷದ ನಾಯಕರನ್ನು ಹೀಯಾಳಿಸಿದ ವಿಚಾರವಾಗಿ ಕಾಂಗ್ರೆಸ್​ ಹಾಗೂ ಬಿಜೆಪಿ ಪಕ್ಷದ ಸ್ಟಾರ್ ಪ್ರಚಾರಕರಿಗೆ ಚುನಾವಣಾ ಆಯೋಗ ನೋಟಿಸ್​ ಜಾರಿ ಮಾಡಿದೆ.

ಬಿಜೆಪಿ ಸ್ಟಾರ್​ ಪ್ರಚಾರಕನಿಗೆ ನೋಟಿಸ್​

ಪ್ರಧಾನಿ ಮೋದಿ ವಿಷ ಸರ್ಪ ಇದ್ದಂತೆ ಎಂದು ಹೇಳಿಕೆ ನೀಡಿ ಪೇಚಿಗೆ ಸಿಲುಕಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ತಿರುಗೇಟು ನೀಡುವ ಭರದಲ್ಲಿ ಸೋನಿಯಾ ಗಾಂಧಿ ವಿಷ ಕನ್ಯೆಯೇ ಎಂದು ಪ್ರಶ್ನಿಸಿದ್ದ ಬಿಜೆಪಿ ಸ್ಟಾರ್​ ಪ್ರಚಾರಕ ಬಸನ್​ಗೌಡ ಪಾಟೀಲ್​ ಯತ್ನಾಳ್​ಗೆ ಚುನಾವಣಾ ಆಯೋಗ ನೋಟಿಸ್​ ಜಾರಿ ಮಾಡಿದೆ.

ಪ್ರಧಾನಿ ನರೇಂದ್ರ ಮೊದಿ ಅವರನ್ನು ವಿಶ್ವದ ನಾಯಕ ಎಂದು ಎಲ್ಲರೂ ಒಪ್ಪಿಕೊಂಡಿದ್ದಾರೆ. ಅಂತಹವರನ್ನ ನಾಗರಹಾವಿಗೆ ಹೋಲಿಸುವುದು ಸರಿಯೇ ಕಾಂಗ್ರೆಸ್​ ನಾಯಕರು ಸೋನಿಯಾ ಗಾಂಧಿ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ ಎಂದು ಕಿಡಿಕಾರಿದ್ದರು.

ಇದನ್ನೂ ಓದಿ: ಅನ್ಯ ಕೋಮಿನ ವಿದ್ಯಾರ್ಥಿನಿ ಜೊತೆ ಜ್ಯೂಸ್​ ಕುಡಿದಿದ್ದಕ್ಕೆ ಹಲ್ಲೆ; ಆರೋಪಿಗಳ ಬಂಧನ

ಚೀನಾ ಹಾಗೂ ಪಾಕಿಸ್ತಾನದ ಏಜೆಂಟರಂತೆ ವರ್ತಿಸುವ ಸೋನಿಯಾ ಗಾಂಧಿ ಭಾರತವನ್ನು ಹಾಳು ಮಾಡಿದವರು. ಚಹಾ ಮಾರುತ್ತಿದ್ದವರು ದೇಶದ ಪ್ರಧಾನಿ ಆದ್ದರೆಂಬ ಕಾರಣಕ್ಕೆ ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ ಎಂದು ಏಪ್ರಿಲ್​ 28ರಂದು ಕೊಪ್ಪಳ ಜಿಲ್ಲೆಯ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಹಾಲಪ್ಪ ಆಚಾರ್​ ಪರ ಪ್ರಚಾರ ಮಾಡುವ ವೇಳೆ ಯತ್ನಾಳ್​ ಹೇಳಿಕೆ ನೀಡಿ ಬಿರುಗಾಳಿ ಎಬ್ಬಿಸಿದ್ದರು.

ಕಾಂಗ್ರೆಸ್​ ಸ್ಟಾರ್​ ಪ್ರಚಾರಕನಿಗೆ ನೋಟಿಸ್​

ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸುವ ಭರದಲ್ಲಿ ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಶಾಸಕ ಪ್ರಿಯಾಂಕ ಖರ್ಗೆ ಅವಹೇಳನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿತ್ತು.

ಏಪ್ರಿಲ್​ 30 ಕಲಬುರ್ಗಿಯಲ್ಲಿ ಕಾಂಗ್ರೆಸ್​ ಸಮಾವೇಶವನ್ನು ಉದ್ದೇಶಿಸಿ ಮಾತನಾಡುವ ವೇಳೆ ಶಾಸಕ ಪ್ರಿಯಾಂಕ ಖರ್ಗೆ ಇಂತಹ ನಿಷ್ಪ್ರಯೋಜಕ ಮಗನಿದ್ದರೆ ಹೇಗೆ ಜೀವನ ನಡೆಯುತ್ತೆ? ದೇಶ ನಡೆಸೋನು ಮಾತ್ರವಲ್ಲ. ಮನೆಲಿ ಒಬ್ಬ ನಾಲಾಯಕ್ ಮಗನಿದ್ದರೂ ಮನೆ ಸುಸೂತ್ರವಾಗಿ ನಡೆಯೋದಿಲ್ಲ ಎಂದು ಹೇಳಿಕೆ ನೀಡುವ ಮೂಲಕ ಸುದ್ದಿಯಾಗಿದ್ದರು.

ಈ ಇಬ್ಬರು ನಾಯಕರು ತಮ್ಮ ಹೇಳಿಕೆಗಳ ಕುರಿತು ಸ್ಪಷ್ಟನೆ ನೀಡುವಂತೆ ಕೋರಿ ಕೊಪ್ಪಳ ಹಾಗೂ ಕಲಬುರ್ಗಿ ಜಿಲ್ಲಾ ಚುನಾವಣಾ ಅಧಿಕಾರಿಗಳು ಶೋಕಾಸ್​​ ನೋಟಿಸ್​ ಜಾರಿ ಮಾಡಿದ್ದಾರೆ.

Latest Posts

ಲೈಫ್‌ಸ್ಟೈಲ್