20.8 C
Bangalore
Sunday, December 8, 2019

ಮತಎಣಿಕೆ ಶಿಷ್ಟಾಚಾರದಲ್ಲಿ ಬದಲಾವಣೆ ಕೋರಿದ್ದ ಪ್ರತಿಪಕ್ಷಗಳ ಬೇಡಿಕೆಗಳನ್ನು ತಳ್ಳಿಹಾಕಿದ ಚುನಾವಣಾ ಆಯೋಗ

Latest News

ಪತಿಯನ್ನು ಕೊಲೆ ಮಾಡಿ ಶವ ಸುಟ್ಟು ಹಾಕಿದ್ದ ಪತ್ನಿಯ ಸೆರೆ

ಕೆಜಿಎಫ್: ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಪತಿಯನ್ನೇ ಕೊಲೆ ಮಾಡಿ ಶವ ಸುಟ್ಟು ಹಾಕಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಕೊಲೆಗೈದ ಪತ್ನಿ ಮತ್ತು ಪ್ರಿಯಕರನನ್ನು ಉರಿಗಾಂ...

ಅರಣ್ಯ ಸರ್ವೆಗೆ ಡ್ರೋನ್: ರಾಜ್ಯದಲ್ಲೇ ಮೊದಲ ಬಾರಿಗೆ ಹೊಸನಗರದಲ್ಲಿ ಪ್ರಾಯೋಗಿಕವಾಗಿ ಜಾರಿ

ರಾಜ್ಯದಲ್ಲಿ ಮೊದಲ ಬಾರಿಗೆ ಅರಣ್ಯ ಪ್ರದೇಶ ಗುರುತಿಸಲು ಪ್ರಾಯೋಗಿಕವಾಗಿ ಹೊಸನಗರ ತಾಲೂಕಿನಲ್ಲಿ ಅರಣ್ಯ ಇಲಾಖೆ ಡ್ರೋನ್ (ಏರಿಯಲ್) ಸರ್ವೆ ನಡೆಸಿದ್ದು, ಯಶಸ್ವಿಯಾದರೆ ಇಲಾಖೆಯ...

ಭಗವದ್ಗೀತೆ ಅಭಿಯಾನದ ಮಹಾಸಮರ್ಪಣೆ

ಚಿತ್ರದುರ್ಗ: ಸಾಮಾಜಿಕ ಸಾಮರಸ್ಯ,ರಾಷ್ಟ್ರೀಯ ಏಕತೆಗೆ ತಿಂಗಳಿಗೂ ಹೆಚ್ಚು ಕಾಲ ಜಿಲ್ಲಾದ್ಯಂತ ನಡೆದ ಭಗವದ್ಗೀತೆ ಅಭಿಯಾನದ ರಾಜ್ಯಮಟ್ಟದ ಮಹಾ ಸಮರ್ಪಣೆಗೆ ಶನಿವಾರ ಚಿತ್ರದುರ್ಗದ ಹಳೇ...

ಭಗವದ್ಗೀತೆ ಪಠಣದಿಂದ ಅಜ್ಞಾನ ದೂರ

ಚಿಕ್ಕಬಳ್ಳಾಪುರ: ಚಿಕ್ಕ ವಯಸ್ಸಿನಿಂದಲೇ ಮಕ್ಕಳನ್ನು ಒಳ್ಳೆಯ ವಾತಾವರಣದಲ್ಲಿ ಬೆಳೆಸಿದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಮಹಾತ್ಮಗಾಂಧಿ ಸೇವಾಟ್ರಸ್ಟ್ ಸಂಸ್ಥಾಪಕ ಶ್ರೀ ವಿನಯ್ ಗುರೂಜಿ ಅಭಿಪ್ರಾಯಪಟ್ಟರು. ತಾಲೂಕಿನ...

ನಾಯಿಂದ್ರಹಳ್ಳಿ ವಿವಾದಿತ ರಸ್ತೆ ಸರ್ವೇ

ಚಿಂತಾಮಣಿ: ತಾಲೂಕಿನ ಪೆರಮಾಚನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಯಿಂದ್ರಹಳ್ಳಿ ರಸ್ತೆ ವಿವಾದ ರಾಜಕೀಯ ತಿರುವು ಪಡೆದುಕೊಂಡ ಹಿನ್ನೆಲೆಯಲ್ಲಿ ಶನಿವಾರ ಅಧಿಕಾರಿಗಳು ಸರ್ವೇ ನಂ.2 ವ್ಯಾಪ್ತಿಯ 5.04...

ನವದೆಹಲಿ: ಮತಎಣಿಕೆ ಶಿಷ್ಟಾಚಾರದಲ್ಲಿ ಬದಲಾವಣೆ ಮಾಡಿಕೊಳ್ಳುವಂತೆ ಆಗ್ರಹಿಸಿದ್ದ ಪ್ರತಿಪಕ್ಷಗಳ ಬೇಡಿಕೆಗಳನ್ನು ಕೇಂದ್ರ ಚುನಾವಣಾ ಆಯೋಗ ಬುಧವಾರ ತಿರಸ್ಕರಿಸಿದೆ.

ಮುಖ್ಯ ಚುನಾವಣಾ ಆಯುಕ್ತ ಸುನೀಲ್​ ಅರೋರ ನೇತೃತ್ವದಲ್ಲಿ ಚುನಾವಣಾ ಆಯುಕ್ತರಾದ ಅಶೋಕ್​ ಲಾವಾಸ ಮತ್ತು ಸುನೀಲ್​ ಚಂದ್ರರವರ ಸಮ್ಮುಖದಲ್ಲಿ ಚರ್ಚೆ ನಡೆಸಿ ಬೇಡಿಕೆಗಳನ್ನು ತಿರಸ್ಕರಿಸಿದೆ.

22 ಪ್ರತಿಪಕ್ಷಗಳ ನಿಯೋಗ ಮಂಗಳವಾರ ಚುನಾವಣಾ ಆಯೋಗವನ್ನು ಭೇಟಿ ಮಾಡಿ, ಇವಿಎಂ ಕಾರ್ಯಚಟುವಟಿಕೆಯ ಮೇಲೆ ಅನುಮಾನ ವ್ಯಕ್ತಪಡಿಸಿ ದೂರು ನೀಡಿದ್ದರು. ಇದರೊಂದಿಗೆ ತಮ್ಮ ಬೇಡಿಕೆಯನ್ನು ಆಯೋಗದ ಮುಂದಿಟ್ಟಿದ್ದರು.

ಪ್ರತಿ ವಿಧಾನಸಭೆಯ ಐದು ಮತಗಟ್ಟೆಗಳಲ್ಲಿನ ಇವಿಯಂ ಮತಗಳನ್ನು ವಿವಿಪ್ಯಾಟ್​ ಮತಚೀಟಿಯೊಂದಿಗೆ ತಾಳೆ ಮಾಡಿದಾಗವ್ಯತ್ಯಾಸ ಕಂಡುಬಂದರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲ ಮತಗಟ್ಟೆಗಳ ಎಲ್ಲ ವಿವಿಪ್ಯಾಟ್​ಗಳ ಮತಚೀಟಿಯನ್ನು ಪರಿಶೀಲಿಸಬೇಕು ಎಂದು ಪ್ರತಿಪಕ್ಷಗಳು ಚುನಾವಣಾ ಆಯೋಗದ ಮುಂದೆ ತಮ್ಮ ಬೇಡಿಕೆಯನ್ನು ಇಟ್ಟಿದ್ದರು. ಮತಯಂತ್ರದ ಎಣಿಕೆಯನ್ನು ಮಾಡುವ ಮೊದಲು ವಿವಿಪ್ಯಾಟ್ ಚೀಟಿಗಳನ್ನು ಎಣಿಕೆ ಮಾಡಬೇಕೆಂದೂ ಪ್ರತಿಪಕ್ಷಗಳು ಒತ್ತಾಯಿಸಿದ್ದವು.

ಮತದಾನೋತ್ತರ ಸಮೀಕ್ಷೆ ಬಹಿರಂಗವಾಗುತ್ತಿದ್ದಂತೆ ಮತ್ತೊಮ್ಮೆ ಬಿಜೆಪಿ ನೇತೃತ್ವದ ಎನ್​ಡಿಎ ಕೇಂದ್ರದ ಗದ್ದುಗೆ ಏರಲಿದೆ ಎಂದು ಹಲವು ಸಮೀಕ್ಷೆಗಳು ಅಂದಾಜಿನ ಫಲಿತಾಂಶ ನೀಡಿದ್ದರಿಂದ, ಸಮೀಕ್ಷೆಯ ಮೇಲೆ ಸಂಶಯ ವ್ಯಕ್ತಪಡಿಸಿದ ಪ್ರತಿಪಕ್ಷದ ನಾಯಕರು ಇವಿಎಂ ಟ್ಯಾಂಪರಿಂಗ್​ ಮಾಡುವ ಆರೋಪವನ್ನು ವ್ಯಕ್ತಪಡಿಸಿ, ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಪ್ರತಿಪಕ್ಷಗಳ ಅರ್ಜಿಯನ್ನು ತಿರಸ್ಕರಿಸಿತ್ತು. ಇದೀಗ ಚುನಾವಣಾ ಆಯೋಗವು ಅದೇ ನಿರ್ಧಾರಕ್ಕೆ ಬಂದಿರುವುದು ಪ್ರತಿಪಕ್ಷಗಳಿಗೆ ಹಿನ್ನಡೆಯಾಗಿದೆ. (ಏಜೆನ್ಸೀಸ್​)

Stay connected

278,744FansLike
581FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...