More

    ಧಾರ್ಮಿಕ ಭಾವನೆಗೆ ಧಕ್ಕೆ; ಪ್ರಿಯಾಂಕ ಗಾಂಧಿಗೆ ಶೋಕಾಸ್ ನೋಟಿಸ್ ಜಾರಿ

    ನವದೆಹಲಿ: ಚುನಾವಣಾ ಪ್ರಚಾರದ ವೇಳೆ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಲ್ಲಿ ಕಾಂಗ್ರೆಸ್​ ನಾಯಕಿ ಪ್ರಿಯಾಂಕ ಗಾಂಧಿ ವಾದ್ರಾ ಅವರಿಗೆ ರಾಷ್ಟ್ರೀಯ ಚುನಾವಣಾ ಆಯೋಗ ಶೋಕಾಸ್​ ನೋಟಿಸ್​ ಕಳುಹಿಸಿದೆ.

    ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರಿಯಾಂಕ ಗಾಂಧಿ ಅವರು ಸುಳ್ಳು ಆರೋಪಗಳನ್ನು ಮಾಡಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡಿದ್ದಾರೆ. ಈ ರೀತಿಯ ಸುಳ್ಳು ಆರೋಪಗಳನ್ನು ಮಾಡಿ ಕಾಂಗ್ರೆಸ್​ ಜನರ ದಾರಿ ತಪ್ಪಿಸುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿತ್ತು.

    ಅಕ್ಟೋಬರ್ 20 ರಂದು ದೌಸಾದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಪ್ರಿಯಾಂಕಾ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ದೃಢೀಕೃತವಲ್ಲದ ಆರೋಪಗಳನ್ನು ಮಾಡಿದ್ದರು. ಮೋದಿ ಅವರು ದೇವಸ್ಥಾನದಲ್ಲಿ ನೀಡಿದ ದೇಣಿಗೆಯ ಲಕೋಟೆಯನ್ನು ತೆರೆದಾಗ ಅದರಲ್ಲಿ ಕೇವಲ 21 ರೂಪಾಯಿ ಇದ್ದುದು ಟಿವಿಯಲ್ಲಿ ನೋಡಿದೆ ಎಂದು ಪ್ರಿಯಾಂಕಾ ಹೇಳಿದ್ದರು.

    ಇದನ್ನೂ ಓದಿ: ರಾಜಸ್ಥಾನ ಚುನಾವಣೆ; 19 ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

    ಈ ವಿಚಾರವಾಗಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದ ಬಿಜೆಪಿ, ಪ್ರಿಯಾಂಕಾ ಅವರು ಚುನಾವಣಾ ಪ್ರಚಾರದ ಸಮಯದಲ್ಲಿ ಸುಳ್ಳು ಹೇಳಿಕೆಗಳನ್ನು ನೀಡಿ ಪ್ರಧಾನಿ ನರೇಂದ್ರ ಮೋದಿಯವರ ವೈಯಕ್ತಿಕ ಧಾರ್ಮಿಕ ಶ್ರದ್ಧೆಯನ್ನು ಪ್ರಶ್ನಿಸಿದ್ದಾರೆ ಎಂದು ಆರೋಪಿಸಿತ್ತು. ಜತೆಗೆ, ಪ್ರಿಯಾಂಕಾ ಗಾಂಧಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿತ್ತು.

    ಮಾದರಿ ನೀತಿ ಸಂಹಿತೆ ಉಲ್ಲಂಘಮನೆ ಆರೋಪ ಸಂಬಂಧ ಪ್ರಿಯಾಂಕ ಗಾಂಧಿ ಅವರಿಗೆ ನೀಡಲಾಗಿರುವ ನೋಟಿಸ್​ಗೆ ಅಕ್ಟೋಬರ್​ 30 ಸಂಜೆ 5 ಘಂಟೆಯ ಒಳಗಾಗಿ ಉತ್ತರಿಸಬೇಕು ಎಂದು ಸೂಚಿಸಿದೆ.

    ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ಪಂಚರಾಜ್ಯ ಚುನಾವಣೆ ಮುಂಬರುವ ಲೋಕಸಭೆ ಎಲೆಕ್ಷನ್​ಗೆ ಸೆಮಿಫಿನಾಲೆ ಎಂದೇ ಹೇಳಲಾಗಿದೆ. 200 ಸದಸ್ಯಬಲದ ರಾಜಸ್ಥಾನ ವಿಧಾನಸಭೆಗೆ ನವೆಂಬರ್ 25ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 3ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts