More

    ಅಬಕಾರಿ ನೀತಿ ಜಾರಿಯಲ್ಲಿ ಅಕ್ರಮ ಆರೋಪ​: ದೆಹಲಿ, ಪಂಜಾಬ್​ ಸೇರಿದಂತೆ 35 ಕಡೆಗಳಲ್ಲಿ ಇಡಿ ದಾಳಿ

    ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ)ವು ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ಪಂಜಾಬ್​ ಸೇರಿದಂತೆ ಇತರೆ ರಾಜ್ಯಗಳ 35 ಸ್ಥಳಗಳ ಮೇಲೆ ಶುಕ್ರವಾರ (ಅ.7) ದಾಳಿ ನಡೆಸಿದೆ.

    ದಾಳಿಯ ಬೆನ್ನಲ್ಲೇ ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​ ಟ್ವೀಟ್​ ಮಾಡಿದ್ದು, ಕಳೆದ ಮೂರು ತಿಂಗಳಲ್ಲಿ 500ಕ್ಕು ಹೆಚ್ಚು ದಾಳಿ ನಡೆದಿದೆ. ದೆಹಲಿ ಉಪಮುಖ್ಯಮಂತ್ರಿ ಮನೀಶ್​ ಸಿಸೋಡಿಯಾ ಮನೆಯಲ್ಲಿ ಸಾಕ್ಷಿ ಸಂಗ್ರಹಿಸಲು ಸಿಬಿಐ ಮತ್ತು ಇಡಿ ಅಧಿಕಾರಿಗಳು ದಿನದ 24 ಗಂಟೆಯು ಕೆಲಸ ಮಾಡುತ್ತಿದ್ದಾರೆ. ಆದರೆ, ಈವರೆಗೂ ಏನೂ ಸಿಕ್ಕಿಲ್ಲ. ಏಕೆಂದರೆ, ಯಾವುದೇ ಅಕ್ರಮ ನಡೆದಿಲ್ಲ. ಕೊಳಕು ರಾಜಕೀಯದಿಂದ ಅನೇಕ ಅಧಿಕಾರಿಗಳ ಅಮೂಲ್ಯ ಸಮಯವನ್ನು ಹಾಳು ಮಾಡಲಾಗುತ್ತಿದೆ. ಹೀಗಿರುವಾಗ ಅಂತಹ ದೇಶವು ಹೇಗೆ ಪ್ರಗತಿ ಹೊಂದುತ್ತದೆ? ಎಂದು ಪ್ರಶ್ನಿಸುವ ಮೂಲಕ ಕೇಂದ್ರ ಸರ್ಕಾರವನ್ನು ಕೇಜ್ರಿವಾಲ್​ ಟೀಕಿಸಿದ್ದಾರೆ.

    ಸದ್ಯ ಒಟ್ಟು 35 ಕಡೆಗಳಲ್ಲಿ ದಾಳಿ ನಡೆಸಿರುವ ಇಡಿ, ಅಕ್ರಮ ಹಣ ವರ್ಗಾವಣೆ ಸಂಬಂಧ ದಾಖಲೆಗಳ ಪರಿಶೀಲನೆ ನಡೆಸುತ್ತಿದೆ.

    ಏನಿದು ಕೇಸ್​?
    ದೆಹಲಿ ಸರ್ಕಾರ 2021-22ನೇ ಸಾಲಿನ ಅಬಕಾರಿ ನೀತಿಯನ್ನು ರೂಪಿಸಿತ್ತು. ಈ ನೀತಿಯ ಅನ್ವಯ 468 ಖಾಸಗಿ ಬಾರ್‌ಗಳಿಗೆ ಅನುಮತಿ ನೀಡಲಾಗಿತ್ತು. ಈ ಅನುಮತಿ ನೀಡುವ ಸಮಯದಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿರುವ ಆರೋಪ ಕೇಳಿಬಂದಿದೆ. ಈ ಕುರಿತು ದೆಹಲಿಯ ಉಪರಾಜ್ಯಪಾಲ ವಿ.ಕೆ.ಸಕ್ಸೇನಾ ಅವರು ಕಳೆದ ಸಿಬಿಐ ತನಿಖೆಗೆ ಶಿಫಾರಸು ಮಾಡಿದ್ದರು. ಸಚಿವ ಮನೀಶ್ ಸಿಸೋಡಿಯಾ ಕೂಡ ಇದಕ್ಕೆ ಸಮ್ಮತಿ ಸೂಚಿಸಿದ್ದರು.

    ಇದೇ ಸಂದರ್ಭದಲ್ಲಿ 11 ಅಬಕಾರಿ ಅಧಿಕಾರಿಗಳನ್ನು ಕೂಡ ಅಮಾನತು ಮಾಡಲಾಗಿತ್ತು. ಮದ್ಯದ ಲೈಸೆನ್ಸ್‌ ಪಡೆದುಕೊಂಡವರಿಗೆ ಟೆಂಡರ್‌ ನಂತರ ಅನೇಕ ಸವಲತ್ತುಗಳನ್ನು ನೀಡಲಾಗಿದೆ. ಇದರಿಂದಾಗಿ ಸರ್ಕಾರದ ಬೊಕ್ಕಸಕ್ಕೆ ನಷ್ಟವಾಗಿದೆ ಎಂದು ತನಿಖೆಯಿಂದ ತಿಳಿದುಬಂದಿದೆ. ಮದ್ಯದ ವ್ಯಾಪಾರಿ ಸಮೀರ್ ಮಹೇಂದ್ರು ಅವರು ಸಿಸೋಡಿಯಾ ಅವರ ಸಹಚರರಿಗೆ 5 ಕೋಟಿ ರೂ ಪಾವತಿಸಿದ್ದಾರೆ ಎಂದು ಸಿಬಿಐ 2021-22ರ ಅಬಕಾರಿ ನೀತಿ ರಚನೆ ಮತ್ತು ಅನುಷ್ಠಾನದ ಅಡಿ ಎಫ್‌ಐಆರ್​ ದಾಖಲಿಸಿದೆ. ಈ ಪ್ರಕರಣದಲ್ಲಿ ಒಟ್ಟು 13 ಜನರ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದ್ದು, ಈ ಪೈಕಿ ಮನೀಷ್ ಸಿಸೋಡಿಯಾ ಮೊದಲ ಆರೋಪಿಯಾಗಿದ್ದಾರೆ. (ಏಜೆನ್ಸೀಸ್​)

    VIDEO| ರೈಲಿನ ಮಹಿಳಾ ಮೀಸಲು ಬೋಗಿಯಲ್ಲಿ ಜಡೆ ಜಗಳ: ಸಮಸ್ಯೆ ಬಗೆಹರಿಸಲು ಬಂದ ಲೇಡಿ ಪೊಲೀಸ್​ಗೂ ಥಳಿತ

    ರಾಜ್ಯದಲ್ಲಿ 6ನೇ ದಿನದ ಭಾರತ್​ ಜೋಡೋ ಯಾತ್ರೆ ಆರಂಭ: ಮೊಳಗಿದ ಗೌಡರ ಗೌಡ ರಾಹುಲ್ ಗೌಡ ಘೋಷಣೆ

    ನಮ್ಮ ಕನ್ನಡ ಸಿನಿಮಾ ಮಂದಿಗೆ ನಾಚಿಕೆ ಆಗ್ಬೇಕು: ಕಲಾವಿದರ ವಿರುದ್ಧ ಗುಡುಗಿದ ನಟ ಜಗ್ಗೇಶ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts