ಮಿಜೋರಾಂ ವಿಧಾನಸಭೆ ಚುನಾವಣೆ; ಮತ ಎಣಿಕೆ ಮುಂದೂಡಿದ ಚುಣಾವಣಾ ಆಯೋಗ

Election
Published on

ನವದೆಹಲಿ:  ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಕರೆಯಲ್ಪಡುತ್ತಿರುವ ಪಂಚರಾಜ್ಯ ಚುನಾವಣೆಯ ಫಲಿತಾಂಶ ಡಿಸೆಂಬರ್​ 03ರಂದು ಹೊರಬೀಳಲಿದ್ದು, ಮಿಜೋರಾಂನಲ್ಲಿ ಮಾತ್ರ ಫಲಿತಾಂಶವನ್ನು ಸೋಮವಾರ ಪ್ರಕಟಿಸುವುದಾಗಿ ಚುನಾವಣಾ ಆಯೋಗ ತಿಳಿಸಿದೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಚುನಾವಣಾ ಆಯೋಗ ಮಿಜೋರಾಂನಲ್ಲಿ ಮತ ಎಣಿಕೆಯ ದಿನದ ಬದಲಾವಣೆಗಾಗಿ ವಿವಿಧ ವಲಯಗಳಿಂದ ಮನವಿ ಸಲ್ಲಿಕೆಯಾಗಿತ್ತು. ಅದನ್ನು ಪರಿಗಣಿಸಿ ಆಯೋಗ ಮತ ಎಣಿಕೆ ದಿನಾಂಕ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದೆ.

ಕ್ರಿಶ್ಚಿಯನ್‌ ಸಮುದಾಯದವರೇ ಹೆಚ್ಚಿರುವ ಮಿಜೋರಾಂನ ಜನರಿಗೆ ಡಿಸೆಂಬರ್ 3 ರ ಭಾನುವಾರ ವಿಶೇಷ ದಿನವಾಗಿದೆ. ಈ ಪ್ರಾತಿನಿಧ್ಯ ಪರಿಗಣಿಸಿದ ಆಯೋಗವು ಮತ ಎಣಿಕೆ ದಿನಾಂಕವನ್ನು ಡಿ.4 ಕ್ಕೆ ಬದಲಾಯಿಸಲು ನಿರ್ಧರಿಸಿರುವುದಾಗಿ ತಿಳಿದು ಬಂದಿದೆ.

40 ಸದಸ್ಯಬಲದ ಮಿಜೋರಾಂ ವಿಧಾನಸಭೆಗೆ ನವೆಂಬರ್ 7 ರಂದು ಮತದಾನ ನಡೆದಿದ್ದು, ಡಿಸೆಂಬರ್ 4 ರಂದು ಮತ ಎಣಿಕೆ ನಡೆಯಲಿದೆ. ಛತ್ತೀಸ್‌ಗಢ, ಮಧ್ಯಪ್ರದೇಶ, ಮಿಜೋರಾಂ, ರಾಜಸ್ಥಾನ ಮತ್ತು ತೆಲಂಗಾಣ 5 ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶವನ್ನು ಡಿಸೆಂಬರ್ 3 ರಂದು ಪ್ರಕಟಿಸಲಾಗುವುದು ಎಂದು ಚುನಾವಣಾ ಆಯೋಗವು ಈ ಹಿಂದೆ ಪ್ರಕಟಿಸಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net