ಶಕ್ತಿ ಯೋಜನೆಯಿಂದ ಆರ್ಥಿಕ ಚಟುವಟಿಕೆ ಹೆಚ್ಚಳ: ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಬಣ್ಣನೆ

06
Published on

ಉಳ್ಳಾಲ: ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯಲ್ಲಿ 500 ಕೋಟಿ ಮಹಿಳೆಯರು ಉಚಿತವಾಗಿ ರಾಜ್ಯ, ಜಿಲ್ಲೆ, ವಿವಿಧ ಪ್ರದೇಶಗಳಲ್ಲಿ ಸಂಚರಿಸಿದ್ದು, ಆರ್ಥಿಕ ಚಟುವಟಿಕೆ ಹೆಚ್ಚಾಗಿದೆ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ತಿಳಿಸಿದರು.

ಪಂಚ ಗ್ಯಾರಂಟಿಯ ಶಕ್ತಿ ಯೋಜನೆಯಡಿ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ 500 ಕೋಟಿ ಮಹಿಳೆಯರು ಉಚಿತ ಪ್ರಯಾಣ ಮಾಡಿದ ಹಿನ್ನೆಲೆಯಲ್ಲಿ ಪಜೀರ್ ಜಂಕ್ಷನ್‌ನಲ್ಲಿ ಸೋಮವಾರ ನಡೆದ ಸಂಭ್ರಮಾಚರಣೆಯಲ್ಲಿ ಮಾತನಾಡಿದರು.

ಕೆಎಸ್‌ಆರ್‌ಟಿಸಿ ಬಸ್‌ನ ಚಾಲಕ ಹಸನ್ ಮತ್ತು ನಿರ್ವಾಹಕ ಮೌಲಾನಾ ಸಾಬ್ ಅವರನ್ನು ಸನ್ಮಾನಿಸಲಾಯಿತು. ಮಂಗಳೂರು ವಿಧಾನಸಭಾ ಕ್ಷೇತ್ರದ ಪಂಚ ಗ್ಯಾರಂಟಿ ಯೋಜನೆಯ ಉಳ್ಳಾಲ ಸಮಿತಿ ಅಧ್ಯಕ್ಷ ರಫೀಕ್ ಅಂಬ್ಲಮೊಗರು, ಜಿಲ್ಲಾ ಉಪಾಧ್ಯಕ್ಷೆ ಸುರೇಖಾ ಚಂದ್ರಹಾಸ್, ಪಜೀರ್ ಗ್ರಾಮ ಪಂಚಾಯಿತಿ ಅಧ್ಯಕ್ಷ ರಫೀಕ್ ಪಜೀರ್, ಮಾಜಿ ಅಧ್ಯಕ್ಷರಾದ ಸೀತಾರಾಮ ಶೆಟ್ಟಿ, ಇಂತಿಯಾಝ್ ಪಜೀರ್, ಅಂಬ್ಲಮೊಗರು ಗ್ರಾಮ ಪಂಚಾಯಿತಿ ಅಧ್ಯಕ್ಷ ಇಕ್ಬಾಲ್ ಅಂಬ್ಲಮೊಗರು, ಹರೇಕಳ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಬದ್ರುದ್ದೀನ್ ಫರೀದ್‌ನಗರ, ಮಂಗಳೂರು ತಾಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಮುಸ್ತಫಾ ಹರೇಕಳ, ಜಬ್ಬಾರ್ ಬೋಳಿಯಾರ್, ಪದ್ಮಾವತಿ ಪೂಜಾರಿ, ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯ ಅಚ್ಯುತ ಗಟ್ಟಿ, ಅಬ್ದುಲ್ ರಹ್ಮಾನ್ ಕೋಡಿಜಾಲ್, ಎ.ಕೆ.ರಹ್ಮಾನ್ ಕೋಡಿಜಾಲ್, ಸಮೀರ್ ಪಜೀರ್, ಲತಾ ತಲಪಾಡಿ, ರೇವತಿ ಕುಂಪಲ, ಲತಾ ಪರಮೇಶ್ವರ್, ಎಲನ್ ಡಿಸೋಜ ಇನ್ನಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net