More

    500 ಕೋಟಿ ರೂ. ವಂಚಿಸಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಇಡಿ ಬಲೆಗೆ

    ಬೆಂಗಳೂರು: ಬಹುಕೋಟಿ ವಂಚನೆ ಮತ್ತು ಅಕ್ರಮ ಹಣಕಾಸು ವಹಿವಾಟು ಆರೋಪದ ಮೇಲೆ ರಿಯಲ್ ಎಸ್ಟೇಟ್ ಉದ್ಯಮಿನ್ನು ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಬಂಧಿಸಿದ್ದಾರೆ.

    ಮುಂಬೈ ಮೂಲದ ಕರಣ್ ಗ್ರೂಪ್ ಬಿಲ್ಡರ್ಸ್‌ ಆ್ಯಂಡ್ ಡೆವಲಪರ್ಸ್‌ ಕಂಪನಿಯ ಮಹೇಶ್ ಬಿ. ಓಝ ಬಂಧಿತ. ರಿಯಲ್ ಎಸ್ಟೇಟ್ ಉದ್ಯಮಕ್ಕೆ ಹಲವರಿಗೆ 500 ಕೋಟಿ ರೂ. ಹೂಡಿಕೆ ಮಾಡಿಸಿಕೊಂಡು ವಂಚನೆ ಮಾಡಿದ್ದ. ಈ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿ ಮಹೇಶ್‌ನನ್ನು ಬಂಧಿಸಿ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆ ಸಲುವಾಗಿ 10 ದಿನಗಳ ಕಾಲ ಕಸ್ಟಡಿಗೆ ಪಡೆಯಲಾಗಿದೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ.

    ಕರಣ್ ಗ್ರೂಪ್ ಬಿಲ್ಡರ್ಸ್‌ ಆ್ಯಂಡ್ ಡೆವಲಪರ್ಸ್‌ ಹೆಸರಿನಲ್ಲಿ ಹಲವರಿಂದ ವಿವಿಧ ಯೋಜನೆಗೆ ಹಣ ಹೂಡಿಕೆ ಮಾಡಿಸಿಕೊಂಡಿದ್ದರು. ಹೂಡಿಕೆ ಹಣವನ್ನು ಹೂಡಿಕೆ ಮಾಡಿರುವುದಾಗಿ ಮತ್ತು ಕಮಿಷನ್ ನೀಡಿರುವುದಾಗಿ ದಾಖಲೆ ಸೃಷ್ಟಿಸಿದ್ದ. ಈ ಬಗ್ಗೆ ಕರ್ನಾಟಕದ ವಿವಿಧೆಡೆ ಹಲವು ಎಫ್​ಐಆರ್ ದಾಖಲಾಗಿದ್ದವು. ಅಂದಾಜು 526 ಕೋಟಿ ರೂ. ವಂಚನೆ ಮಾಡಿರುವುದಾಗಿ ಆತನ ವಿರುದ್ಧ ಆರೋಪ ಕೇಳಿಬಂದಿತ್ತು. ಸಿಐಡಿ ಅಧಿಕಾರಿಗಳು ಆರೋಪಿ ಮಹೇಶ್‌ನನ್ನು ಬಂಧಿಸಿ ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ತನಿಖೆ ವೇಳೆ ಆರೋಪಿ ಮಹೇಶ್ ಬೋಪಕುಮಾರ್ ಓಝ ಹೆಸರಿನಲ್ಲಿ ಬೇರೆ ಕಂಪನಿಯಲ್ಲಿ 121.5 ಕೋಟಿ ರೂ.ಅನ್ನು ಹೂಡಿಕೆ ಮಾಡಿ ಮತ್ತೊಂದು ಕಂಪನಿ ನಡೆಸುತ್ತಿರುವುದು ಬೆಳಕಿಗೆ ಬಂದಿತ್ತು. ಅಕ್ರಮ ಹಣಕಾಸು ವಹಿವಾಟು ಆರೋಪದ ಮೇಲೆ ಪ್ರಕರಣ ದಾಖಲು ಮಾಡಿಕೊಂಡು ಆರೋಪಿ ಮಹೇಶ್‌ನನ್ನು ಬಂಧಿಸಲಾಗಿದೆ ಎಂದು ಇಡಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts