ಕಲ್ಯಾಣಕ್ಕೆ ಆರ್ಥಿಕ ಕಾರಿಡಾರ್; ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

cms

ವಿಜಯವಾಣಿ ಸುದ್ದಿಜಾಲ ಕಲಬುರಗಿ

ಕಲ್ಯಾಣ ಕರ್ನಾಟಕದ ಪ್ರಗತಿಗೆ ಪೂರಕ ಮೂಲಸೌಕರ್ಯ ಒದಗಿಸಲು ಬೀದರ್-ಬೆಂಗಳೂರು ಮಧ್ಯೆ ಆರ್ಥಿಕ ಕಾರಿಡಾರ್ ಅಭಿವೃದ್ಧಿಪಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಮಂಗಳವಾರ ಆಯೋಜಿಸಿದ್ದ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಅವರು, ಹಿಂದುಳಿದ ಜಿಲ್ಲೆಗಳಲ್ಲಿ ಹೂಡಿಕೆ ಆಕರ್ಷಿಸಿ ಸ್ಥಳೀಯರ ಜೀವನಮಟ್ಟ ಸುಧಾರಣೆ ಜತೆಗೆ ಸುಸ್ಥಿರ ಅಭಿವೃದ್ಧಿಗೆ ಉತ್ತೇಜಿಸಲು ಶ್ರಮಿಸುವುದಾಗಿ ಭರವಸೆ ನೀಡಿದರು.

2002ರಲ್ಲಿ ಡಾ.ಡಿ.ಎಂ.ನಂಜುಂಡಪ್ಪ ವರದಿ ಸಲ್ಲಿಸಿದ ಬಳಿಕ ಆಗಿರುವ ಬದಲಾವಣೆಗಳ ಅಧ್ಯಯನಕ್ಕೆ ಪ್ರಸಕ್ತ ವರ್ಷ ಪ್ರೊ.ಗೋವಿಂದರಾವ್ ಅಧ್ಯಕ್ಷತೆಯಲ್ಲಿ ಉನ್ನತಾಧಿಕಾರ ಸಮಿತಿ ರಚಿಸಿದ್ದು, ರಾಜ್ಯದ ಆರ್ಥಿಕ ಮತ್ತು ಪ್ರಾದೇಶಿಕ ಅಸಮಾನತೆ ಆಧಾರದಲ್ಲಿ ಜಿಲ್ಲೆ ಮತ್ತು ತಾಲೂಕುಗಳನ್ನು ವರ್ಗೀಕರಿಸಿ ಹೊಸ ಸೂಚ್ಯಂಕ ತಯಾರಿಸಲಿದೆ ಎಂದರು.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್​ಡಿಬಿ)ಯಿಂದ 1250 ಕೋಟಿ ಅನುದಾನವನ್ನು ಶಿಕ್ಷಣ ಕ್ಷೇತ್ರಕ್ಕೆ ಮೀಸಲಿಟ್ಟು ಅಕ್ಷರ ಆವಿಷ್ಕಾರ ಜಾರಿಗೊಳಿಸಿ ಶೈಕ್ಷಣಿಕ ವರ್ಷ ಘೊಷಿಸಲಾಗಿದೆ. ಪ್ರಸಕ್ತ ವರ್ಷ 1008 ಪೂರ್ವ ಪ್ರಾಥಮಿಕ ಶಾಲೆಗಳಲ್ಲಿ ಎಲ್​ಕೆಜಿ, ಯುಕೆಜಿ ಹೊಸ ಮಾದರಿ ಪ್ರಾರಂಭಿಸಲಾಗಿದ್ದು, ನಿರೀಕ್ಷೆಗೂ ಮೀರಿ 36,445 ಮಕ್ಕಳು ಪ್ರವೇಶ ಪಡೆದಿದ್ದಾರೆ. ಇದಕ್ಕಾಗಿ ಹೊಸದಾಗಿ 1353 ಅತಿಥಿ ಶಿಕ್ಷಕರು ಹಾಗೂ 892 ಸಹಾಯಕಿಯರನ್ನು ನೇಮಕ ಮಾಡಿಕೊಂಡಿರುವುದಾಗಿ ತಿಳಿಸಿದರು.

ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರಾದ ಡಾ.ಜಿ. ಪರಮೇಶ್ವರ್, ಎಚ್.ಸಿ.ಮಹದೇವಪ್ಪ, ಕೆ.ಎಚ್. ಮುನಿಯಪ್ಪ, ಕೆ.ಜೆ. ಜಾರ್ಜ್, ರಾಮಲಿಂಗಾರಡ್ಡಿ, ಎಚ್.ಕೆ. ಪಾಟೀಲ್, ಬೈರತಿ ಸುರೇಶ, ಪ್ರಿಯಾಂಕ್ ಖರ್ಗೆ, ಕೆಕೆಆರ್​ಡಿಬಿ ಅಧ್ಯಕ್ಷ ಡಾ.ಅಜಯಸಿಂಗ್, ಸಂಸದ ರಾಧಾಕೃಷ್ಣ ದೊಡ್ಡಮನಿ, ಶಾಸಕರಾದ ಅಲ್ಲಮಪ್ರಭು ಪಾಟೀಲ್, ಕನೀಜ್ ಫಾತಿಮಾ, ಬಸವರಾಜ ಮತ್ತಿಮಡು, ಎಂ.ವೈ.ಪಾಟೀಲ್, ಡಾ.ಬಿ.ಜಿ. ಪಾಟೀಲ್, ತಿಪ್ಪಣ್ಣಪ್ಪ ಕಮಕನೂರ, ಶಶೀಲ್ ನಮೋಶಿ, ಜಗದೇವ ಗುತ್ತೇದಾರ್ ಇತರರಿದ್ದರು.

ಕಲ್ಯಾಣಕ್ಕೆ ಆರ್ಥಿಕ ಕಾರಿಡಾರ್; ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

ಸ್ಮಾರ್ಟ್ ಸಿಟಿಗೆ ರೂ.1,685 ಕೋಟಿ: ರಾಜ್ಯ ಸರ್ಕಾರದಿಂದಲೇ 1,685 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕಲಬುರಗಿ ಸ್ಮಾರ್ಟ್ ಸಿಟಿಯಾಗಿ ಅಭಿವೃದ್ಧಿಪಡಿಸಲು ಯೋಚಿಸಲಾಗುತ್ತಿದೆ. ಮಹಾತ್ಮಗಾಂಧಿ ನಗರ ವಿಕಾಸ ಯೋಜನೆ 2.0ರಡಿ ಕಲಬುರಗಿ ಮತ್ತು ಬಳ್ಳಾರಿ ಮಹಾನಗರ ಪಾಲಿಕೆಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗಾಗಿ ತಲಾ 200 ಕೋಟಿ ರೂ. ಒದಗಿಸಲಾಗುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದರು.

ರಾಯಚೂರಲ್ಲಿ ಏಮ್ಸ್​ಗೆ ಒತ್ತಡ: ರಾಯಚೂರಿನಲ್ಲಿ ಏಮ್್ಸ ಸ್ಥಾಪನೆಗೆ ಸರ್ಕಾರ ನೆರವು ಒದಗಿಸಲು ಸಿದ್ಧವಿದ್ದು, ಕೇಂದ್ರದ ಮೇಲೆ ಒತ್ತಡ ಹೇರಲಾಗುವುದು. ರಾಯಚೂರಿನಲ್ಲಿ ನೂತನ ಜವಳಿ ಪಾರ್ಕ್ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಪ್ರಾರಂಭಿಸುವುದರ ಜತೆಗೆ ಸುಸಜ್ಜಿತ ಒಣ ಮೆಣಸಿನಕಾಯಿ ಮಾರುಕಟ್ಟೆಯನ್ನು ಅಂದಾಜು 25 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.

ನಾಗಮಂಗಲ ತನಿಖೆ ನಂತರ ಇನ್ನಷ್ಟು ಕ್ರಮ: ನಾಗಮಂಗಲದ ಅಹಿತಕರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ವರದಿ ಬಂದ ಬಳಿಕ ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದರು. ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡಿದ್ದು, ಘಟನೆಯಲ್ಲಿ ಯಾರ್ಯಾರು ಭಾಗಿಯಾಗಿದ್ದಾರೆ ಎಂಬುದು ತನಿಖೆಯಿಂದ ಬಯಲಿಗೆ ಬರಲಿದೆ. ಇನ್ನು ಶಾಸಕ ಮುನಿರತ್ನ ಅವರನ್ನು ತರಾತುರಿಯಲ್ಲಿ ಬಂಧಿಸಿಲ್ಲ. ಆದರೆ ಯಾದಗಿರಿ ಶಾಸಕರ ವಿರುದ್ಧದ ದೂರಿಗೂ ಇದಕ್ಕೂ ವ್ಯತ್ಯಾಸವಿದೆ ಎಂದು ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಸಮಜಾಯಿಷಿ ನೀಡಿದರು.

ಬಳ್ಳಾರಿ ಜೀನ್ಸ್ ಅಪೇರಲ್ ಪಾರ್ಕ್: ಬಳ್ಳಾರಿಯಲ್ಲಿ ಅಸಂಘಟಿತ ಜೀನ್ಸ್ ಉದ್ದಿಮೆ ಸಂಘಟಿಸಿ ವಿಶ್ವದರ್ಜೆಗೆ ಉನ್ನತೀಕರಿಸಲು ಜೀನ್ಸ್ ಅಪೇರಲ್ ಪಾರ್ಕ್ ಹಾಗೂ ಸಾಮಾನ್ಯ ಸೌಲಭ್ಯ ಕೇಂದ್ರ ಅಭಿವೃದ್ಧಿಪಡಿಸಲಾಗುವುದು. ಬಳ್ಳಾರಿ ಮಾರುಕಟ್ಟೆಯಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಬಯೋ ಸಿಎನ್​ಜಿ ಪ್ಲಾಂಟ್ ಸ್ಥಾಪಿಸಲಾಗುವುದು. ಕೊಪ್ಪಳ ಜಿಲ್ಲೆ ಯಲಬುರ್ಗಾ, ಬಳ್ಳಾರಿ ಸೇರಿ ರಾಜ್ಯದ ಐದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ 50 ಕೋಟಿ ರೂ. ಹಾಗೂ ರಾಯಚೂರಿನಲ್ಲಿ 40 ಕೋಟಿ ರೂ. ವೆಚ್ಚದಲ್ಲಿ ಶೀತಲಗೃಹಗಳನ್ನು ನಿರ್ವಿುಸಲಾಗುವುದು ಎಂದು ಸಿಎಂ ಹೇಳಿದರು.

ಹಿಂದಿನ ಸರ್ಕಾರ ಅಶಿಸ್ತು, ಭ್ರಷ್ಟಾಚಾರ ದಿಂದ ರಾಜ್ಯವನ್ನು ಅಧಃಪತನದತ್ತ ಕೊಂಡೊಯ್ದಿತ್ತು. ಬಜೆಟ್​ನಲ್ಲಿ ಅನುದಾನ ಘೊಷಿಸದೆ ಸಾವಿರಾರು ಕೋಟಿ ರೂ. ಕಾಮಗಾರಿ ತೆಗೆದುಕೊಂಡಿತ್ತು. ಕೇಂದ್ರ ಸರ್ಕಾರವೂ ಹಣ ನೀಡದೆ ವಂಚಿಸಿದೆ. ಈ ಮಧ್ಯೆ ಸರ್ಕಾರ ಗ್ಯಾರಂಟಿಗಳನ್ನು ಅನುಷ್ಠಾನ ಮಾಡಿದೆ. ಕಲ್ಯಾಣ ಕರ್ನಾಟಕಕ್ಕೆ 5000 ಕೋಟಿ ರೂ. ಪ್ರತಿವರ್ಷ ಒದಗಿಸುತ್ತಿದೆ.

| ಸಿದ್ದರಾಮಯ್ಯ ಮುಖ್ಯಮಂತ್ರಿ

ಮಾಗಡಿಯಲ್ಲಿ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ: ಒಂದೇ ಕುಟುಂಬದ ನಾಲ್ವರ ದುರ್ಮರಣ

Share This Article

ದೀಪಾವಳಿಗೆ ಮನೆ ಸ್ವಚ್ಛ ಮಾಡ್ತಾ ಇದ್ದೀರಾ? ಮನೆಯಲ್ಲಿ cockroach ಇದ್ರೆ ಹೀಗೆ ಮಾಡಿ…

ಬೆಂಗಳೂರು: ಅನೇಕ ಜನರು ತಮ್ಮ ಮನೆಯಲ್ಲಿ ಜಿರಳೆಗಳ ( cockroach )  ಸಮಸ್ಯೆಯನ್ನು ಎದುರಿಸುತ್ತಾರೆ. ಅವುಗಳನ್ನು…

Crab Sukka : ಭಾನುವಾರದ ಬಾಡೂಟಕ್ಕೆ ಮಾಡಿ ರುಚಿಯಾದ ಏಡಿ ಸುಕ್ಕ..

ಬೆಂಗಳೂರು: ವಾರದ ಕೊನೆಯಲ್ಲಿ ಮಧ್ಯಾಹ್ನದ ಸಮಯಕ್ಕೆ ರುಚಿಯಾದ ಅಡುಗೆ ಏನಾದರು ಮಾಡುವ ಪ್ಲಾನ್ (Plan)​ ಹಾಕಿಕೊಂಡಿದ್ದೀರಾ?ಆದಿತ್ಯವಾರದಂದು…

ಹಾವು ಕಚ್ಚಿದಾಗ ಮಾಡುವ ಈ ಒಂದು ತಪ್ಪಿನಿಂದ ಪ್ರಾಣ ಹೋಗುತ್ತೆ ಎಚ್ಚರ! ಈ ರೀತಿ ಮಾಡೋದನ್ನು ತಪ್ಪಿಸಿ | Snakes

ಕೊಲ್ಲಂ: ಹಾವುಗಳು ( Snakes ) ಕಚ್ಚಿದ ಸಂದರ್ಭದಲ್ಲಿ ಯಾವ ಹಾವು ಕಚ್ಚಿತ್ತು ಎಂಬುದನ್ನು ತಿಳಿದುಕೊಳ್ಳಲು…