ಶಿರಹಟ್ಟಿ: ಕೇಂದ್ರ ರಸ್ತೆ ನಿಧಿ ಯೋಜನೆ ಭಾರತದಲ್ಲಿ ರಸ್ತೆ ಸೌಕರ್ಯ ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪ್ರಮುಖ ಯೋಜನೆಯಾಗಿದೆ. ಈ ಯೋಜನೆಯ ಮುಖ್ಯ ಉದ್ದೇಶವೆಂದರೆ ದೇಶದಾದ್ಯಂತ ಸುಗಮ ಸಂಚಾರ ವ್ಯವಸ್ಥೆ ನಿರ್ಮಿಸುವುದಾಗಿದೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.
ತಾಲೂಕಿನ ತೊಳಲಿ ಗ್ರಾಮದಲ್ಲಿ ಮಂಗಳವಾರ ಕೇಂದ್ರ ರಸ್ತೆ ನಿಧಿ ಯೋಜನೆಯ (ಸಿಆರ್‌ಐಎಫ್) 6 ಕೋಟಿ ರೂ. ವೆಚ್ಚದಲ್ಲಿ ಗಜೇಂದ್ರಗಡ- ಸೊರಬ ರಾಜ್ಯ ಹೆದ್ದಾರಿ ಸುಧಾರಣೆಗೆ ಚಾಲನೆ ನೀಡಿ ಮಾತನಾಡಿ, ಯೋಜನೆಯಡಿ, ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳನ್ನು ವಿಸ್ತರಿಸುವುದು, ಅವುಗಳ ಗುಣಮಟ್ಟವನ್ನು ಸುಧಾರಿಸುವುದು ಮತ್ತು ಹೊಸ ಹೆದ್ದಾರಿಗಳನ್ನು ನಿರ್ಮಿಸುವುದು ಸೇರಿ ಹಲವಾರು ಕಾಮಗಾರಿಗಳು ನಡೆಯುತ್ತಿವೆ. ರಾಜ್ಯ ಹೆದ್ದಾರಿಗಳನ್ನು ಸುಧಾರಿಸುವ ಮೂಲಕ ಗ್ರಾಮೀಣ ಪ್ರದೇಶಗಳನ್ನು ಮುಖ್ಯವಾಹಿನಿಗೆ ಸಂಪರ್ಕಿಸುವುದು ಯೋಜನೆಯ ಇನ್ನೊಂದು ಗುರಿಯಾಗಿದೆ ಎಂದರು
ಗ್ರಾಮ ಪಂಚಾಯಿತಿ ಅಧ್ಯಕ್ಷ ಫಕೀರಪ್ಪ ನರಸಮ್ಮನವರ, ಶಿವನಗೌಡ ಕಂಠೀಗೌಡ್ರು, ಸದಸ್ಯರಾದ ಹೇಮಕ್ಕ ಹಿರೇಮಠ, ನಿಂಗಪ್ಪ ನಾಯಕ, ಮಹೇಶ ತೆಗ್ಗಿನಮನಿ, ಚೆನ್ನವೀರಗೌಡ ತೆಗ್ಗಿನಮನಿ, ವೀರೇಶ ತಂಗೋಡ, ಸಂತೋಷ ಹಿರೇಮಠ, ವಿಶ್ವನಾಥ ಪಾಟೀಲ, ಪ್ರಶಾಂತ ಹೊಸಮನಿ ಇತರರಿದ್ದರು.
ಕೇಂದ್ರದ ನಿಧಿಯಿಂದ ಆರ್ಥಿಕ ಬೆಳವಣಿಗೆ ಸಾಧ್ಯ

You Might Also Like
ಈ ನಕ್ಷತ್ರದಲ್ಲಿ ಹುಟ್ಟಿದ ಗಂಡಸರು ತಮ್ಮ ಪತ್ನಿಯರನ್ನು ರಾಜಕುಮಾರಿಯಂತೆ ನೋಡಿಕೊಳ್ಳುತ್ತಾರೆ! Birth of Stars
Birth of Stars : ಹುಟ್ಟಿದ ತಕ್ಷಣ ಜನ್ಮ ದಿನಾಂಕ ಹಾಗೂ ಹುಟ್ಟಿದ ಗಳಿಗೆಯನ್ನು ಬರೆದಿಡಲಾಗುತ್ತದೆ.…
ಕಲ್ಲಂಗಡಿ ಹಣ್ಣು ತಿಂದು ಸಿಪ್ಪೆ ಬಿಸಾಡ್ತೀರಾ? ಹಣ್ಣಿನ ಸಿಪ್ಪೆ ತಿಂದ್ರೆ ಪುರುಷರಿಗೆ ಆ ಸಾಮರ್ಥ್ಯ ಹೆಚ್ಚಾಗುವುದು! watermelon
watermelon: ಬೇಸಿಗೆ ಎಂದ ತಕ್ಷಣ ನಮಗೆ ನೆನಪಿಗೆ ಬರುವುದು ಕಲ್ಲಂಗಡಿ ಹಣ್ಣು. ನಾವು ಕಲ್ಲಂಗಡಿ ಹಣ್ಣುಗಳನ್ನು…
ಕುತ್ತಿಗೆ-ತಲೆ ನೋವನ್ನು ನಿರ್ಲಕ್ಷಿಸುತ್ತಿದ್ದೀರಾ?; ಎಚ್ಚರದಿಂದಿರಿ.. ಇದು ಅಪಾಯದ ಮುನ್ಸೂಚನೆ | Health Tips
ಕುತ್ತಿಗೆ ಮತ್ತು ಭುಜದ ಸುತ್ತಲಿನ ಪ್ರದೇಶದಲ್ಲಿನ ನೋವನ್ನು ನಿರ್ಲಕ್ಷಿಸುವ ತಪ್ಪನ್ನು ಮಾಡಬೇಡಿ. ಏಕೆಂದರೆ ಇದು ಸರ್ವಿಕಲ್…