ಕೋಟ: ಮಣೂರಿನ ಚಿತ್ತಾರಿನ ನಾಗಬ್ರಹ್ಮ ಸಪರಿವಾರ ದೇಗುಲ ವರ್ಧಂತ್ಯುತ್ಸವ ಅಂಗವಾಗಿ ಪಂಚವರ್ಣ ಯುವಕ ಮಂಡಲ, ಮಹಿಳಾ ಮಂಡಲ ನೇತೃತ್ವದಲ್ಲಿ ಮಣೂರು ಫ್ರೆಂಡ್ಸ್, ದೇಗುಲ ಆಡಳಿತ ಮಂಡಳಿ ಸಹಯೋಗದೊಂದಿಗೆ ಭಾನುವಾರ ಪರಿಸರಸ್ನೇಹಿ ಅಭಿಯಾನ ಹಮ್ಮಿಕೊಳ್ಳಲಾಯಿತು.
ದೇಗುಲ ಆಡಳಿತ ಮಂಡಳಿ ಅಧ್ಯಕ್ಷ ರಮೇಶ್ ಪ್ರಭು, ಪ್ರಮುಖರಾದ ಗೋಪಾಲ್ ಪೈ, ಮಣೂರು ಫ್ರೆಂಡ್ಸ್ ಅಧ್ಯಕ್ಷ ರಾಘವೇಂದ್ರ ಆಚಾರ್, ಮಾಜಿ ಅಧ್ಯಕ್ಷ ದಿನೇಶ್ ಆಚಾರ್, ಗೌರವಾಧ್ಯಕ್ಷ ಸುರೇಶ್ ಆಚಾರ್, ಪಂಚವರ್ಣ ಯುವಕ ಮಂಡಲ ಅಧ್ಯಕ್ಷ ಅಜಿತ್ ಆಚಾರ್, ನಿಯೋಜಿತ ಅಧ್ಯಕ್ಷ ಮನೋಹರ್ ಪೂಜಾರಿ, ಸಂಚಾಲಕ ಅಮೃತ್ ಜೋಗಿ, ಪಂಚವರ್ಣ ಮಹಿಳಾ ಮಂಡಲ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಮತ್ತಿತರರು ಉಪಸ್ಥಿತರಿದ್ದರು. ಸಲಹಾ ಸಮಿತಿ ಅಧ್ಯಕ್ಷ ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿದರು.