More

    ಬಳ್ಳಾರಿ ಶಾಸಕ ಭರತ್‌ರೆಡ್ಡಿ ಮನೆ ಮೇಲೆ ಇಡಿ ದಾಳಿ

    ಬಳ್ಳಾರಿ ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಬಳ್ಳಾರಿ ನಗರ ಶಾಸಕ ನಾರಾ ಭರತ್‌ರೆಡ್ಡಿ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಶನಿವಾರ ಏಕಾಏಕಿ ದಾಳಿ ನಡೆಸಿದ್ದಾರೆ.

    ಬೆಂಗಳೂರಿನಿಂದ ಬಂದಿದ್ದ 20ಕ್ಕೂ ಹೆಚ್ಚು ಇಡಿ ಅಧಿಕಾರಿಗಳ ತಂಡ ಬೆಳಗ್ಗೆ 6.30ಕ್ಕೆ ಬಳ್ಳಾರಿ ನಗರದ ನೆಹರು ಕಾಲನಿಯ ಅವರ ನಿವಾಸ ಮತ್ತು ಕಚೇರಿ ಮೇಲೆ ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲನೆ ನಡೆಸಿದರು.

    ಭರತ್ ರೆಡ್ಡಿ ಮತ್ತು ಅವರ ತಂದೆ ಮಾಜಿ ಶಾಸಕ ಸೂರ್ಯನಾರಾಯಣ ರೆಡ್ಡಿ ಸೇರಿದಂತೆ ಅವರ ಸಂಬಂಧಿಕರ ಮನೆ ಮೇಲೆ ದಾಳಿ ನಡೆದಿದೆ. ಬಳ್ಳಾರಿ ಅಲ್ಲದೆ ಬೆಂಗಳೂರಿನಲ್ಲಿರುವ ಭರತ್ ರೆಡ್ಡಿ ನಿವಾಸ, ಚೆನ್ನೈನಲ್ಲಿರುವ ಕಚೇರಿ ಮೇಲೂ ಇಡಿ ಅಧಿಕಾರಿಗಳ ದಾಳಿ ನಡೆಸಿದ್ದಾರೆ.


    ಗ್ರಾನೈಟ್ ಉದ್ಯಮದಲ್ಲಿ ತೊಡಗಿಸಿರುವ ರೆಡ್ಡಿ ಕುಟುಂಬಸ್ಥರಿಗೆ ಸಂಬಂಧಿಸಿದಂತೆ ಕೊಪ್ಪಳ, ಆಂಧ್ರ ಪ್ರದೇಶದ ವಿವಿಧ ಭಾಗಗಳಲ್ಲಿ ಗ್ರಾನೈಟ್ ಕ್ವಾರಿಗಳಿವೆ ಎಂದು ತಿಳಿದುಬಂದಿದೆ.


    ಇನ್ನು ಶಾಸಕ ಭರತ್ ರೆಡ್ಡಿ ತಮ್ಮ ಜನ್ಮದಿನದ ಅಂಗವಾಗಿ ಅವರ ಬೆಂಬಲಿಗರು ವಿಧಾನಸಭೆ ಚುನಾವಣೆ ಪೂರ್ವದಲ್ಲೇ ನಗರದಲ್ಲಿ 70 ಸಾವಿರಕ್ಕೂ ಅಧಿಕ ಕುಕ್ಕರ್‌ಗಳನ್ನು ವಿತರಿಸಿದ್ದರು.


    ಬೆಂಗಳೂರಿನ ಪಾಸಿಂಗ್ ಹೊಂದಿರುವ ವಾಹನಗಳಲ್ಲಿ ಆಗಮಿಸಿದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಭರತ್ ರೆಡ್ಡಿ ಮನೆ, ಕಚೇರಿ ಮೇಲೆ ಇಡಿ ದಾಳಿ ನಡೆಸಿ ದಾಖಲನೆಗಳನ್ನು ಪರಿಶೀಲಿಸುತ್ತಿದೆ. ಈ ವೇಳೆ ಶಾಸಕರ ಕಚೇರಿ ಮುಂದೆ ಜಮಾವಣೆಯಾದ ಕಾಂಗ್ರೆಸ್ ನಾಯಕರ ದಂಡು. ಇದೊಂದು ರಾಜಕಿಯ ಪ್ರೇರಿತ ದಾಳಿ. ಬಿಜೆಪಿ ಇಡಿ ಅಧಿಕಾರಿಗಳನ್ನು ಛೂ ಬಿಟ್ಟಿದೆ. ಮುಂಬರುತ್ತಿರುವ ಲೊಕಸಭಾ ಚುನಾವಣೆ ದೃಷ್ಠಿಯಿಂದ ಕಟ್ಟಿ ಹಾಕುವ ಕೆಲಸ ಮಾಡಲಾಗುತ್ತಿದೆ. ಇಂತಹ ಷ್ಯಡ್ಯಂತ್ರ ಮಾಡಿ ಭರತ್ ರೆಡ್ಡಿ ಅವರನ್ನು ಕುಗ್ಗಿಸುವ ಪ್ರಯತ್ನ ನಡೆಯುತ್ತಿದೆ ಎಂದು ಕಾಂಗ್ರೆಸ್‌ನ ಮುಖಂಡರು ಆರೋಪಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts