

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಅಕ್ರಮಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಾಜಿ ಸಚಿವ ಬಿ. ನಾಗೇಂದ್ರ ಅವರ ಆಪ್ತ ಸಹಾಯಕ ಹರೀಶ್ನನ್ನು ಬಂಧಿಸಿದ್ದಾರೆ.
ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಅಕ್ರಮಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಜುಲೈ 10ರಂದು ಮಾಜಿ ಸಚಿವ ನಾಗೇಂದ್ರ, ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ, ಕಾಂಗ್ರೆಸ್ ಶಾಸಕ ಬಸನ್ಗೌಡ ದದ್ದಲ್ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ನಡೆದಿದೆ ಎಂಬ ಆರೋಪ ಕೇಳಿ ಬಂದಿದ್ದು, ಹೆಚ್ಚಿನ ವಿಚಾರಣೆಯ ಅಗತ್ಯವಿರುವ ಕಾರಣ ಅಧಿಕಾರಿಗಳು ಮಾಜಿ ಸಚಿವ ನಾಗೇಂದ್ರ ಅವರ ಆಪ್ತ ಅಹಾಯಕ ಹರೀಶ್ನನ್ನು ವಶಕ್ಕೆ ಪಡೆದಿದ್ದಾರೆ. ಮತ್ತಷ್ಟು ಸುದ್ದಿ ನಿರೀಕ್ಷಿಸಲಾಗಿದೆ...