ಪ್ರಕೃತಿ ಆರಾಧನೆ ಭಗವಂತನಿಗೆ ಪ್ರಿಯ : ಪರಿಸರಸ್ನೇಹಿ ಹಸಿರುಜೀವ ಅಭಿಯಾನದಲ್ಲಿ ಡಾ.ವಿದ್ವಾನ್ ವಿಜಯ್ ಮಂಜರ್ ಅಭಿಪ್ರಾಯ

parisara
ಪರಿಸರಸ್ನೇಹಿ ಹಸಿರುಜೀವ ಅಭಿಯಾನದಲ್ಲಿ ಪಾಂಡೇಶ್ವರ ಯೋಗ ಗುರುಕುಲದ ಮುಖ್ಯಸ್ಥ ವಿದ್ವಾನ್ ಡಾ.ವಿಜಯ್ ಮಂಜರ್ ಗಿಡ ವಿತರಿಸಿದರು
Published on

ವಿಜಯವಾಣಿ ಸುದ್ದಿಜಾಲ ಕೋಟ

ಪ್ರಕೃತಿಯನ್ನು ಆರಾಧಿಸುವ ಕಾರ್ಯ ಭಗವಂತನಿಗೆ ಪ್ರಿಯವಾಗಿದ್ದು, ಪಂಚವರ್ಣ ಸಂಸ್ಥೆಯ ಪರಿಸರ ಪ್ರೇಮ ಶ್ಲಾಘನೀಯ ಎಂದು ಪಾಂಡೇಶ್ವರ ಯೋಗ ಗುರುಕುಲದ ಮುಖ್ಯಸ್ಥ ವಿದ್ವಾನ್ ಡಾ.ವಿಜಯ್ ಮಂಜರ್ ಹೇಳಿದರು.

ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಸುವರ್ಣ ಎಂಟರ್‌ಪ್ರೈಸಸ್ ಬ್ರಹ್ಮಾವರ ಮಣೂರು ಫ್ರೆಂಡ್ಸ್, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ, ಹಂದಟ್ಟು ಮಹಿಳಾ ಬಳಗ ಕೋಟ, ಸಮುದ್ಯತಾ ಗ್ರೂಪ್ಸ್ ಕೋಟ ಸಹಯೋಗ ಮತ್ತು ಪಾಂಡೇಶ್ವರ ಸಹಕಾರಿ ಹಾಲು ಉತ್ಪಾದಕರ ಮಹಿಳಾ ಸಂಘದ ಸಂಯೋಜನೆಯೊಂದಿಗೆ ಭಾನುವಾರ 213ನೇ ಪರಿಸರಸ್ನೇಹಿ ಹಸಿರುಜೀವ ಅಭಿಯಾನದಲ್ಲಿ ಮಾತನಾಡಿದರು.

ಸ್ಥಳೀಯರಿಗೆ ಗಿಡಗಳನ್ನು ವಿತರಿಸಲಾಯಿತು. ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ಅಧ್ಯಕ್ಷ ಅರವಿಂದ ಶರ್ಮ, ಪ್ರಮುಖರಾದ ನವೀನ್ ಹೊಳ್ಳ, ಪಾಂಡೇಶ್ವರ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆ ಶಾಂತಾ ಎಸ್.ಭಟ್, ಸಂಘದ ಸಿಇಒ ಶ್ಯಾಮಲ ಪೂಜಾರಿ, ಪಾಂಡೇಶ್ವರ ಗ್ರಾಪಂ ಸದಸ್ಯೆ ಸುಜಾತಾ ಪೂಜಾರಿ, ಪಂಚರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್, ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್, ಹಾಲು ಉತ್ಪಾದಕರ ಸಂಘದ ಉಪಾಧ್ಯಕ್ಷೆ ಜೂಡಿತ್ ಪಿಕಾರ್ಡ್ ಉಪಸ್ಥಿತರಿದ್ದರು. ಪಂಚವರ್ಣ ಯುವಕ ಮಂಡಲ ಕಾರ್ಯಾಧ್ಯಕ್ಷ ರವೀಂದ್ರ ಕೋಟ ಸ್ವಾಗತಿಸಿದರು. ಮಹಿಳಾ ಮಂಡಲ ಸಂಚಾಲಕಿ ಸುಜಾತಾ ಬಾಯರಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net